ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Actor Darshan: ಜೈಲಿನಲ್ಲಿ ನಟ ದರ್ಶನ್‌ಗೆ ಬೆನ್ನು ನೋವು; ಫಿಸಿಯೋಥೆರಪಿ ಚಿಕಿತ್ಸೆ ಆರಂಭ

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ ಅವರಿಗೆ ನ್ಯಾಯಾಲಯದ ಸೂಚನೆಯಂತೆ ಜೈಲಿನಲ್ಲಿಯೇ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.

ಜೈಲಿನಲ್ಲಿ ನಟ ದರ್ಶನ್‌ಗೆ ಬೆನ್ನು ನೋವು; ಫಿಸಿಯೋಥೆರಪಿ ಚಿಕಿತ್ಸೆ ಆರಂಭ

ನಟ ದರ್ಶನ್‌ -

Yashaswi Devadiga
Yashaswi Devadiga Nov 11, 2026 10:35 AM

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy case) ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಫಿಸಿಯೋಥೆರಪಿ ( Physiotherapy Treatment )ಚಿಕಿತ್ಸೆ ನೀಡಲಾಗುತ್ತಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ ಅವರಿಗೆ ನ್ಯಾಯಾಲಯದ ಸೂಚನೆಯಂತೆ ಜೈಲಿನಲ್ಲಿಯೇ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರ ಬೆನ್ನು ನೋವಿನ ಸಮಸ್ಯೆಗೆ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಜೈಲಾಧಿಕಾರಿಗಳು ವೈದ್ಯರಿಗೆ ಮನವಿ ಮಾಡಿದ್ದು, ಅದರಂತೆ ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Bigg Boss Kannada 13: ಮಂಜು ಎಂಟ್ರಿಗೆ ಯಶಸ್ ಫುಲ್‌ ಸೈಲೆಂಟ್‌! ಇಡೀ ಮನೆ ಅಲ್ಲೋಲ ಕಲ್ಲೋಲ

ಪ್ರತಿ ಎರಡು ಅಥವಾ ಮೂರು ದಿನಗಳಿಗೊಮ್ಮೆ ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಜೈಲಿನ ಬ್ಯಾರಕ್‌ನಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸುಮಾರು ಒಂದೂವರೆ ಗಂಟೆಗಳ ಕಾಲ ಫಿಸಿಯೋಥೆರಪಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಹಿಂದೆಯೂ ಫಿಸಿಯೋಥೆರಪಿ ಪಡೆದಿದ್ದ ದರ್ಶನ್

ದರ್ಶನ್ ಅವರಿಗೆ ಈ ಹಿಂದೆಯೂ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿತ್ತು. ಆಗಲೂ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರಿಂದಲೇ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸಲಾಗಿತ್ತು. ಹಂತ ಹಂತವಾಗಿ ಚಿಕಿತ್ಸೆ ನೀಡಿದ ಪರಿಣಾಮ ಬೆನ್ನು ನೋವಿನ ಸಮಸ್ಯೆ ಕಡಿಮೆಯಾಗಿತ್ತು ಎನ್ನಲಾಗಿದೆ.

ಇದೀಗ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆ ಮುಂದುವರಿಸಲಾಗಿದೆ.

ನ್ಯಾಯಾಲಯದ ಸೂಚನೆಯಂತೆ ಜೈಲಾಧಿಕಾರಿಗಳು ವೈದ್ಯರಿಗೆ ಮನವಿ ಸಲ್ಲಿಸಿದ್ದು, ಅದರಂತೆ ತಜ್ಞ ವೈದ್ಯರು ಜೈಲಿಗೆ ತೆರಳಿ ದರ್ಶನ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹೊರಗೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲಿಯೇ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: Bigg Boss Kannada 13: ಸೌಂದರ್ಯಾ-ಕಿರಣ್ ನಡುವೆ ನೇರ ವಾಗ್ದಾಳಿ; ಅಧ್ಯಕ್ಷ ಮಂಜು ಕಠಿಣ ನಿರ್ಧಾರ

ಇನ್ಮುಂದೆ ಪ್ರತಿಯೊಂದು ಹಂತದಲ್ಲೂ ಸೂಕ್ತ ಪರಿಹಾರ ಸಿಗುವವರೆಗೆ ಎರಡ್ಮೂರು ದಿನಗಳಿಗೊಮ್ಮೆ ಜೈಲಿನ ಬ್ಯಾರಕ್‌ನಲ್ಲೇ ನಟ ದರ್ಶನ್‌ಗೆ ಫಿಸಿಯೋಥೆರಪಿ ನೀಡಲಾಗುತ್ತದೆ. ಪ್ರಸ್ತುತ ನೀಡಲಾಗಿರುವ ಚಿಕಿತ್ಸೆಯಿಂದ ದರ್ಶನ್ ಅವರಿಗೆ ಬೆನ್ನು ನೋವಿನಿಂದ ಸ್ವಲ್ಪ ಮಟ್ಟಿನ ನಿರಾಳತೆ ಸಿಕ್ಕಿದೆ ಎಂದು ತಿಳಿದುಬಂದಿದೆ.