ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chandan Shetty: ಬಿಗ್ ಬಾಸ್ ಚಂದನ್ ಶೆಟ್ಟಿಗೆ ಬೆನ್ನೆಲುಬಾಗಿ ನಿಂತ ರವಿಚಂದ್ರನ್-ಶಿವಣ್ಣ

ಇದೀಗ ಚಂದನ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸೂತ್ರಧಾರಿ ಸಿನಿಮಾ ಮೂಲಕ ಕಂಬ್ಯಾಕ್ ಮಾಕೋಕೆ ಸಜ್ಜಾಗಿದ್ದಾರೆ. ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ ಮತ್ತು ಕಿರಣ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ಸೂತ್ರಧಾರಿ ಈಗಾಗಲೇ ತನ್ನ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ.

ಬಿಗ್ ಬಾಸ್ ಚಂದನ್ ಶೆಟ್ಟಿಗೆ ಬೆನ್ನೆಲುಬಾಗಿ ನಿಂತ ರವಿಚಂದ್ರನ್-ಶಿವಣ್ಣ

Surthradaari Movie

Profile Vinay Bhat May 8, 2025 7:37 AM

ನಿವೇದಿತಾ ಗೌಡ ಅವರಿಂದ ದೂರವಾದ ಬಳಿಕ ಚಂದನ್ ಶೆಟ್ಟಿ (Chandan Shetty) ಸದಾ ಸುದ್ದಿಯಲ್ಲಿದ್ದಾರೆ, ಸಿನಿಮಾ ವಿಚಾರವಾಗಿ ಹಾಗೂ ವೈಯಕ್ತಿಕ ವಿಷಯಗಳ ಬಗ್ಗೆಯೂ ಗಾಸಿಪ್ ಹರಿದಾಡುತ್ತಿದೆ. ಇತ್ತೀಚೆಗಷ್ಟೆ ಸಲಗ ಸುಂದರಿ ಸಂಜನಾ ಆನಂದ್ ಅವರ ಜೊತೆ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಸಂಜನಾ ಆನಂದ್ ಜೊತೆ ಚಂದನ್ ಶೆಟ್ಟಿ ಎರಡನೇ ಮದುವೆ ಆಗ್ತಾರೆ ಎಂದು ಹೇಳಲಾಗಿತ್ತು. ಬಳಿಕ ಈ ಗಾಳಿ ಸುದ್ದಿಗಳಿಗೆ ಒಂದೇ ವೇದಿಕೆಯಲ್ಲಿ ನಿಂತು ಚಂದನ್‌ ಶೆಟ್ಟಿ ಮತ್ತು ಸಂಜನಾ ಆನಂದ್‌ ಸ್ಪಷ್ಟನೆ ಕೊಟ್ಟರು.

ಇದೀಗ ಚಂದನ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸೂತ್ರಧಾರಿ ಸಿನಿಮಾ ಮೂಲಕ ಕಂಬ್ಯಾಕ್ ಮಾಕೋಕೆ ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ನಾಯಕಿಯಾಗಿ ಸಂಜನಾ‌ ಹಾಗೂ ಅಪೂರ್ವ ಬಣ್ಣ ಹಚ್ಚಿದ್ದಾರೆ. ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ ಮತ್ತು ಕಿರಣ್ ಕುಮಾರ್ ಆ್ಯಕ್ಷನ್​​ ಕಟ್​ ಹೇಳಿರುವ ಸೂತ್ರಧಾರಿ ಈಗಾಗಲೇ ತನ್ನ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಬಹುನಿರೀಕ್ಷಿತ ಚಿತ್ರ ಇದೇ ಶುಕ್ರವಾರ, ಮೇ 9ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ.

ಈ ಸಿನಿಮಾಗೆ ಕ್ರೇಜಿ ಸ್ಟಾರ್‌ ರವಿಚಂದ್ರನ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಫೋರ್ಟ್‌ ಮಾಡಿದ್ದಾರೆ. ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದ್ದು, ಇದಕ್ಕೆ ಇವರಿಬ್ಬರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭ ಮಾತನಾಡಿದ ರವಿಚಂದ್ರನ್, "ಈವರೆಗೂ ಹಾಡುಗಳ ಮೂಲಕ ಜನಪ್ರಿಯರಾಗಿದ್ದ ಚಂದನ್ ಶೆಟ್ಟಿ ಈಗ ಹೀರೋ ಆಗಿದ್ದಾರೆ. ಮೊದಲ ಬಾರಿಗೆ ಹೀರೋ ಆಗಿರುವ ಅವರಿಗೆ ಒಳ್ಳೆಯದಾಗಲಿ. ಪೊಲೀಸ್ ಪಾತ್ರದಲ್ಲಿ ಅವರು ಚೆನ್ನಾಗಿ ಕಾಣಿಸುತ್ತಾರೆ. ಸಿನಿಮಾ ಕೂಡ ಇದೇ ರೀತಿ ಇರುತ್ತೆ ಅನ್ನೋ ನಂಬಿಕೆ ಇದೆ. ಈ ಸಿನಿಮಾ ಗೆಲ್ಲಲಿದೆ ಎಂಬ ಭರವಸೆ ಇದೆ" ಎಂದು ರವಿಚಂದ್ರನ್ ಹೇಳಿದ್ದಾರೆ.

Chaithra Kundapura Marriage: ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚೈತ್ರಾ ಕುಂದಾಪುರ: ನಾಳೆಯೇ ಮದುವೆ..?

"ಚಂದನ್ ಶೆಟ್ಟಿ ಹಾಡುಗಳಿಗೆ ನಾನು ಫ್ಯಾನ್. ಆಗಾಗ ಅವರ ಕೆಲವು ಹಾಡುಗಳನ್ನ ನಾನು ಗುನುಗ್ತಾ ಇರ್ತಿನಿ. ಸೂತ್ರಧಾರಿ ಚಿತ್ರದ ಮೂಲಕ ಚಂದನ್ ಹೀರೋ ಆಗಿ ಎಂಟ್ರಿ ನೀಡುತ್ತಿದ್ದಾರೆ. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆದಾಗಲಿ, ನಾನು ಈ ಸಿನಿಮಾವನ್ನು ಖಂಡಿತ ನೋಡ್ತಿನಿ" ಅಂತ ಶಿವರಾಜ್‌ಕುಮಾರ್ ಹೇಳಿದ್ದಾರೆ.

‘‘ನಾನು ಹೀರೋ ಆಗಬೇಕೆಂದು ಆಸೆ ಪಟ್ಟವರು ನಮ್ಮ ತಂದೆ. ಅವರ ಆಸೆ ಈಡೇರುವ ದಿನ ಸಮೀಪಿಸಿದೆ. ಇದೇ ಮೇ 9ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಇಂದಿನ ಸಮಾರಂಭಕ್ಕೆ ಚಿತ್ರರಂಗದ ಲೆಜೆಂಡ್​​ಗಳಾದ ಶಿವರಾಜ್​​ಕುಮಾರ್ ಹಾಗೂ ರವಿಚಂದ್ರನ್ ಅವರು ಬಂದು ನಮಗೆ ಆಶೀರ್ವದಿಸಿದ್ದು ಹೇಳಿಕೊಳ್ಳಲಾಗದಷ್ಟು ಆನಂದವಾಗಿದೆ’’ ಎಂದು ಚಂದನ್ ಶೆಟ್ಟಿ ಹೇಳಿದರು.