Anirudh Ravichander: ಮೇ.31ಕ್ಕೆ ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ!
ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ಅನಿರುದ್ಧ್ ರವಿಚಂದರ್ ರೆಡಿಯಾಗಿದ್ದಾರೆ.


ಬೆಂಗಳೂರು: ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ (Anirudh Ravichander) ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ. ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯುವ ಮ್ಯೂಸಿಕ್ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಕ್ರಿಯೇಟ್ ಮಾಡಿದೆ.
ಇದನ್ನು ಓದಿ: Zee Kannada: ಝೀ ಕನ್ನಡದಲ್ಲಿ ಹಾಡು, ಗೇಮ್, ಸಿನಿಮಾ; ಇದು ಭರ್ಜರಿ ಮನರಂಜನೆಯ ಮಹಾ ಧಮಾಕ
ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ʼಅನಿರುದ್ಧ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್ ಗಳು ಕೇವಲ 60 ನಿಮಿಷದಲ್ಲೇ ಮಾರಾಟವಾಗಿದೆ ಎಂದು ಕೆವಿಎನ್ ಸಂಸ್ಥೆಯ ವೆಂಕಟ ಕೆ ನಾರಾಯಣ ಖಚಿತಪಡಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿಯ ಮಂದಿ, ವೇಗವಾಗಿ ಟಿಕೆಟ್ ಖರೀದಿಸಿದ್ದಾರೆ. ಬೀಸ್ಟ್ ಮ್ಯೂಸಿಕ್ ಮೂಡ್ ಗೆ ಸಿಲಿಕಾನ್ ಸಿಟಿ ಮಂದಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ.