ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Darshan: ನಟ ದರ್ಶನ್‌ ಗ್ಯಾಂಗ್‌ಗೆ ಢವ ಢವ; ಇಂದು ಕೇಸ್ ಚಾರ್ಜ್​ಫ್ರೇಮ್ ಸಲ್ಲಿಕೆ

ನಿನ್ನೆಯಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi ) ಇನ್‌ಸ್ಟಾದಲ್ಲಿ ಪ್ರಿಯ ಕಮಲದ ಹೂ ಹಿಡಿದ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ, ನಮಗೆ ಕಾಣದೇ ಇರುವುದು ಬಹಳಷ್ಟಿದೆ, ಆದ್ದರಿಂದ ಯಾವಾಗಲೂ ರಕ್ಷಣೆಗಾಗಿ ಪ್ರಾರ್ಥಿಸಿ ಎಂಬ ಸಂದೇಶದೊಂದಿಗೆ ಸ್ಟೋರಿ ಪೋಸ್ಟ್ ಮಾಡಿದ್ದರು. . ಇಂದು ಕೋರ್ಟ್​ನಲ್ಲಿ (Court) ಕೊಲೆ ಕೇಸ್​ ಸಂಬಂಧ ವಿಚಾರಣೆ ನಡೆಯಲಿದ್ದು, ಕೊಲೆ ಪ್ರಕರಣದ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ ಎನ್ನಲಾಗಿದೆ.

darshan

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳ ಮೇಲೆ ಆರೋಪ ನಿಗದಿಯಾಗಲಿದ್ದು ಬೆಂಗಳೂರಿನ ಸಿಸಿಹೆಚ್ ನ್ಯಾಯಾಲಯಕ್ಕೆ ಡಿಗ್ಯಾಂಗ್ ಇಂದು (ನವೆಂಬರ್‌ 3) ಹಾಜರಾಗಲಿದೆ. ಇಂದು ಕೋರ್ಟ್​ನಲ್ಲಿ (Court) ಕೊಲೆ ಕೇಸ್​ ಸಂಬಂಧ ವಿಚಾರಣೆ ನಡೆಯಲಿದ್ದು, ಕೊಲೆ ಪ್ರಕರಣದ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ ಎನ್ನಲಾಗಿದೆ.

ಆರೋಪ ನಿಗದಿಯ ಬಳಿಕ ಬಳಿಕ ಟ್ರಯಲ್‌ಗೂ ದಿನಾಂಕ ಫಿಕ್ಸ್ ಆಗಲಿದೆ ಎನ್ನಲಾಗಿದೆ. ದರ್ಶನ್ ಕಾನೂನು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂದರ್ಭದಲ್ಲಿ ನಿನ್ನೆಯಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi ) ಇನ್‌ಸ್ಟಾದಲ್ಲಿ ಮಹತ್ವದ ಸಂದೇಶವನ್ನು ಪೋಸ್ಟ್ ಮಾಡಿದ್ದರು.

ಕಾಮಾಕ್ಯ ದೇವಿಯ ದೇವಸ್ಥಾನದಲ್ಲಿ ದೇವಿಗೆ ಪ್ರಿಯ ಕಮಲದ ಹೂ ಹಿಡಿದ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ, ನಮಗೆ ಕಾಣದೇ ಇರುವುದು ಬಹಳಷ್ಟಿದೆ, ಆದ್ದರಿಂದ ಯಾವಾಗಲೂ ರಕ್ಷಣೆಗಾಗಿ ಪ್ರಾರ್ಥಿಸಿ ಎಂಬ ಸಂದೇಶದೊಂದಿಗೆ ಸ್ಟೋರಿ ಪೋಸ್ಟ್ ಮಾಡಿದ್ದರು.

ದೋಷಾರೋಪ ಒಪ್ಪಿಕೊಂಡ್ರೆ ಆರೋಪಿಗಳಿಗೆ ಶಿಕ್ಷೆ ಪ್ರಕಟ

ನಟ ದರ್ಶನ್​, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಇಂದು ಕೋರ್ಟ್​ಗೆ ಕಡ್ಡಾಯವಾಗಿ ಹಾಜರಾಗಬೇಕಿದೆ. ಒಂದು ವೇಳೆ ದೋಷಾರೋಪ ಒಪ್ಪಿಕೊಂಡ್ರೆ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

darshan

ಇದನ್ನೂ ಓದಿ: Actor Darshan: ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ, ʼಉಮೇಶ್‌ ರೆಡ್ಡಿಗೆ ಕೊಟ್ಟ ಸೌಲಭ್ಯ ದರ್ಶನ್‌ಗೆ ಏಕಿಲ್ಲ?ʼ ಎಂದ ವಕೀಲರು

ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಪೊಲೀಸರು ಕಲೆ ಹಾಕಿರುವ ಟೆಕ್ನಿಕಲ್ ಎವಿಡೆನ್ಸ್​ಗಳು ದರ್ಶನ್​ಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸದ್ಯ ದರ್ಶನ್ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಹಿಂದೆ ದರ್ಶನ್‌ಗೆ ಜಾಮೀನು ಕೊಡಿಸಲು ವಿಜಯಲಕ್ಷ್ಮಿ ಕಾನೂನು ಹೋರಾಟದ ಜೊತೆ ದೇವರಿಗೆ ಹರಕೆ ಹೊತ್ತಿದ್ದರು. ಪೂಜೆ ಪುನಸ್ಕಾರ ಸಲ್ಲಿಸಿದ್ದರು. ಕಾಮಾಕ್ಯ ದೇವಿ ದರ್ಶನ ಮಾಡಿದ್ದರು. ಇದೀಗ ದರ್ಶನ್ ಪ್ರಕರಣದಲ್ಲಿ ಮಹತ್ವದ ಘಟ್ಟ ತಲುಪಿದೆ.

ಸಾಕ್ಷ್ಯಗಳ ವಿಚಾರಣೆ

ಒಂದೊಮ್ಮೆ ಆರೋಪಿಗಳು ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ಸಾಕ್ಷ್ಯಗಳ ವಿಚಾರಣೆಗೆ ದಿನಾಂಕವನ್ನು ನಿಗದಿ ಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಸಾಕಷ್ಟು ಸಂಖ್ಯೆಯ ಸಾಕ್ಷ್ಯಗಳು ಇರುವ ಕಾರಣ ಸಹಜವಾಗಿಯೇ ಎಲ್ಲರ ವಿಚಾರಣೆ, ಮರು ವಿಚಾರಣೆಗಳಿಗೆ ಸುಮಾರು ಒಂದಿರಂದ ಎರಡು ವರ್ಷ ಸಮಯ ಹಿಡಿಯುವ ಸಾಧ್ಯತೆ ಇದೆ.

ದರ್ಶನ್ ವಿರುದ್ಧ ಯಾವ ಯಾವ ಆರೋಪಗಳನ್ನು ಹೊರಿಸಲಿದ್ದಾರೆ ಎಂಬುದು ಕುತೂಹಲಕಾರಿ ವಿಷಯವಾಗಿದೆ. ಈಗ ಜೈಲಿನಲ್ಲಿರುವ ಏಳು ಜನರು ಮಾತ್ರವೇ ಅಲ್ಲದೆ ಪ್ರಕರಣದ ಎಲ್ಲ ಆರೋಪಿಗಳ ಮೇಲೂ ದೋಷಾರೋಪದ ನಿಗದಿ ಆಗಲಿದೆ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಜೈಲಲ್ಲಿ ಕನಿಷ್ಠ ಸೌಲಭ್ಯ ಸಿಗುತ್ತಿಲ್ವಾ?; ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಏನಿದೆ?

ಇವರಲ್ಲಿ ಕೆಲವರ ಹೆಸರನ್ನು ಕೈಬಿಡುವ ಸಾಧ್ಯತೆಯೂ ಸಹ ಇದೆ.ದರ್ಶನ್ ಪರ ವಕೀಲರು ಈ ಹಿಂದೆಯೇ ವಿಚಾರಣೆ ವೇಳೆ ಶೀಘ್ರವಾಗಿ ದೋಷಾರೋಪ ನಿಗದಿ ಮಾಡಿ ಸಾಕ್ಷ್ಯಗಳ ವಿಚಾರಣೆ ಆರಂಭ ಮಾಡುವಂತೆ ಒತ್ತಾಯ ಮಾಡಿದ್ದರು. ಆದರೆ ಸರ್ಕಾರಿ ವಕೀಲರು ದೋಷಾರೋಪ ನಿಗದಿಗೆ ಸಮುಯ ಕೇಳಿದ್ದರು. ದರ್ಶನ್ ಪರ ವಕೀಲರು, ತಾವು ವಿಚಾರಣೆ ಎದುರಿಸಿಯೇ ನ್ಯಾಯಾಲಯದಿಂದ ಹೊರಬರುವುದಾಗಿ ಹೇಳಿದ್ದರು. ಅಲ್ಲದೆ, ನ್ಯಾಯಾಧೀಶರು ಸಹ, ಎರಡೂ ಕಡೆಯವರು ಸಾಕ್ಷ್ಯಗಳ ವಿಚಾರಣೆಗೆ ಸಹಕರಿಸಬೇಕು ಎಂದು ಮನವಿಯನ್ನು ಸಹ ಮಾಡಿದ್ದರು.

Yashaswi Devadiga

View all posts by this author