Aishwarya Salimath: ಅವಳಿ–ಜವಳಿ ಮಕ್ಕಳಿಗೆ ಜನ್ಮ ನೀಡಿದ ಕಿರುತೆರೆ ನಟಿ ಐಶ್ವರ್ಯ ಸಾಲಿಮಠ
Aishwarya : ಅಗ್ನಿಸಾಕ್ಷಿ ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ ಧಾರಾವಾಹಿಯಲ್ಲಿ ವೈಶಾಖ ಪಾತ್ರದಲ್ಲಿ ನಟಿ ನಟಿಸಿದ್ದರು. ಹೆಚ್ಚಾಗಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದುಕೊಂಡ ನಟಿ ಐಶ್ವರ್ಯ ಸಾಲಿಮಠ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ‘ರಾಜಾ ರಾಣಿ’ ರಿಯಾಲಿಟಿ ಶೋನಲ್ಲಿ ಈ ಜೋಡಿ ಸ್ಪರ್ಧಿಸಿದ್ದರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಐಶ್ವರ್ಯ ‘ಬಾಯ್ಸ್ ವರ್ಸಸ್ ಗರ್ಲ್ಸ್ ರಿಯಾಲಿಟಿ ಶೋನಲ್ಲೂ ಭಾಗವಹಿಸಿದ್ದರು.
ಐಶ್ವರ್ಯ ಸಾಲಿಮಠ -
ಕನ್ನಡ ಕಿರುತೆರೆ ನಟಿ ಅಗ್ನಿಸಾಕ್ಷಿ ಸೀರಿಯಲ್ (Agnisakshi Serial) ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರೋ ನಟಿ ಎಂದರೆ ಅದು ಐಶ್ವರ್ಯ ಸಾಲಿಮಠ (Aishwarya Salimath). ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುವ ನಟಿ ಐಶ್ವರ್ಯ ಸಾಲಿಮಠ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕನ್ನಡ ಕಿರುತೆರೆ ನಟಿ ಐಶ್ವರ್ಯ ಸಾಲಿಮಠ ಅವಳಿ-ಜವಳಿ ಗಂಡು ಮಕ್ಕಳಿಗೆ (Twins Baby) ಜನ್ಮ ನೀಡಿದ್ದಾರೆ. ಈ ಬಗ್ಗೆ ಐಶ್ವರ್ಯ ಸಾಲಿಮಠ ಹಾಗೂ ವಿನಯ್ ದಂಪತಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಗ್ನಿಸಾಕ್ಷಿ ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ ಧಾರಾವಾಹಿಯಲ್ಲಿ ವೈಶಾಖ ಪಾತ್ರದಲ್ಲಿ ನಟಿ ನಟಿಸಿದ್ದರು. ಹೆಚ್ಚಾಗಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದುಕೊಂಡ ನಟಿ ಐಶ್ವರ್ಯ ಸಾಲಿಮಠ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಇದನ್ನೂ ಓದಿ: Bigg Boss Kannada 12: ಧ್ರುವಂತ್‌ಗೆ ಆಟ, ರಕ್ಷಿತಾಗೆ ಪ್ರಾಣ ಸಂಕಟ; ಸೀಕ್ರೆಟ್ ರೂಮ್‌ನಲ್ಲಿ ಪುಟ್ಟಿ ನಡುಕ!
ಇತ್ತೀಚೆಗಷ್ಟೇ ನಟಿ ಐಶ್ವರ್ಯ ಸಾಲಿಮಠ ಅವರ ಸೀಮಂತ ಶಾಸ್ತ್ರನೆರವೇರಿತ್ತು. ಸೀಮಂತ ಶಾಸ್ತ್ರದ ಫೋಟೊಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಇದೀಗ ಅವಳಿ-ಜವಳಿ ಗಂಡು ಮಕ್ಕಳು ಜನಿಸಿದ ವಿಚಾರ ತಿಳಿದ ಕೂಡಲೇ ನಟಿಯ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಇದನ್ನೂ ಓದಿ:
ಸಾಕಷ್ಟು ಹೆಸರು
ಈ ಜೋಡಿ ಒಟ್ಟಾಗಿ ಮಹಾಸತಿ ಎಂಬ ಧಾರಾವಾಹಿಯಲ್ಲಿ ನಟಿಸಿ ಸಾಕಷ್ಟು ಹೆಸರು ಮಾಡಿದ್ದರು. 2022 ರಲ್ಲಿ ಐಶ್ವರ್ಯ ಹಾಗೂ ವಿನಯ್ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದರು. ನಟಿ ಐಶ್ವರ್ಯ ರಾಮಾಚಾರಿ ಸೀರಿಯಲ್ನಲ್ಲಿ ವೈಶಾಕ ಪಾತ್ರದಲ್ಲಿ ನಟಿಸಿದ್ದಾರೆ.
‘ರಾಜಾ ರಾಣಿ’ ರಿಯಾಲಿಟಿ ಶೋನಲ್ಲಿ ಈ ಜೋಡಿ ಸ್ಪರ್ಧಿಸಿದ್ದರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಐಶ್ವರ್ಯ ‘ಬಾಯ್ಸ್ ವರ್ಸಸ್ ಗರ್ಲ್ಸ್ ರಿಯಾಲಿಟಿ ಶೋನಲ್ಲೂ ಭಾಗವಹಿಸಿದ್ದರು. ಐಶ್ವರ್ಯಾ ಸಾಲೀಮಠ ಹಾಗೂ ವಿನಯ್ ಗಣೇಶ ಹಬ್ಬದ ದಿನ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು.
ಇದನ್ನೂ ಓದಿ: Bigg Boss Kannada 12: ಬಿಗ್ ಬಾಸ್ ಫಿನಾಲೆ ಯಾವಾಗ? ಕಿಚ್ಚ ಸುದೀಪ್ ಏನಂದ್ರು?
ಆ ಸಂದರ್ಭದಲ್ಲಿ ನಟಿ ತಮ್ಮ ಮುದ್ದಾದ ಫೋಟೊ ಹಂಚಿಕೊಂಡು, “ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ನಮ್ಮ ಸಣ್ಣ ಸೀಕ್ರೇಟ್‌ನ್ನು ಹಂಚಿಕೊಳ್ಳುವ ಸಮಯವಿದು. ಈ ವಿಶೇಷ ದಿನದಂದು ನಾವು ಪಾಲಕರಾಗುತ್ತಿದ್ದೇವೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ. ನಾವು ಪಾಲಕರಾಗುತ್ತಿದ್ದೇವೆ. ದೇವರು ನಾವು ಕೇಳಿದ್ದಕ್ಕಿಂತ ಹೆಚ್ಚಿನದನ್ನು ನಮಗೆ ಆಶೀರ್ವದಿಸಿದ್ದಾನೆ. ಕೊನೆಗೂ ನಮ್ಮ ಕುಟುಂಬ ಬೆಳೆಯುತ್ತಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದಗಳನ್ನು ನಮಗೆ ನೀಡಿ, ದೃಷ್ಟಿ ಹಾಕಬೇಡಿ” ಎಂದಿದ್ದರು.