ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ: 6 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ, ಆರೋಪಿಗಳಲ್ಲಿ ಸುದೀಪ್‌ ಫ್ಯಾನ್ಸ್‌ ಕೂಡ ಇದ್ದಾರೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 45ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದ ಆರು ಮಂದಿಯಲ್ಲಿ ನಟ ಸುದೀಪ್ ಅವರ ಅಭಿಮಾನಿಗಳೂ ಸೇರಿದ್ದು, ನಕಲಿ ಐಡಿಗಳ ಮೂಲಕ ಇವರು ಕಿರುಕುಳ ನೀಡುತ್ತಿದ್ದರು ಎಂಬುದು ಸಾಬೀತಾಗಿದೆ.

ದರ್ಶನ್‌ ಪತ್ನಿ ಬಗ್ಗೆ ಅಶ್ಲೀಲ ಕಾಮೆಂಟ್; ಆರೋಪಿಗಳಲ್ಲಿ ಕಿಚ್ಚನ ಫ್ಯಾನ್ಸ್‌

-

Avinash GR
Avinash GR Mar 12, 2026 12:45 PM

ʻಚಾಲೆಂಜಿಂಗ್‌ ಸ್ಟಾರ್‌ʼ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್‌ ಮಾಡಿದವರ ವಿರುದ್ಧ ದೂರು ನೀಡಲಾಗಿತ್ತು. ಆದರೆ ಕೆಲ ದಿನಗಳ ನಂತರ ವಿಜಯಲಕ್ಷ್ಮಿ ಅವರು ಪೊಲೀಸರ ತನಿಖೆ ಬಗ್ಗೆ ಅಸಮಾಧನ ಹೊರ ಹಾಕಿದ್ದರು. ಆ ಬಳಿಕ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಈ ಪ್ರಕರಣದಲ್ಲಿ ಈವರೆಗೂ ಒಟ್ಟು 6 ಮಂದಿಯನ್ನು ಬಂಧಿಸಿದ್ದು, ಇದೀಗ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್‌ ಅನ್ನು ಕೂಡ ಸಲ್ಲಿಕೆ ಮಾಡಿದ್ದಾರೆ.

ಆರೋಪಿಗಳಲ್ಲಿ ಸುದೀಪ್‌ ಫ್ಯಾನ್ಸ್‌ ಕೂಡ ಇದ್ದಾರೆ

ಬೆಂಗಳೂರಿನ 45ನೇ ಎಸಿಎಂಎಂ ಕೋರ್ಟ್​ಗೆ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ಸುಮಾರು 473 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್​ಶೀಟ್​ನಲ್ಲಿ 6 ಆರೋಪಿಗಳ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದು, ಈ ಆರೋಪಿಗಳಲ್ಲಿ ಸುದೀಪ್‌ ಅಭಿಮಾನಿಗಳೂ ಇದ್ದಾರೆ. ವಿಜಯಲಕ್ಷ್ಮಿ ಅವರ ಬಗ್ಗೆ ಕೆಟ್ಟದಾಗಿ ಕಾಮೆಂಟ್‌ ಮಾಡುವ ಉದ್ದೇಶದಿಂದಲೇ ನಕಲಿ ಐಡಿಗಳನ್ನು ಆರೋಪಿಗಳು ಕ್ರಿಯೆಟ್‌ ಮಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

Kichcha Sudeep: ವಿಜಯಲಕ್ಷ್ಮಿ ದರ್ಶನ್‌ ಬಗ್ಗೆ ಕೇಳಿದ ಪ್ರಶ್ನೆ; ಲೈಫಲ್ಲಿ ನನ್ನ ಬಗ್ಗೆ ಮಾತಾಡಿ, ಪಕ್ಕದ್ಮನೆ ಬಗ್ಗೆ ಅಲ್ಲ ಎಂದ ಕಿಚ್ಚ

ಇನ್ನೂ 12 ಐಡಿಗಳ ಮಾಹಿತಿ ಸಿಕ್ಕಿಲ್ಲ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಟಾರ್ಗೆಟ್ ಮಾಡಿ, ಅವರ ಫೋಟೋಗಳನ್ನು ಶೇರ್‌ ಮಾಡಿ, ಆರೋಪಿಗಳು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಇದೀಗ ತಮ್ಮ ತಪ್ಪನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಎಲ್ಲಾ ಆರು ಆರೋಪಿಗಳ ಮೊಬೈಲ್‌ಗಳನ್ನು ಜಪ್ತಿ ಮಾಡಿ ಮಾಡಿರುವ ಸಿಸಿಬಿ, ಅವುಗಳನ್ನು ಎಫ್​ಎಸ್​ಎಲ್​ಗೆ ರವಾನೆ ಮಾಡಿದೆ. ಎಫ್​​ಎಸ್​ಎಲ್​ನಿಂದ ಮೊಬೈಲ್ ರಿಟ್ರೀವ್ ವರದಿ ಬರಬೇಕಿದೆ. ಇನ್ನು, 12 ಐಡಿಗಳ ಮಾಹಿತಿ ಸಿಕ್ಕಿಲ್ಲವಾದ್ದರಿಂದ ಕಂಪನಿಗಳಿಗೆ ಪತ್ರ ಬರೆಯಲಾಗಿದೆ. ಸದ್ಯ ಕೋರ್ಟ್​ಗೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಸುವುದಾಗಿ ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. ‌

ʻಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ.. ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ..ʼ; ದಿಢೀರನೇ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ವಿಜಯಲಕ್ಷ್ಮಿ ದರ್ಶನ್

ಜಾಮೀನಿಗಾಗಿ ಆರೋಪಿಗಳಿಂದ ಅರ್ಜಿ

ಇನ್ನು, ಈ ಪ್ರಕರಣದ ಆರೋಪಿಗಳು 2 ತಿಂಗಳಿನಿಂದ ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿದ್ದಾರೆ. ಸದ್ಯ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆಯನ್ನು ಹೈಕೋರ್ಟ್‌ ಮಾರ್ಚ್ 24ಕ್ಕೆ ಮುಂದೂಡಿದೆ.