ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Aishwarya Pisse: ಕನ್ನಡ ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ವಿಚ್ಛೇದನ ಘೋಷಣೆ

Aishwarya Pisse: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ಐಶ್ವರ್ಯಾ ಪಿಸ್ಸೆ ಅವರು ಪತಿ ಹರಿ ವಿನಯ್ ಅವರೊಂದಿಗಿನ ಸಂಬಂಧಕ್ಕೆ ಅಂತ್ಯ ಹಾಡುವ ನಿರ್ಧಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸಂತು ಸ್ಟ್ರೈಟ್ ಫಾರ್ವಡ್' ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಹೋದರಿಯಾಗಿ ಮುಗ್ಧ ಅಭಿನಯದ ಮೂಲಕ ಗಮನಸೆಳೆದಿದ್ದರು. ಪುನರ್ ವಿವಾಹ, ಗಿರಿಜಾ ಕಲ್ಯಾಣ ಮತ್ತು ಅನುರೂಪ ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.

ನಟಿ ಐಶ್ವರ್ಯಾ ಪಿಸ್ಸೆ

ಕನ್ನಡ ಕಿರುತೆರೆ (Kannada serial) ಹಾಗೂ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ಐಶ್ವರ್ಯಾ ಪಿಸ್ಸೆ ಅವರು ಪತಿ ಹರಿ ವಿನಯ್ ಅವರೊಂದಿಗಿನ ಸಂಬಂಧಕ್ಕೆ ಅಂತ್ಯ ಹಾಡುವ ನಿರ್ಧಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.ಅನುರೂಪ (Anuroopa serial) ಧಾರಾವಾಹಿ ಧಾರಾವಾಹಿ ಮೂಲಕ ಐಶ್ವರ್ಯಾ ಕಿರುತೆರೆಗೆ ಅಡಿಯಿಟ್ಟವರು. ಸರ್ವಮಂಗಳ ಮಾಂಗಲ್ಯೇ ಧಾರಾವಾಹಿ ತೆಲುಗಿನಲ್ಲಿ 'ಅಗ್ನಿಸಾಕ್ಷಿ' ಹೆಸರಿನಲ್ಲಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ಪಾರ್ವತಿ ಪಾತ್ರ ಪೋಷಿಸಿದ್ದಾರೆ ಐಶ್ವರ್ಯಾ.

“ಸರ್ವಮಂಗಳ ಮಾಂಗಲ್ಯ', 'ಅನುರೂಪ', 'ಮಾಂಗಲ್ಯ', 'ಗಿರಿಜಾ ಕಲ್ಯಾಣ' ಹಾಗೂ 'ಸುಂದರಿ' ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ತಮ್ಮ ನಟನೆಯ ಮೂಲಕ ಗುರುತಿಸಿಕೊಂಡಿದ್ದಾರೆ.

'ಸಂತು ಸ್ಟ್ರೈಟ್ ಫಾರ್ವಡ್' ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಹೋದರಿಯಾಗಿ ಮುಗ್ಧ ಅಭಿನಯದ ಮೂಲಕ ಗಮನಸೆಳೆದಿದ್ದರು.

ಇದನ್ನೂ ಓದಿ: Bigg Boss Kannada 13: ಮಂಜನ ಜೊತೆಗೆ ಇನ್ನೂ ಇಬ್ಬರನ್ನು ನಾನು ಹೊರಗೆ ಕಳಿಸುತ್ತಿದ್ದೆ; ಸುದೀಪ್‌

ನಟಿ ಪೋಸ್ಟ್‌ನಲ್ಲಿ, ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ, ಫಾಲೋವರ್ಸ್‌ಗಳಿಗೆ, ಹಾಗೂ ಹಿತೈಷಿಗಳಿಗೆ,

ನನ್ನ ವೈಯಕ್ತಿಕ ಜೀವನದ ಸುತ್ತ ಹರಡುತ್ತಿರುವ ಅನಗತ್ಯ ವದಂತಿಗಳು ಮತ್ತು ಊಹಾಪೋಹಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡುವುದು ಅಗತ್ಯವೆಂದು ಭಾವಿಸಿದ್ದೇನೆ.

ನಾನು ಮತ್ತು ನನ್ನ ಪತಿ ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಸಾಕಷ್ಟು ಯೋಚನೆ ಮತ್ತು ಪರಸ್ಪರ ಒಪ್ಪಿಗೆಯೊಂದಿಗೆ, ನಾವು ಪರಸ್ಪರ ಒಪ್ಪಿಗೆಯ ವಿಚ್ಛೇದನ ಪಡೆದಿದ್ದೇವೆ . ಇದು ನಮ್ಮಿಬ್ಬರ ವೈಯಕ್ತಿಕ ನಿರ್ಧಾರವಾಗಿದ್ದು, ಈ ಹಂತದಲ್ಲಿ ನಮಗೆ ಅಗತ್ಯವಿರುವ ಖಾಸಗಿತನ ಮತ್ತು ನೆಮ್ಮದಿಯನ್ನು ಗೌರವಿಸಿ, ನಮ್ಮ ಆಯ್ಕೆಯನ್ನು ಎಲ್ಲರೂ ಮಾನ್ಯ ಮಾಡಬೇಕೆಂದು ವಿನಂತಿಸುತ್ತೇನೆ.



ಕಾನೂನಿನ ದೃಷ್ಟಿಯಿಂದ ಸ್ವೀಕಾರಾರ್ಹವಲ್ಲ

ವೀಕ್ಷಣೆಗಳು, ಫಾಲೋವರ್ಸ್, ಲೈಕ್ಸ್ ಅಥವಾ ಎಂಗೇಜ್‌ಮೆಂಟ್ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಸುಳ್ಳು ಕಥೆಗಳನ್ನು ಸೃಷ್ಟಿಸುವುದು, ದಾರಿ ತಪ್ಪಿಸುವ ವಿಡಿಯೋಗಳನ್ನು ಪ್ರಕಟಿಸುವುದು, ಆಧಾರರಹಿತ ಆರೋಪಗಳನ್ನು ಮಾಡುವುದು, ನನ್ನ ಧಾರಾವಾಹಿಯ ದೃಶ್ಯಗಳನ್ನು ಸಂದರ್ಭಕ್ಕೆ ಸಂಬಂಧವಿಲ್ಲದ ರೀತಿಯಲ್ಲಿ ಬಳಸುವುದು ಅಥವಾ ನನ್ನ ವೈಯಕ್ತಿಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನಿನ ದೃಷ್ಟಿಯಿಂದ ಸ್ವೀಕಾರಾರ್ಹವಲ್ಲ. ದಯವಿಟ್ಟು ತೆರೆಯ ಮೇಲಿನ ಜೀವನಕ್ಕೂ ನಿಜ ಜೀವನಕ್ಕೂ ಇರುವ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಿ. ವದಂತಿಗಳನ್ನು ಹರಡುವುದನ್ನುನಿಲ್ಲಿಸಿ.

ಈ ಹೇಳಿಕೆಯನ್ನು ನೀಡುತ್ತಿರುವುದು ಸ್ಪಷ್ಟವಾದ ಮಿತಿಗಳನ್ನು ತಿಳಿಸುವುದಕ್ಕಾಗಿ ಮಾತ್ರವೇ ಹೊರತು, ಮತ್ತಷ್ಟು ಚರ್ಚೆಗಳಿಗೆ ಅಥವಾ ಊಹಾಪೋಹಗಳಿಗೆ ಆಹ್ವಾನ ನೀಡುವುದಕ್ಕಾಗಿ ಅಲ್ಲ. ಎಲ್ಲರೂ ನನ್ನ ಖಾಸಗಿತನವನ್ನು ಗೌರವಿಸಿ, ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುತ್ತೇನೆ.ನನ್ನ ಕೆಲಸವೇ ನನ್ನ ವೃತ್ತಿ.

ಇದನ್ನೂ ಓದಿ: Bigg Boss Kannada 13: ಸ್ನೇಹಕ್ಕೂ ಆಟಕ್ಕೂ ಸಮರ! ತಾಂಡವ್‌ಗೆ ಕೌಂಟರ್‌ ಕೊಟ್ಟ ಪ್ರಶಾಂತ್‌

ನನ್ನ ವೈಯಕ್ತಿಕ ಜೀವನ ನನ್ನ ಖಾಸಗಿ ವಿಚಾರ,ಸುಳ್ಳು ಹಾಗೂ ಮಾನಹಾನಿಕರ ವಿಷಯಗಳನ್ನು ಸೂಕ್ತ ಕಾನೂನು ಮಾರ್ಗಗಳ ಮೂಲಕ ಎದುರಿಸಲಾಗುವುದು. ಇಂತಹ ಕೃತ್ಯಗಳು ಮುಂದುವರಿದರೆ, ಸಂಬಂಧಪಟ್ಟವರ ವಿರುದ್ಧ ಗಂಭೀರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬರೆದುಕೊಂಡಿದ್ದಾರೆ.

Yashaswi Devadiga

View all posts by this author