ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ (Actress Nandini) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿಯಲ್ಲಿ ನಟಿಸಿದ್ದರು. ಬೆಂಗಳೂರಿನ ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ (Nandini) ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ಜೀವ ಹೂವಾಗಿದೆ, ಸಂಘರ್ಷ, ಮಧುಮಗಳು, ನೀನಾದೆ ನಾ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು.
ಸದ್ಯ ತಮಿಳು ಧಾರಾವಾಹಿಯಲ್ಲಿ ಲೀಡ್ ಪಾತ್ರದಲ್ಲಿ ನಟಿಸುತ್ತಿದ್ದರು.ತಮಿಳಿನ ಗೌರಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಕನಕ ಹಾಗೂ ದುರ್ಗಾ ಎನ್ನುವ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು. ಪಿಜಿ ಯಲ್ಲಿ ಇದ್ದ ನಂದಿನಿ, ತಾಯಿಗೆ ಡೆತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಬಾಡಿ ಪೋಸ್ಟ್ ಮಾರ್ಟಾಮ್ ಗೆ ಹೋಗಿರೋ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ : Bigg Boss Kannada 12: ಅಶ್ವಿನಿಗೆ ಸಖತ್ ಕ್ವಾಟ್ಲೆ ಕೊಟ್ಟ ಗಿಲ್ಲಿ; ಕೆಲಸ ಮುಗಿಸದೇ ಹೇಗೆ ಮಲಗ್ತೀರಾ ನೋಡೇ ಬಿಡ್ತಿನಿ ಅಂತ ಸವಾಲ್!
ಗೌರಿ ಧಾರಾವಾಹಿಯ ಅವರ ಪಾತ್ರದಲ್ಲಿ ಕೂಡ ವಿಷ ಕುಡಿಯುವ ದೃಶ್ಯವಿತ್ತು. ಈಗ ಅವರು ರಿಯಲ್ ಆಗಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುವ ಅವಕಾಶವನ್ನು ನಂದಿನಿ ಅವರು ಪಡೆದಿದ್ದರು.
ಅವರ ನಟನೆಗೆ ವೀಕ್ಷಕರಿಗೆ ಮೆಚ್ಚುಗೆ ಸಿಕ್ಕಿತ್ತು. ಕಿರುತೆರೆ ಲೋಕದಲ್ಲಿ ಹೊಸ ಹೊಸ ಅವಕಾಶಗಳು ಅವರಿಗೆ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.
ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ; ಅವಮಾನಕ್ಕೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು.