ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Actor Darshan: ರೇಣುಕಾಸ್ವಾಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದು, ನಟ ದರ್ಶನ್ ಇರುವ ಜೈಲು ಕೊಠಡಿಯಿಂದ ಅಲ್ಲದೆ ಬೇರೆ ಪ್ರತ್ಯೇಕ ಜೈಲು ಕೊಠಡಿಯಿಂದ ತಮ್ಮನ್ನು ಕೋರ್ಟ್‌ಗೆ ಹಾಜರುಪಡಿಸಬೇಕೆಂದು ಮನವಿ ಮಾಡಿದ್ದಾರೆ.

ನಟ ದರ್ಶನ್‌

ನಟ ದರ್ಶನ್ (Actor Darshan) ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದಲ್ಲಿ ಇದೀಗ ಭಾರಿ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ(Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೋರ್ಟ್ ಗೆ ಅರ್ಜಿ

ಎ 14 ಪ್ರದೋಷ್ ಪರ ವಕೀಲರಿಂದ 59 ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರತ್ಯೇಕ ಜೈಲು ಕೊಠಡಿಯಿಂದ ಕೋರ್ಟ್ ಗೆ ಪ್ರದೋಷ್ ಹಾಜರುಪಡಿಸಲು ಮನವಿ ಮಾಡಲಾಗಿದೆ.

ದರ್ಶನ್ ಇರುವ ಕೊಠಡಿ ಬಿಟ್ಟು ಬೇರೆ ಜೈಲು ಕೊಠಡಿಯಿಂದ‌ ಹಾಜರುಪಡಿಸಲು ಸಲ್ಲಿಸಿದ ಪ್ರದೋಷ್ ಪರ ವಕೀಲರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಾಸಿಕ್ಯೂಷನ್ ನಿಲುವು ತಿಳಿಸಲು ಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: Lock Upp Season 2 : ನೆಟ್‌ಫ್ಲಿಕ್ಸ್‌ನ ಫೇಮಸ್‌ ಶೋ ʻಲಾಕ್ ಅಪ್ʼ! ವಿನ್ನರ್‌ ಆದ ಶ್ರೇಯಾ ಕಲ್ರಾ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿತ್ತು.

ಈ 3 ಆರೋಪಿಗಳು ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ತುಮಕೂರಿನ ಬಾರ್ ಮಾಲೀಕ ಹಾಗೂ ಸಿಸಿಟಿವಿ ಡಿವಿಆರ್ ಸೀಜ್‌ಗೆ ಸಂಬಂಧಿಸಿದ ಸಾಕ್ಷಿ ಸಂದೀಪ್ ಎಂಬುವವರಿಗೆ ಆರೋಪಿಗಳ ಪರವಾಗಿ ಸುಳ್ಳು ಸಾಕ್ಷಿ ಹೇಳುವಂತೆ ಆಮಿಷವೊಡ್ಡಿ, ವಾಟ್ಸಾಪ್ ಕರೆಗಳ ಮೂಲಕ ಹೆದರಿಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಅದರಂತೆ, ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈ ಮೂವರನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಿ ಜೈಲಿಗಟ್ಟಿದ್ದರು. ಜೊತೆಗೆ ತನಿಖೆಯ ಭಾಗವಾಗಿ ಇವರ ಮೊಬೈಲ್‌ಗಳನ್ನು ವಶಪಡಿಸಿಕೊಂಡು FSL ಪರೀಕ್ಷೆಗೂ ಕಳುಹಿಸಲಾಗಿತ್ತು.

ಇದನ್ನೂ ಓದಿ: Bigg Boss Kannada 13: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್‌! ಇಲ್ಲಿದೆ ಹೊಸ ಪ್ರೋಮೋ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂಕೋರ್ಟ್ ಈಗಾಗಲೇ ರದ್ದುಗೊಳಿಸಿದ್ದು, ಪ್ರಸ್ತುತ ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ಮುಖ್ಯ ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಕೂಡ ನಡೆಯುತ್ತಿದೆ.

Yashaswi Devadiga

View all posts by this author