Rukmini vasanth: ನಟಿ ರುಕ್ಮಿಣಿ ವಸಂತ್ ಡೀಪ್‌ಫೇಕ್ ಕೇಸ್; ಮೂವರು ಆರೋಪಿಗಳ ಬಂಧನ
Rukmini vasanth: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ತಯಾರಿಸಿ ವೈರಲ್ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳ ಮೂವರು ಯುವಕರನ್ನು ಬಂಧಿಸಿ, ಅವರಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ನಟಿ ರುಕ್ಮಿಣಿ ವಸಂತ್ -
ಎಐ (Artificial Intelligence) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಹಿನ್ನೆಲೆ, ನಟಿ ರುಕ್ಮಿಣಿ ವಸಂತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕೇಸ್ ಕೂಡ ದಾಖಲಿಸಿದ್ದರು. ನಟಿ ರುಕ್ಮಿಣಿ ವಸಂತ್ ಅವರ ಎಐ ಡೀಪ್‌ಫೇಕ್ ಅಶ್ಲೀಲ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಮೂವರು ಯುವಕರನ್ನು ಈಗ ಬಂಧಿಸಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ತಯಾರಿಸಿ ವೈರಲ್ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳ ಮೂವರು ಯುವಕರನ್ನು ಬಂಧಿಸಿ, ಅವರಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Rukmini Vasanth: ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಪ್ರಕರಣ ; ಶಾಕಿಂಗ್ ವಿಚಾರ ರಿವೀಲ್!
ಬಂಧಿತರನ್ನು ರವಿಕುಮಾರ್ (24), ಚಂದ್ರಕಾಂತ್ (33) ಮತ್ತು ರಂಜಿತ್ (25) ಎಂದು ಗುರುತಿಸಲಾಗಿದೆ. ರವಿಕುಮಾರ್ ಬಾಗಲಕೋಟೆ ಜಿಲ್ಲೆಯ ನಿವಾಸಿಯಾಗಿದ್ದರೆ, ರಂಜಿತ್ ಬೆಂಗಳೂರು ನಗರದವನು. ಇನ್ನು ಮೂರನೇ ಆರೋಪಿ ಚಂದ್ರಕಾಂತ್ ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವನಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೆಲೆಬ್ರಿಟಿಗಳ ನಕಲಿ ಫೋಟೋಗಳು, ಡೀಪ್‌ಫೇಕ್ ವಿಡಿಯೋಗಳು ಹಾಗೂ ಮಾರ್ಪಡಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Nagabandham Trailer: ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ 'ನಾಗಬಂಧಂ': ಟ್ರೈಲರ್ ಔಟ್
ಹಲವು ಸಿನಿಮಾ ನಟಿಯರು ಹಾಗೂ ಸಾರ್ವಜನಿಕ ವ್ಯಕ್ತಿಗಳು ಕೂಡ ಇಂತಹ ಡೀಪ್‌ಫೇಕ್ ಮತ್ತು ಎಐ ದುರುಪಯೋಗದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ರುಕ್ಮಿಣಿ ವಸಂತ್ ಅವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅನೇಕ ಅಭಿಮಾನಿಗಳು ಹಾಗೂ ಸಿನಿ ವಲಯದವರು ನಟಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.