Anirudh Kavya Maran Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅನಿರುದ್ಧ್–ಕಾವ್ಯಾ ಮಾರನ್! ಫಸ್ಟ್ ಫೋಟೊ ಔಟ್
Anirudh Kavya Maran Marriage:ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 11, 2026ರ ಬುಧವಾರದಂದು ಗ್ರೀಸ್ನಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಖಾಸಗಿ ಸಮಾರಂಭದಲ್ಲಿ ನಡೆದ ಮದುವೆಯ ಮೊದಲ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅನಿರುದ್ಧ್ ರವಿಚಂದರ್ -
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ (Anirudh-Kavya Maran get married) ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 11, 2026ರ ಬುಧವಾರದಂದು ಗ್ರೀಸ್ನಲ್ಲಿ (Greece) ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಖಾಸಗಿ ಸಮಾರಂಭದಲ್ಲಿ ನಡೆದ ಮದುವೆಯ ಮೊದಲ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಗ್ರೀಸ್ನಲ್ಲಿ ಅದ್ಧೂರಿಯಾಗಿ ನಡೆದ ಮದುವೆ
ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಅವರ ಮದುವೆ ಗ್ರೀಸ್ನ ಸುಂದರ ತಾಣದಲ್ಲಿ ಅತ್ಯಂತ ಖಾಸಗಿಯಾಗಿ ನಡೆದಿದೆ. ಮದುವೆಯ ಮೊದಲ ಫೋಟೋಗಳಲ್ಲಿ ನವಜೋಡಿ ಒಂದೇ ರೀತಿಯ ಐವರಿ ಬಣ್ಣದ ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದ್ದಾರೆ. ಉಡುಪುಗಳ ಮೇಲಿನ ಸುಂದರ ಕಸೂತಿ ವಿನ್ಯಾಸ, ಹಲವು ಪದರಗಳ ಮುತ್ತಿನ ಆಭರಣಗಳು ಹಾಗೂ ಹಿನ್ನಲೆಯಲ್ಲಿದ್ದ ಬಿಳಿ ಹೂವಿನ ಅಲಂಕಾರ ಸಮಾರಂಭದ ಮೆರುಗನ್ನು ಹೆಚ್ಚಿಸಿವೆ.
My once in a lifetime, for a lifetime ❤️ 11.11 https://t.co/pSdCxqRN2I
— Anirudh Ravichander (@anirudhofficial) November 11, 2026
ಅನಿರುದ್ಧ್, ಇನ್ಸ್ಟಾಗ್ರಾಮ್ ನಲ್ಲಿ ಮದುವೆಯ ಚಿತ್ರವನ್ನು ಹಂಚಿಕೊಳ್ಳುವಾಗ, "ನನ್ನ ಜೀವನದಲ್ಲಿ ಒಮ್ಮೆ ಮಾತ್ರ, ಜೀವಿತಾವಧಿಯಲ್ಲಿ...11.11" ಎಂದು ಬರೆದುಕೊಂಡಿದ್ದಾರೆ.
ಮದುವೆ ಸಂಭ್ರಮಕ್ಕೂ ಮುನ್ನ ನವೆಂಬರ್ 10ರಂದು ಗ್ರೀಸ್ನಲ್ಲಿ ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು ಹಾಗೂ ಆಯ್ದ ಗಣ್ಯರು ಭಾಗವಹಿಸಿದ್ದರು. ರಜನಿಕಾಂತ್ ಕೂಡ ನಿಶ್ಚಿತಾರ್ಥ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅವರೊಂದಿಗೆ ಐಶ್ವರ್ಯಾ ರಜನಿಕಾಂತ್, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
'ವೈ ದಿಸ್ ಕೊಲವೆರಿ ಡಿ' ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನಿರುದ್ಧ್ ರವಿಚಂದರ್, ಬಳಿಕ 'ಜೈಲರ್', 'ವಿಕ್ರಮ್', 'ಲಿಯೋ' ಮತ್ತು 'ಜವಾನ್' ಸೇರಿದಂತೆ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿ ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.
ಇನ್ನು ಕಾವ್ಯಾ ಮಾರನ್ ಅವರು ಸನ್ ಟಿವಿ ನೆಟ್ವರ್ಕ್ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದು, ಸನ್ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಅವರ ಪುತ್ರಿ. ಐಪಿಎಲ್ನ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ಹೆಚ್ಚು ಮಾತನಾಡದೆ ಖಾಸಗಿತನ ಕಾಪಾಡಿಕೊಂಡಿದ್ದರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ.
ಇದನ್ನೂ ಓದಿ: Bigg Boss Kannada 13: ಮಂಜು-ಯಶಸ್ ಕಿರಿಕ್; ಮಹಾಕವಿಯ ಚುಚ್ಚುವ ಮಾತು ಶುರು
ನವೆಂಬರ್ 21ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ
ಗ್ರೀಸ್ನಲ್ಲಿ ಖಾಸಗಿ ವಿವಾಹ ಸಮಾರಂಭ ಮುಗಿಸಿರುವ ನವಜೋಡಿ ಕುಟುಂಬಸ್ಥರು, ನವೆಂಬರ್ 21ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಮಾರಂಭಕ್ಕೆ ಭಾರತೀಯ ಚಿತ್ರರಂಗದ ಪ್ರಮುಖ ನಟ-ನಟಿಯರು, ರಾಜಕೀಯ ನಾಯಕರು, ಉದ್ಯಮಿಗಳು ಹಾಗೂ ಕ್ರಿಕೆಟ್ ಕ್ಷೇತ್ರದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.