ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʻಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರದ ರಿಲೀಸ್‌ ಡೇಟ್‌ ಘೋಷಣೆ: ಚಂದನ್‌ ಶೆಟ್ಟಿಗೆ ಇದು ಸ್ಪೆಷಲ್‌ ಫಿಲ್ಮ್!‌ ಯಾಕೆ ಗೊತ್ತಾ?

Elra Kaleliyatte Kala: ಚಂದನ್‌ ಶೆಟ್ಟಿ ನಟನೆಯ ʻಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರದ ರಿಲೀಸ್‌ ಡೇಟ್‌ ಘೋಷಣೆ ಆಗಿದೆ. ಇದು ಚಂದನ್ ಶೆಟ್ಟಿ ನಾಯಕನಾಗಿ ನಟಿಸಲು ಒಪ್ಪಿಕೊಂಡ ಮೊದಲ ಚಿತ್ರವಾಗಿದ್ದು, ನಟ ಸುಜಯ್ ಶಾಸ್ತ್ರಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

Chandan Shetty: 'ಎಲ್ರ ಕಾಲೆಳಿಯತ್ತೆ ಕಾಲ' ರಿಲೀಸ್ ಡೇಟ್ ಫಿಕ್ಸ್

-

Avinash GR
Avinash GR Apr 1, 2026 10:15 AM

ಗಾಯಕ-ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʻಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರದ ರಿಲೀಸ್‌ ಡೇಟ್‌ ಘೋಷಣೆಯಾಗಿದೆ. ಈ ಸಿನಿಮಾವು ಆರಂಭವಾಗಿ ಸಾಕಷ್ಟು ಸಮಯವಾಗಿತ್ತು. ಆದರೂ ರಿಲೀಸ್‌ ಯಾವಾಗ ಅನ್ನೋದು ಪ್ರಶ್ನೆಯಾಗಿಯೇ ಉಳಿದಿತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಸದ್ಯ ಈ ಚಿತ್ರವನ್ನು ಏಪ್ರಿಲ್‌ 17ರಂದು ರಿಲೀಸ್‌ ಮಾಡಲು ಚಿತ್ರತಂಡ ಸಜ್ಜಾಗಿದೆ.

ಗೋಕುಲ ಎಂಟರ್ಟೈನರ್ಸ್ ಬ್ಯಾನರ್‌ ಅಡಿಯಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಈ ಚಿತ್ರವನ್ನು ನಟ ಸುಜಯ್ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. "ಕೆಲವು ಕಾರಣಗಳಿಂದ ನಮ್ಮ ಸಿನಿಮಾ ರಿಲೀಸ್‌ ಆಗೋದು ತಡವಾಯಿತು. ಈಗ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದೆ. ಇದೊಂದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ ಇರುವ ಸಿನಿಮಾ. ಬಹುತೇಕ ಚಿತ್ರೀಕರಣ ಕನಕಪುರದಲ್ಲಿ ನಡೆದಿದೆ" ಎಂದು ಸುಜಯ್ ಶಾಸ್ತ್ರಿ ಹೇಳುತ್ತಾರೆ.‌

Chandan Shetty-Niveditha: ಬಾಹ್ಯ ಸೌಂದರ್ಯಕ್ಕಿಂತ ಅವರ ಮನಸ್ಸನ್ನು ಪ್ರೀತಿಸಿಬೇಕು: ಚಂದನ್ ಶೆಟ್ಟಿ ನೇರ ಮಾತು

ಏಪ್ರಿಲ್ 17 ರಂದು ʻಎಲ್ರ ಕಾಲೆಳಿಯತ್ತೆ ಕಾಲʼ ರಿಲೀಸ್‌

"ಇದು ಸಮಯದ ಮಹತ್ವ ಸಾರುವ ಈ ಚಿತ್ರಕ್ಕೆ ನನ್ನ ಸ್ನೇಹಿತ ರಾಜಗುರು ಹೊಸಕೋಟೆ ಕಥೆ ಬರೆದಿದ್ದಾರೆ. ಕಥೆಗೆ ಈ ಶೀರ್ಷಿಕೆ ಪೂರಕವಾಗಿದೆ. ಈಗ ʻಮಾತು ಮಧುರʼ ಎಂಬ ಹಾಡು ಬಿಡುಗಡೆ ಮಾಡಿದ್ದೇವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗೋವಿಂದರಾಜು ಅವರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಕೌಟುಂಬಿಕ ಕಾಮಿಡಿ ಜಾನರ್ ನ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ" ಎಂಬುದು ಸುಜಯ್‌ ಶಾಸ್ತ್ರಿ ಮಾತು.

Chandan Shetty-Niveditha: ಅಮ್ಮ ಕಾಲ್ ಮಾಡಿ ಕಣ್ಣೀರು ಹಾಕ್ತಾರೆ: ಚಂದನ್ ಶೆಟ್ಟಿ ಭಾವುಕ

ಇದು ಚಂದನ್ ಶೆಟ್ಟಿಗೆ ಸ್ಪೆಷಲ್‌ ಸಿನಿಮಾ

ಚಂದನ್ ಶೆಟ್ಟಿ ಅಭಿನಯಿಸಿರುವ ಎರಡು ಕನ್ನಡ ಸಿನಿಮಾಗಳು ತೆರೆಕಂಡಿವೆ. ಆದರೆ ʻಎಲ್ರ ಕಾಲೆಳಿಯತ್ತೆ ಕಾಲʼ ಸಿನಿಮಾ ಮಾತ್ರ ಅವರಿಗೆ ತುಂಬಾ ಸ್ಪೆಷಲ್‌ ಸಿನಿಮಾ. ಯಾಕೆಂದರೆ, ಇದು ಹೀರೋ ಒಪ್ಪಿಕೊಂಡ ಮೊದಲ ಸಿನಿಮಾ. "ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರಕ್ಕಾಗಿ ದೇಹದ ತೂಕ ಸಹ ಹೆಚ್ಚಿಸಿಕೊಂಡಿದ್ದೆ. ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಿದ್ದಾರೆ" ಎನ್ನುತ್ತಾರೆ ಚಂದನ್‌ ಶೆಟ್ಟಿ.

"ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೂರನೇ ಚಿತ್ರ ಇದು. ಒಂದೊಳ್ಳೆ ಸಂದೇಶವಿರುವ ಚಿತ್ರವೂ ಹೌದು. ನಮ್ಮ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ" ಎನ್ನುತ್ತಾರೆ ನಿರ್ಮಾಪಕ ಗೋವಿಂದರಾಜು. ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ದರ್ಶನ್ ನಾರಾಯಣ್, ಅನುರಾಧಾ ಭಟ್ ಇನ್ನಿತರರು ಹಾಡಿದ್ದಾರೆ. ಒಂದು ಪ್ರಮೋಷನ್ ಸಾಂಗ್ ಹಾಡನ್ನು ಚಂದನ್ ಶೆಟ್ಟಿ ಅವರೇ ಹಾಡಿ, ಸಂಗೀತ ಸಂಯೋಜನೆ ಮಾಡಿದ್ದಾರೆ.

ನಾಯಕಿಯಾಗಿ ನಟಿ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಗೆ ಇಲ್ಲಿ ಮೆಸ್ ಓನರ್ ಪಾತ್ರ. ಉಳಿದಂತೆ, ದತ್ತಣ್ಣ, ತಾರಾ ಅನುರಾಧ, ಮಂಜು ಪಾವಗಡ ಮುಂತಾದವರು ʻಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರದಲ್ಲಿದ್ದಾರೆ.