ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಝೀ ಕನ್ನಡ (Zee Kannada) ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ.
ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ ಶೋ ಮತ್ತಷ್ಟು ಮನ ರಂಜನೆ ನೀಡಲು ಸಜ್ಜಾಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನವೆಂಬರ್ 15ರಂದು ಪ್ರೀಮಿಯರ್ ಆಗಲಿದ್ದು, ಪ್ರತೀ ಶನಿವಾರ ಮತ್ತು ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗಲಿದೆ. ತನ್ನ ಮಾತಿನ ಮೂಲಕ ಜನಮನ್ನಣೆ ಪಡೆದ ಅನುಶ್ರೀ ಅವರು ಈ ಸೀಸನ್‌ನ ಆಂಕರ್ ಆಗಿರಲಿದ್ದು, ಜಡ್ಜಸ್ ಪ್ಯಾನೆಲ್‌ನಲ್ಲಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್, ಡಿಂಪಲ್ ಕ್ವೀನ್ ರಚಿತಾ ರಾಮ್, ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಮತ್ತು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಇರಲಿದ್ದಾರೆ.
ಕರುನಾಡ ಚಕ್ರವರ್ತಿ ಎಂದು ಚಿರಪರಿಚಿತರಾಗಿರುವ ಡಾ.ಶಿವರಾಜ್ ಕುಮಾರ್ ಅವರು ಅತ್ಯುತ್ತಮ ನಟ ಮಾತ್ರವಲ್ಲದೆ ಒಳ್ಳೆಯ ಡ್ಯಾನ್ಸರ್ ಆಗಿದ್ದು ತನ್ನ ಡಿಫರೆಂಟ್ ಸ್ಟೈಲ್ ಗೆ ಜನಪ್ರಿಯ. ಇನ್ನು ಇವರ ವರುಷಗಳ ಅನುಭವ, ಜ್ಞಾನ ಸ್ಪರ್ಧಿಗಳಿಗೆ ಹುಮ್ಮಸ್ಸು ನೀಡಲಿದೆ. ನಟಿ ಮಾತ್ರವಲ್ಲದೆ, ಶಾಸ್ತ್ರೀಯ ನೃತ್ಯಗಾರ್ತಿಯೂ ಆಗಿರುವ ರಚಿತಾರಾಮ್ ಬಹುಮುಖ ಪ್ರತಿಭೆ ಯಾಗಿದ್ದು ಕಾರ್ಯ ಕ್ರಮದ ಮೆರುಗನ್ನು ಹೆಚ್ಚಿಸಲಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ವಿಜಯ ರಾಘವೇಂದ್ರ ಅವರ ನಟನೆ, ಸಂಗೀತ ಮತ್ತು ಡಾನ್ಸ್ ಬಗೆಗಿನ ಜ್ಞಾನ, ಮತ್ತು ಅರ್ಜುನ್ ಜನ್ಯ ಅವರಿಗಿರುವ ಸಂಗೀತ, ತಾಳ, ಲಯಗಳ ಅರಿವು ಈ ಶೋಗೆ ಹೆಚ್ಚಿನ ಶಕ್ತಿ ತುಂಬಲಿದೆ.
ಇದನ್ನು ಓದಿ:Marnami Movie: 'ಮಾರ್ನಮಿ' ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ- ಫೋಟೋಸ್ ಇಲ್ಲಿದೆ!
ಈ ಸೀಸನ್‌ನಲ್ಲಿ ಬಿಗ್ ಟ್ವಿಸ್ಟ್ ಇರಲಿದ್ದು ಜನಪ್ರಿಯ ಸೆಲೆಬ್ರಿಟಿಗಳು ರಾಜ್ಯದಾದ್ಯಂತ ಆಯ್ಕೆಯಾದ ಪ್ರತಿಭಾವಂತ ನೃತ್ಯಗಾರರೊಂದಿಗೆ ಜೋಡಿಯಾಗಿ ಪಾಲ್ಗೊಳ್ಳಲಿದ್ದಾರೆ. ಸೆಲೆಬ್ರಿಟಿಗಳ ಸಾಲಿನಲ್ಲಿ ಧನಂಜಯ್, ಭವ್ಯಾ ಗೌಡ, ಆರತಿ ಪಡುಬಿದ್ರಿ, ಅಮೋಘ್, ಪ್ರತೀಕ್ಷಾ, ನಂದಿನಿ, ಅನೂಪ್, ಸ್ಮೈಲ್ ಗುರು ರಕ್ಷಿತ್, ಜಗಪ್ಪ, ಅನನ್ಯ, ಪೂಜಾ ರಮೇಶ್ ಮತ್ತು ಅಶ್ವಿನ್ ಇರಲಿದ್ದಾರೆ. ಮೊದಲ ಎಪಿ ಸೋಡ್ ನಲ್ಲಿ ಸೆಲೆಬ್ರಿಟಿ ಡ್ಯಾನ್ಸರ್ ಗಳು ಇರಲಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಆಡಿಷನ್ ನಲ್ಲಿ ಸೆಲೆಕ್ಟ್ ಆದ ಡ್ಯಾನ್ಸರ್ ಗಳು ಮುಂಬರಲಿರುವ ಎಪಿಸೋಡ್ ಗಳಲ್ಲಿ ಇವರಿಗೆ ಜೋಡಿಯಾಗಲಿದ್ದಾರೆ. ಯಾವ ಸೆಲೆಬ್ರಿಟಿಗೆ ಯಾರು ಜೋಡಿ ಆಗ್ತಾರೆ ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಲಿದೆ.
ಜೀ ಕನ್ನಡ ಮನರಂಜನೆ ಲೋಕದಲ್ಲಿ ತನ್ನ ಪ್ರೇಕ್ಷಕರಿಗೆ ಸದಾ ಹೊಸತನವನ್ನು ನೀಡುತ್ತಾ ಕರ್ನಾಟಕದ ಮನೆಮಾತಾಗಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತಾ ಬಂದಿರುವ ಜೀ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹೊಸ ಸೀಸನ್ ಮೂಲಕ ಡಾನ್ಸ್ ಹಬ್ಬವನ್ನು ಸೃಷ್ಠಿಸಲಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನ ಹೊಸ ಸೀಸನ್ ಡಾನ್ಸ್ ಮತ್ತು ಕ್ರಿಯೇಟಿವಿಟಿ ಎದ್ದು ಕಾಣಲಿದೆ. ಪ್ರತಿ ಎಪಿಸೋಡ್‌ನಲ್ಲಿ ವಿಭಿನ್ನ ಥೀಮ್‌ಗಳು, ರೋಮಾಂಚನಕಾರಿ ಫೇಸ್‌ಆಫ್‌ಗಳು ಮತ್ತು ಕರ್ನಾಟಕದ ಸಂಸ್ಕೃತಿ, ರಿದಮ್ ಮತ್ತು ಆತ್ಮಸ್ಥೈರ್ಯವನ್ನು ಪ್ರತಿಬಿಂಬಿಸುವ ಡಾನ್ಸ್ ಗಳು ಇರಲಿದ್ದು ಇದು ಪ್ರೇಕ್ಷಕರನ್ನು ತನ್ನತ್ತ ಸೆಳೆಯಲಿದೆ. ಇನ್ನು ವರುಷದ ಬಳಿಕ ಈಗ ಡಾನ್ಸ್ ಕರ್ನಾಟಕ ಡಾನ್ಸ್ ಪ್ರೇಕ್ಷಕರನ್ನು ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ.ಡಾನ್ಸ್ ಹಬ್ಬವನ್ನು ಕಣ್ಣು ತುಂಬಿಸಿ ಕೊಳ್ಳಲು ಇದೇ15 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 7:30 ಕ್ಕೆ ಝೀ ಕನ್ನಡ ಛಾನೆಲ್ ಅನ್ನು ವೀಕ್ಷಿಸಿ..