ಬಾಲಿವುಡ್‌ನಲ್ಲಿ ಕಾಮಿಡಿಗೆ ಹೆಸರುವಾಸಿಯಾದ ನಟ ರಾಜ್‌ಪಾಲ್ (Rajpal Yadav) ಯಾದವ್ ಅವರಿಗೆ ಚೆಕ್ ಬೌನ್ಸ್ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ (Cheque Bounce Case) (ಫೆಬ್ರವರಿ 4) ಪೊಲೀಸರಿಗೆ ಶರಣಾಗುವಂತೆ ಹೈಕೋರ್ಟ್ ಆದೇಶವನ್ನು ನೀಡಿದೆ. ಈ ವಿವಾದವು ಸೆಕ್ಷನ್ 138 ರ ಅಡಿಯಲ್ಲಿ ದಾಖಲಾಗಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದೆ, ಇದರಲ್ಲಿ ಕಂಪನಿಯೊಂದು ರಾಜ್‌ಪಾಲ್ ಯಾದವ್ ಮತ್ತು ಅವರ ಪತ್ನಿ ಚೆಕ್ ಮೂಲಕ ಪಾವತಿ ಮಾಡದಿದ್ದಕ್ಕಾಗಿ ದೂರು ನೀಡಿತ್ತು. ಆರಂಭದಲ್ಲಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು, ಮತ್ತು ನಂತರ ಹೈಕೋರ್ಟ್ (High Court) ಶಿಕ್ಷೆಯನ್ನು ತಡೆಹಿಡಿದು ಅವರು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು.
ಏನಿದು ಪ್ರಕರಣ?
2010 ರಲ್ಲಿ ರಾಜಪಾಲ್ ಯಾದವ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದರು. ಆ ಚಿತ್ರದ ಹೆಸರು ''ಅತಾ ಪತಾ ಲಾಪತಾ''. ಬಾಕ್ಸಾಫೀಸ್‌ನಲ್ಲಿ ಹೇಳ ಹೆಸರಿಲ್ಲದಂತೆ ಕಾಣೆಯಾದ ಈ ಚಿತ್ರಕ್ಕೆ ರಾಜ್ ಪಾಲ್ ಯಾದವ್ ಆ ಕಾಲದಲ್ಲಿ 5 ಕೋಟಿ ಸಾಲವನ್ನು ಮಾಡಿದ್ದರು. ಆದರೆ ಹಣ ಮರಳಿ ನೀಡುವಲ್ಲಿ ವಿಫಲರಾಗಿದ್ದರು.
ಇದನ್ನೂ ಓದಿ: Chiranjeevi: ಮೆಗಾಸ್ಟಾರ್ ಅಬ್ಬರ ಇನ್ನು ಒಟಿಟಿಯಲ್ಲಿ! ‘ಮನ ಶಂಕರ ವರಪ್ರಸಾದ್ ಗಾರು’ ಸ್ಟ್ರೀಮಿಂಗ್ ಎಲ್ಲಿ?
ಆ ನಂತರ ಬಡ್ಡಿ ಸೇರಿ ಈ ಮೊತ್ತ 9 ಕೋಟಿಯಾಗಿತ್ತು. ಆಗಲೂ ಕೂಡ ಹಣ ಮರಳಿ ಬರಲಿಲ್ಲ. ಈ ಹಿನ್ನೆಲೆ ಬೇಸತ್ತು ಎಂ.ಎಸ್ ಮುರಳಿ ಪ್ರೊಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿತ್ತು. ಆಗ ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಿತ್ತು.
ದೂರುದಾರ ಕಂಪನಿಯು ನೀಡಿದ ಮೊತ್ತವನ್ನು ಮರುಪಾವತಿಸಲು ನೀಡಲಾದ ಹಲವಾರು ಚೆಕ್‌ಗಳು ಬೌನ್ಸ್ ಆಗಿವೆ ಎಂದು ಆರೋಪಿಸಿದೆ, ನಂತರ ರಾಜ್‌ಪಾಲ್ ಯಾದವ್ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ಕಂಪನಿಯ ವಿರುದ್ಧ ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
2013 ರಲ್ಲಿ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಅವರು ಡಿಸೆಂಬರ್ 3 ರಿಂದ 6, 2013 ರವರೆಗೆ ನಾಲ್ಕು ದಿನಗಳ ಕಾಲ ಜೈಲಿನಲ್ಲಿ ಕಳೆದರು. ನಂತರ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠವು ಮೇಲ್ಮನವಿಯ ಮೇರೆಗೆ ಅವರ ಶಿಕ್ಷೆಯನ್ನು ಅಮಾನತುಗೊಳಿಸಿತು.
ನ್ಯಾಯಾಲಯ ಕಾಲಾವಕಾಶ ನೀಡಿದರೂ ಕೂಡ ತಮ್ಮ ಮಾತಿಗೆ ರಾಜ್‌ಪಾಲ್ ಯಾದವ್ ಬದ್ದರಾಗಲಿಲ್ಲ ಎಂದು ಹೇಳಿರುವ ಸ್ವರಣಕಾಂತ್ ಶರ್ಮಾ ಡಿಸೆಂಬರ್ 16, 2025 ರೊಳಗೆ ₹40 ಲಕ್ಷ ಮತ್ತು ಈ ವರ್ಷದ ಜನವರಿ 15 ರೊಳಗೆ ಉಳಿದ ₹2.1 ಕೋಟಿ. ಹಣ ಪಾವತಿಸುವುದಾಗಿ ರಾಜ್‌ಪಾಲ್ ಯಾದವ್ ಹೇಳಿದ್ದರು ಆದರೆ ಇಲ್ಲಿಯವರೆಗೆ ಹಣ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : Yash Toxic teaser: ಯಶ್ ಟಾಕ್ಸಿಕ್ ಟೀಸರ್, ರಣವೀರ್ ಸಿಂಗ್ ಧುರಂಧರ್ ಸಿನಿಮಾ ಟೀಕಿಸಿದ ಖ್ಯಾತ ನಟ
(ಫೆಬ್ರವರಿ 4) ಸಂಜೆ 4 ಗಂಟೆಯೊಳಗೆ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ಜಡ್ಜ್ ಸ್ವರಣ ಕಾಂತ್ ಶರ್ಮಾ ಆದೇಶಿಸಿದ್ದಾರೆ. ಫೆಬ್ರವರಿ 5ರಂದು ಮತ್ತೆ ವಿಚಾರಣೆಯನ್ನು ನಡೆಸುವುದಾಗಿ ಹೇಳಿದ್ದಾರೆ.