Actor Darshan: ಬರ್ತ್‌ಡೇ ಮುಗಿದ ಬೆನ್ನಲ್ಲೇ ದರ್ಶನ್‌ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್!
Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಅಮಾನತುಗೊಂಡಿದ್ದ ಗನ್ ಲೈಸೆನ್ಸ್ಗೆ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ.
ನಟ ದರ್ಶನ್ -
ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ (Darshan) ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ದರ್ಶನ್ ಅವರ ಗನ್ ಲೈಸೆನ್ಸ್ (Temporary Relief for Actor) ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಅಮಾನತುಗೊಂಡಿದ್ದ ಗನ್ ಲೈಸೆನ್ಸ್ಗೆ ಹೈಕೋರ್ಟ್ (High Court) ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ. ಈ ಆದೇಶದಿಂದ ದರ್ಶನ್‌ಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.
2008 ರಿಂದಲೂ ಅಧಿಕೃತವಾಗಿ ಬಂದೂಕು ಪರವಾನಗಿ
ದರ್ಶನ್ ಅವರು 2008 ರಿಂದಲೂ ಅಧಿಕೃತವಾಗಿ ಬಂದೂಕು ಪರವಾನಗಿ ಹೊಂದಿದ್ದಾರೆ. 2024ರಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಸಿಕ್ಕ ಬಳಿಕ ಗನ್ ಲೈಸೆನ್ಸ್ ಅನ್ನು ಪೊಲೀಸರು ಅಮಾನತುಗೊಳಿಸಿದ್ದರು.
ಇದನ್ನೂ ಓದಿ: Annayya Kannada Serial: ಪರಶು ಮುಖವಾಡ ಬಯಲಾಗುತ್ತಾ? ರತ್ನಾಗೆ ಮಂಗಳ ಸೂತ್ರದ ಭಾಗ್ಯ ಸಿಗುತ್ತಾ?
ಈ ಗನ್ ಬಳಸಿ ಸಾಕ್ಷಿಗಳಿಗೆ ಬೆದರಿಸಬಹುದೆಂದು ಗನ್ ಲೈಸೆನ್ಸ್ ಅಮಾನತುಪಡಿಸಲಾಗಿತ್ತು. ನಟ ದರ್ಶನ್ ಅವರು ಪೊಲೀಸರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆಯನ್ನು ಪರಿಶೀಲಿಸಿದ ನ್ಯಾಯಪೀಠವು ಅಮಾನತು ಆದೇಶಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ದರ್ಶನ್ ಅವರಿಗೆ ತಾತ್ಕಾಲಿಕವಾಗಿ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ.
ಜಾಮೀನು ಪಡೆಯುವುದಕ್ಕೆ ಹರಸಾಹಸ
ದರ್ಶನ್ ಪರ ವಕೀಲ ಎಸ್.ಸುನೀಲ್ ಕುಮಾರ್, ಸದ್ಯ ಜೈಲಿನಲ್ಲಿರುವ ದರ್ಶನ್ ಜಾಮೀನು ಪಡೆಯುವುದಕ್ಕೆ ಹರಸಾಹಸ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಯಲ್ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಇದಕ್ಕೆ ಇನ್ನೂ ಸಾಕಷ್ಟು ಸಮಯ ಹಿಡಿಯಲಿದೆ.
ದರ್ಶನ್ ವಕೀಲರು ಸಲ್ಲಿಸಿದ ಅರ್ಜಿಗೆ ಎಸ್‌ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಪೊಲೀಸರು ಕೂಡ ತ್ವರಿತಗತಿಯಲ್ಲಿ ವಿಚಾರಣೆ ಮಾಡುವುದಕ್ಕೆ ಆಕ್ಷೇಪ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಆಗಸ್ಟ್ 14ರಂದು ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಇತರ ಆರೋಪಿಗಳು ಆಗಸ್ಟ್ 14ರಂದು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಮತ್ತು ಎ 2 ಆರೋಪಿ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ 2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನೂ ಓದಿ: Rashmika Vijay Wedding: ಕುಟುಂಬದೊಂದಿಗೆ ಉದಯಪುರಕ್ಕೆ ರಶ್ಮಿಕಾ-ವಿಜಯ್ ಪ್ರಯಾಣ! ಜೋಡಿ ಲುಕ್ ಕಂಡು ಫ್ಯಾನ್ಸ್ ಖುಷ್
ಇದರ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ಎಲ್ಲ ಆರೋಪಿಗಳ ಜಾಮೀನು ರದ್ದುಗೊಳಿಸಿತ್ತು.