ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Actor Darshan: ದರ್ಶನ್‌ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

Actor Darshan: ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಆರೋಪಿಗಳ ಸೂಚನೆ ನೀಡಿದೆ. ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದರು. ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಲು ಹೆಡ್ ಫೋನ್ ವ್ಯವಸ್ಥೆ ಇಲ್ಲ. ಹೀಗಾಗಿ ಖುದ್ದು ಹಾಜರಿಗೆ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು.

ನಟ ದರ್ಶನ್‌

ರೇಣುಕಾಸ್ವಾಮಿ ಪ್ರಕರಣದ (Renukaswamy Case) ಕೋರ್ಟ್ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಅವರು ಮನವಿ ಸಲ್ಲಿಸಿದ್ದರು. ದರ್ಶನ್ (Darshan Thoogudeepa) ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ

ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಆರೋಪಿಗಳ ಸೂಚನೆ ನೀಡಿದೆ. ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದರು. ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಲು ಹೆಡ್ ಫೋನ್ ವ್ಯವಸ್ಥೆ ಇಲ್ಲ. ಹೀಗಾಗಿ ಖುದ್ದು ಹಾಜರಿಗೆ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಇದಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ತೀವ್ರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Prithviraj Sukumaran: ಪೃಥ್ವಿರಾಜ್ ಸುಕುಮಾರನ್ ಆಕ್ಷನ್ ಥ್ರಿಲ್ಲರ್ ಮೂವಿ ಈ ಒಟಿಟಿಗೆ ಎಂಟ್ರಿ!

ವಕೀಲರೊಂದಿಗೆ ಮಾತನಾಡಲು ಖಾಸಗಿತನದ ವ್ಯವಸ್ಥೆಗೆ ಸೂಚನೆ ಕೂಡ ನೀಡಿದೆ. ನಿಯಮ 8.3 ಅಡಿಯಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದೆ ಕೋರ್ಟ್‌.

ಸಾಕ್ಷ್ಯ ವಿಚಾರಣೆ ವೇಳೆ ಅಗತ್ಯವಿರುವಾಗ ಸಂಪರ್ಕದ ಅವಕಾಶ ಮಾಡಿಕೊಟ್ಟಿದೆ ವಕೀಲರೊಂದಿಗೆ ಆರೋಪಿಗಳ ಸಂಪರ್ಕಕ್ಕೆ ಅವಕಾಶವಿದೆ. ಸಾಕ್ಷ್ಯ ವಿಚಾರಣೆಗೆ ಮೊದಲು, ನಡುವೆ, ನಂತರ ಸಂಪರ್ಕಿಸಬಹುದಾಗಿದೆ. ಸಾಕ್ಷಿಗಳ ಹೇಳಿಕೆಯನ್ನು ಸ್ಪಷ್ಟವಾಗಿ ಕೇಳುವಂತೆ ವ್ಯವಸ್ಥೆ ಕಲ್ಪಿಸಿ ಎಂದು ಸಿವಿಲ್ ನ್ಯಾಯಾಲಯದ ತಾಂತ್ರಿಕ ವಿಭಾಗಕ್ಕೆ ಕೋರ್ಟ್ ಸೂಚನೆ ನೀಡಿದೆ.

59ನೇ CCH ಕೋರ್ಟ್ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಈ ಆದೇಶ ಹೊರಡಿಸಿದ್ದಾರೆ. ಕೋರ್ಟ್​ಗಳಿಗಾಗಿ ರೂಪಿಸಿರುವ ವಿಡಿಯೋ ಕಾನ್ಫರೆನ್ಸ್ ನಿಯಮ 8.3 ಅಡಿಯಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

ಸೊಳ್ಳೆ ಕಾಟ ದೊಡ್ಡ ಸಮಸ್ಯೆ

ನಟ ದರ್ಶನ್‌ ತೂಗುದೀಪ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೊಳ್ಳೆ ಕಾಟ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇತ್ತೀಚೆಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ಸ್ವಾರಸ್ಯಕರ ಪ್ರಸಂಗ ನಡೆದಿದೆ.

ಅಧಿಕಾರಿಗಳ ಭೇಟಿಯ ವೇಳೆ ನಟ ದರ್ಶನ್, "ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ, ದಯವಿಟ್ಟು ಇದಕ್ಕೆ ಏನಾದರೂ ಪರಿಹಾರ ಕಲ್ಪಿಸಿಕೊಡಿ ಸರ್..." ಎಂದು ಮನವಿ ಮಾಡಿಕೊಂಡರು. ಇದಕ್ಕೆ ಖಡಕ್ ಆಗಿಯೇ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, "ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿ: Actor Nagabhushana: ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ

ಜೈಲಿನ ಮ್ಯಾನ್ಯುಯಲ್‌ನಲ್ಲಿ ನಿಯಮಾನುಸಾರ ಏನಿರುತ್ತದೆಯೋ ಅಷ್ಟನ್ನೇ ಒದಗಿಸಲು ಸಾಧ್ಯ. ಮ್ಯಾನ್ಯುಯಲ್ ಪ್ರಕಾರ ಏನಾದರೂ ಅಗತ್ಯವಿದ್ದರೆ ಕೇಳಿ, ಸೊಳ್ಳೆ ವಿಚಾರದಲ್ಲಿ ನಾವೇನೂ ಮಾಡಲು ಆಗುವುದಿಲ್ಲ" ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

Yashaswi Devadiga

View all posts by this author