ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ. ಈ ಮಧ್ಯೆ ನಾಳೆ ದರ್ಶನ್ ತೂಗುದೀಪ ನಟನೆಯ ಬಹುನಿರೀಕ್ಷಿತ ʼದಿ ಡೆವಿಲ್ʼ ಸಿನಿಮಾದ ಹಾಡು ನಾಳೆ ರಿಲೀಸ್ ಆಗಲಿದೆ. ಇದ್ರೆ ನೆಮ್ಮದಿಯಾಗಿರ್ಬೆಕು ಅಂತ ಸಂಭ್ರಮಿಸಲು ಸಜ್ಜಾಗಿರೋ ದರ್ಶನ್ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಕಳೆದೊಂದು ವಾರದಿಂದ ಸ್ವಾತಂತ್ರ್ಯೋತ್ಸವದ ದಿನದಂದು ದಿ ಡೆವಿಲ್ ಚಿತ್ರದ ಬಹುನಿರೀಕ್ಷಿತ ಸಾಂಗ್ ರಿಲೀಸ್ ಆಗಲಿದೆ. ಹೀಗಾಗಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರೇಟ್ ಮಾಡುತ್ತಿದ್ದರು.
ಹಾಡಿನ ಮಾಹಿತಿ ಕೊಟ್ಟಿದ್ದ ನಟ
ಹೌದು, ಈ ಕುರಿತು ಸ್ವತಃ ನಟ ದರ್ಶನ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಪೋಸ್ಟ್ನಲ್ಲಿ ಡೆವಿಲ್ ಮೂವಿಯ ಫಸ್ಟ್ ಸಿಂಗಲ್ ಬಗ್ಗೆ ಬರೆದುಕೊಂಡಿದ್ದರು. ಡೆವಿಲ್ ಮೂವಿಯ ಮೊದಲ ಹಾಡು ಇದ್ರೆ ನೆಮ್ದಿಯಾಗಿರ್ಬೇಕ್ ಆಗಸ್ಟ್ 15ರಂದು ಬೆಳಗ್ಗೆ 10.05ಕ್ಕೆ ರಿಲೀಸ್ ಆಗಲಿದೆ ಎಂದು ದರ್ಶನ್ ಬರೆದಿದ್ದರು. ಸದ್ಯ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ದರ್ಶನ್ ಸೇರಿದಂತೆ ಇತರ ಕಲಾವಿದರು ಈ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸವೂ ನಡೆದಿತ್ತು.
ಇದ್ರೆ ನೆಮ್ದಿಯಾಗ್ ಇರ್ಬೇಕ್' ಎಂಬ ಹಾಡು ಬಿಡುಗಡೆಗೂ ಮೊದಲೇ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ದಿ ಡೆವಿಲ್ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಇದು ದರ್ಶನ್ ಅವರೊಂದಿಗಿನ ಅವರ ಮೊದಲ ಸಹಯೋಗವನ್ನು ಗುರುತಿಸುತ್ತದೆ. ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರ ಪ್ರಭಾವಶಾಲಿ ಸಂಗೀತಗಳಿಗೆ ಹೆಸರುವಾಸಿಯಾದ ಅಜನೀಶ್, ಇದೀಗ ಡೆವಿಲ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಕುತೂಹಲಕಾರಿಯಾಗಿ, ಚಿತ್ರದ ಆಡಿಯೋ ಹಕ್ಕುಗಳನ್ನು ಯೋಜನೆಯ ಪ್ರಾರಂಭದ ಸಮಯದಲ್ಲಿಯೇ ಸರಿಗಮ ಮ್ಯೂಸಿಕ್ ಲೇಬಲ್ ಪಡೆದುಕೊಂಡಿದೆ.
ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲು ಚಿತ್ರತಂಡ ಕಾಯುತ್ತಿತ್ತು. ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಲಾಗುವುದು ಎಂದು ಚಿತ್ರತಂಡ ಹೇಳಿತ್ತು. ಆದರೆ ಇದೀಗ ದರ್ಶನ್ ಮತ್ತೆ ಜೈಲು ಸೇರಬೇಕಾಗಿದೆ. ಕಳೆದ 2024 ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.