ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

BIFFES 2026: ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ; ಕನ್ನಡ ಸಿನಿಮಾಗಳು ಯಾವುದೆಲ್ಲ?

BIFFES 2026 Announcement: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ , ಮರಾಠಿಯ ʼಸಬರ್‌ ಬೊಂಡ್‌ʼ (Sabar Bonda) ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ.

BIFFES 2026: ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ -

Yashaswi Devadiga
Yashaswi Devadiga Feb 6, 2026 8:07 PM

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು (bengaluru film festival 2026) ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ (last Land), ಮರಾಠಿಯ ʼಸಬರ್‌ ಬೊಂಡ್‌ʼ (Sabar Bonda) ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ.

ಪ್ರಶಸ್ತಿಗಳು ಏನು?

ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು ಲಕ್ಷ ರೂ. ನೀಡಿ ಗೌರವಿಸಲಾಯಿತು.

ವಿಶೇಷ ಮೆಚ್ಚುಗೆ

ಏಷ್ಯನ್‌ ಚಿತ್ರ ವಿಭಾಗದಲ್ಲಿ ಈ ವರ್ಷ ಒಟ್ಟು 15 ಚಿತ್ರಗಳು ಪ್ರಶಸ್ತಿ ಕಣದಲ್ಲಿದ್ದವು. ಈ ಪೈಕಿ ಜಪಾನ್‌ನ ʼದಿ ಲಾಸ್ಟ್‌ ಲ್ಯಾಂಡ್‌ʼ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾದರೆ, ಭಾರತದ ʼಶೇಪ್‌ ಆಫ್‌ ಮೋಮೋʼ ಮತ್ತು ಜಪಾನ್‌ನ ʼದಿ ಡೀಪೆಸ್ಟ್‌ ಸ್ಪೇಸ್‌ ಇನ್‌ ಯೂಎಸ್‌ʼ ಚಿತ್ರಗಳು ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗೆ ಭಾಜನವಾಗಿವೆ. ಫಿಲಿಪೈನ್ಸ್‌ನ ʼರಿಪಬ್ಲಿಕ್‌ ಆಫ್‌ ಪಿಪೊಲಿಪಿನಾಸ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಭಾರತೀಯ (ಚಿತ್ರಭಾರತಿ) ವಿಭಾಗದಲ್ಲಿ ಮರಾಠಿ ಚಿತ್ರ ʼಸಬರ್‌ ಬೊಂಡ್‌ʼ ಅತ್ಯುತ್ತಮ ಚಿತ್ರ ಪ್ರಶಸ್ತಿ ತನ್ನದಾಗಿಸಿಕೊಂಡರೆ, ಮಲಯಾಳಂನ ʼಮೋಹಂʼ ಮತ್ತು ʼಕಾಡುʼ ಚಿತ್ರಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗಳನ್ನು ಗೆದ್ದಿವೆ. ಮರಾಠಿ ಭಾಷೆಯ ʼಗೊಂದಾಳ್‌ʼ ಚಿತ್ರವು ಫಿಪ್ರೆಸ್ಕಿ ಪ್ರಶಸ್ತಿ ಪಡೆದರೆ, ಮಲಯಾಳಂ ಭಾಷೆಯ ʼಸರ್ಕೀಟ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಇದನ್ನೂ ಓದಿ: Bhagyalakshmi Kannada Serial: ಭಾಗ್ಯ ಲಕ್ಷ್ಮೀ ಸೀರಿಯಲ್‌ ಅಂತ್ಯ? ಆದಿ-ಭಾಗ್ಯ ಒಂದಾದ್ರಾ?

ಕನ್ನಡದಲ್ಲಿ ಯಾವುದೆಲ್ಲ?

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ 14 ಚಿತ್ರಗಳು ಸ್ಪರ್ಧಿಸಿದ್ದು, ಈ ಪೈಕಿ ʼವನ್ಯಾʼ ಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದೆ. ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರಗಳಾಗಿ ʼನಮ್‌ ಸಾಲಿʼ ಮತ್ತು ʼರಾವಣ ರಾಜ್ಯದಲ್ಲಿ ನವದಂಪತಿಗಳುʼ ಆಯ್ಕೆಯಾದರೆ, ʼಹಕ್ಕಿಗಾಗಿʼ ಚಿತ್ರಕ್ಕಾಗಿ ನೆಟ್‌ಪ್ಯಾಕ್‌ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ʼಮೃಗತೃಷ್ಣʼ ಮತ್ತು ʼಫೋರ್‌ ಬೈ ಫೋರ್‌ʼ ಚಿತ್ರಗಳು ತೀರ್ಪುಗಾರರ ವಿಶೇಷ ಮನ್ನಣೆಗೆ ಭಾಜನವಾಗಿವೆ.



ಇದನ್ನೂ ಓದಿ: Shah Rukh Khan: ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ ಶಾರುಖ್?

ಈ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಚಲನಚಿತ್ರಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡಿವೆ.

ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.