ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Devil Movie: ಡಿ ಬಾಸ್‌ ಫ್ಯಾನ್ಸ್‌ಗೆ ಡಬಲ್‌ ಧಮಾಕಾ! ಸಾಂಗ್‌ ಬಿಡುಗಡೆ ಬೆನ್ನಲ್ಲೇ ಡೆವಿಲ್‌ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Devil Movie Release Date: ಡೆವಿಲ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಡಿಸೆಂಬರ್​ನಲ್ಲಿ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗೆ ಬರಲಿದೆ. ನಟ ದರ್ಶನ್ ಅಭಿನಯಿಸಿರುವ ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು ಈಗಾಗಲೇ ಟೀಸರ್ ಬಿಡುಗಡೆಯಾಗಿದೆ. ನಟ ದರ್ಶನ್ ಸದ್ಯ ಜೈಲಿನಲ್ಲಿದ್ದರೂ ಸಿನಿಮಾ ರಿಲೀಸ್ ಆಗುವುದರಲ್ಲಿ ಡೌಟೇ ಇಲ್ಲ.

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಇಂದು ಡಬಲ್‌ ಗುಡ್‌ನ್ಯೂಸ್‌ ಸಿಕ್ಕಿದೆ. ಬಹು ದಿನಗಳಿಂದ ಫ್ಯಾನ್ಸ್‌ ಬಹಳ ಕಾತರದಿಂದ ಕಾಯುತ್ತಿದ್ದ ಡೆವಿಲ್‌ ಸಿನಿಮಾದ(Devil Movie) ಇದ್ರೆ ನೆಮ್ದಿಯಾಗಿರ್ಬೇಕು ಹಾಡು ಇಂದು ಬೆಳಗ್ಗೆ ರಿಲೀಸ್‌ ಆಗಿದೆ. ರಿಲೀಸ್‌ ಆದ ಕೇವಲ ಅರ್ಧಗಂಟೆಯಲ್ಲಿ 5ಲಕ್ಷ ವ್ಯೂವ್ಸ್‌ ಪಡೆದುಕೊಂಡಿದೆ. ಇದೀಗ ಈ ಸಂಭ್ರಮದ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಡೆವಿಲ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಡಿಸೆಂಬರ್​ನಲ್ಲಿ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗೆ ಬರಲಿದೆ. ನಟ ದರ್ಶನ್ ಅಭಿನಯಿಸಿರುವ ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು ಈಗಾಗಲೇ ಟೀಸರ್ ಬಿಡುಗಡೆಯಾಗಿದೆ. ನಟ ದರ್ಶನ್ ಸದ್ಯ ಜೈಲಿನಲ್ಲಿದ್ದರೂ ಸಿನಿಮಾ ರಿಲೀಸ್ ಆಗುವುದು ಪಕ್ಕಾ ಆಗಿದೆ.

ಚಿತ್ರದ ಟೀಸರ್‌ ಇಲ್ಲಿದೆ



ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ವಿಲನ್‌, ತಾರಕ್ ಮುಂತಾದ ಸಿನಿಮಾಗಳನ್ನು ಮಾಡಿದ್ದ ಅವರು ಈಗ ಪಕ್ಕಾ ಮಾಸ್ ಕಥೆಯನ್ನು ಪ್ರೇಕ್ಷಕರ ಎದುರು ತರಲು ಸಜ್ಜಾಗಿದ್ದಾರೆ. ದರ್ಶನ್ ಜೊತೆ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆ ಹಂತದ ಕೆಲಸಗಳಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಬಹು ನಿರೀಕ್ಷಿತ ಚಿತ್ರ ಡೆವಿಲ್‌ ಸಿನಿಮಾದ ಇದ್ರೆ ನೆಮ್ಮದಿಯಾಗಿರ್ಬೇಕು ಎನ್ನುವ ಸಾಂಗ್‌ ಸ್ವಾತಂತ್ರ್ಯ ದಿನಾಚರಣೆಯ ದಿನವೇ ರಿಲೀಸ್‌ ಆಗಬೇಕಿತ್ತು. ಆದರೆ ದರ್ಶನ್‌ ಮತ್ತೆ ಜೈಲುಪಾಲಾದ್ದರಿಂದ ಚಿತ್ರತಂಡ ಅದನ್ನು ಮುಂದೂಡಿತ್ತು.

ಈ ಸುದ್ದಿಯನ್ನೂ ಓದಿ: Vijayalakshmi Darshan: ಡೆವಿಲ್‌ ಚಿತ್ರದ ಪರ ವಿಜಯಲಕ್ಷ್ಮಿ ಕ್ಯಾಂಪೇನ್‌; ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

ದರ್ಶನ್‌ ಈಗ ಮತ್ತೆ ಜೈಲು ಪಾಲಾಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಬೇಲ್ ಸಿಗದಿದ್ರೆ ಡೆವಿಲ್ ಚಿತ್ರ ತಂಡಕ್ಕೆ ತೊಂದರೆಯಾಗಬಾರದೆಂದು ಶೂಟಿಂಗ್‌ ಸಂಪೂರ್ಣ ಮುಗಿಸಲಾಗಿದೆ. ಕಳೆದ ವಾರವಷ್ಟೇ ರಾಜಸ್ಥಾನದಲ್ಲಿ ಸಂಪೂರ್ಣ ಚಿತ್ರೀಕರಣ ಮುಗಿಸಿ ದರ್ಶನ್‌ ವಾಪಸ್‌ ಆಗಿದ್ದರು. ಡೆವಿಲ್ ಸಿನಿಮಾದ ತನ್ನ ಪತ್ರದ ಡಬ್ಬಿಂಗ್ ಕೂಡ ಮಾಡಿ ಕೊಟ್ಟಿದ್ದಾರೆ. ಸಿನಿಮಾ ಸಂಬಂಧಿಸಿದ ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ಡೆವಿಲ್ ಸಿನಿಮಾಗೆ ಸುಮಾರು 40 ಕೋಟಿಗೂ ಅಧಿಕ ಬಂಡವಾಳವನ್ನು ಹೂಡಿದ್ದಾರೆ.