ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜೂನ್‌ 15ಕ್ಕೆ‌ ತಮಿಳುನಾಡು ಸಿಎಂ ವಿಜಯ್‌ಗೆ ಬಿಗ್‌ ಡೇ; ʻದಳಪತಿʼ ಕುಟುಂಬದಲ್ಲಿ ಬೀಸಲಿದೆಯಾ ತಂಗಾಳಿ?

ತಮಿಳುನಾಡು ಮುಖ್ಯಮಂತ್ರಿಯಾಗಿ ಐತಿಹಾಸಿಕ ಸಾಧನೆ ಮಾಡಿರುವ ನಟ ದಳಪತಿ ವಿಜಯ್ ಹಾಗೂ ಅವರ ಪತ್ನಿ ಸಂಗೀತ ಸ್ವರ್ಣಲಿಂಗಂ ಅವರ ವಿಚ್ಛೇದನ ಪ್ರಕರಣ ಜೂನ್ 15 ರಂದು ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ಅಂತಿಮ ವಿಚಾರಣೆಗೆ ಬರಲಿದೆ.

ದಳಪತಿ ವಿಜಯ್ ಅವರು ಮೊದಲ ಪ್ರಯತ್ನದಲ್ಲೇ ಚುನಾವಣೆಯಲ್ಲಿ ಗೆದ್ದು ತಮಿಳುನಾಡು ಮುಖ್ಯಮಂತ್ರಿಯಾಗಿ ಪೀಠ ಅಲಂಕರಿಸುವ ಮೂಲಕ ರಾಜಕೀಯದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆದರೆ, ರಾಜಕೀಯ ಯಶಸ್ಸಿನ ಬೆನ್ನಲ್ಲೇ ಅವರಿಗೆ ವೈಯಕ್ತಿಕ ಜೀವನದಲ್ಲಿ ದೊಡ್ಡ ಸವಾಲೊಂದು ಎದುರಾಗಿದ್ದು, ಇಡೀ ದೇಶದ ಗಮನವೀಗ ಅವರತ್ತ ನೆಟ್ಟಿದೆ.

ಮುಖ್ಯಮಂತ್ರಿ ವಿಜಯ್ ಹಾಗೂ ಅವರ ಪತ್ನಿ ಸಂಗೀತ ಅವರ ವಿಚ್ಛೇದನ ಪ್ರಕ್ರಿಯೆಯು ಅಂತಿಮ ಘಟ್ಟಕ್ಕೆ ತಲುಪಿದ್ದು, ಜೂನ್ 15 ರಂದು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರರಂಗ ಹಾಗೂ ರಾಜಕೀಯ ವಲಯದಲ್ಲಿ ಈ ದಿನ ಅತ್ಯಂತ ಕುತೂಹಲ ಮೂಡಿಸಿದೆ.

Tamil Nadu CM Vijay: ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌; ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ

ಒಂದಾಗಲಿದ್ದಾರೆಯೇ ವಿಜಯ್-ಸಂಗೀತ?

ಮತ್ತೊಂದೆಡೆ, ವಿಜಯ್ ಮತ್ತು ಸಂಗೀತ ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಊಹಾಪೋಹಗಳೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಕೌಟುಂಬಿಕ ಕಾರಣಗಳಿಗಾಗಿ ಇಬ್ಬರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು, ಕುಟುಂಬಕ್ಕಾಗಿ ಮತ್ತು ಮಕ್ಕಳಿಗಾಗಿ ಒಟ್ಟಿಗೆ ಜೀವನ ಮಾಡಲು ಯೋಚಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗಿನಿಂದ ಬಿರುಗಾಳಿ ಎದ್ದಿದ್ದ ಈ ಕುಟುಂಬದಲ್ಲಿ ಈಗ ತಂಗಾಳಿ ಬೀಸಲಿದೆಯಾ ಎಂಬ ಪ್ರಶ್ನೆ ಮೂಡಿದೆ.

Tamil Nadu CM Vijay: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌; 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಣೆ

ಆದರೆ, ವಾಸ್ತವದ ಪರಿಸ್ಥಿತಿಯೇ ಬೇರೆ ಇದೆ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಟಿ ತ್ರಿಶಾ ಕೃಷ್ಣನ್ ಜೊತೆಗೆ ಸಿಎಂ ವಿಜಯ್ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಬೇರೆಯದೇ ಸೂಚನೆ ನೀಡುತ್ತಿದೆ. ಹೀಗಾಗಿ, ಜೂನ್ 15 ರಂದು ನ್ಯಾಯಾಲಯದಲ್ಲಿ ಇಬ್ಬರ ಪರ ವಕೀಲರು ಮಂಡಿಸಲಿರುವ ವಾದಗಳು ಮತ್ತು ತೆಗೆದುಕೊಳ್ಳುವ ನಿರ್ಧಾರಗಳ ಆಧಾರದ ಮೇಲಷ್ಟೇ ಈ ಪ್ರಕರಣಕ್ಕೆ ಅಧಿಕೃತ ಸ್ಪಷ್ಟನೆ ಸಿಗಲಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಿಎಂ ವಿಜಯ್ ಭೇಟಿ

ಈ ಎಲ್ಲಾ ವೈಯಕ್ತಿಕ ಹಾಗೂ ರಾಜಕೀಯ ಕೆಲಗಳ ನಡುವೆ ಸಿಎಂ ವಿಜಯ್ ಅವರು ಶುಕ್ರವಾರ (ಜೂ. 12) ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ ದರ್ಶನ ಪಡೆದು, 1.60 ಕೆಜಿ ತೂಕದ ಬೆಳ್ಳಿ ಖಡ್ಗವನ್ನು ಮೂಕಾಂಬಿಕಾ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್‌, ನಂತರ ತಮಿಳುನಾಡಿನಿಂದ ಬಂದಿದ್ದ ಸರ್ಕಾರಿ ವಾಹನದಲ್ಲಿ ಕೊಲ್ಲೂರಿಗೆ ತೆರಳಿದರು.