S Narayana: ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಆರೋಪ! ಸೊಸೆ ಕೊಟ್ಟ ದೂರಿನಲ್ಲೇನಿದೆ?
ಖ್ಯಾತ ನಟ ಹಾಗೂ ನಿರ್ದೇಶಕ ಎಸ್ ನಾರಾಯಣ ಅವರ ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ. ಎಸ್.ನಾರಾಯಣ್ ಸೊಸೆ ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ಎಸ್.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ.

-

ಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಎಸ್ ನಾರಾಯಣ ಅವರ (S Narayana) ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ. ಎಸ್.ನಾರಾಯಣ್ ಸೊಸೆ ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ಎಸ್.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏನಿದು ಆರೋಪ?
ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.
ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ಟರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿದ್ದಾರೆ. ಪ್ರತಿ ದಿನ ಅತ್ತೆ ಭಾಗ್ಯಲಕ್ಷ್ಮಿ (ಎಸ್.ನಾರಾಯಣ್ ಪತ್ನಿ) ಹಾಗು ಪತಿ ನನ್ನ ಮೇಲೆ ಹಲ್ಲೆ ನಡೆಸಿ ಹಣ ತರುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಅತ್ತೆ ಭಾಗ್ಯಲಕ್ಷ್ಮಿ ಹಾಗು ಪತಿ ನನ್ನ ಮನೆಯಿಂದ ಹೊರ ಹಾಕಿದ್ದಾರೆ. ನನ್ನ ಮದುವೆಯಾದಾಗಿನಿಂದ ಅವಾಚ್ಯ ಶಬ್ದಗಳಿಂದ ನಿಂದಿಸುಲಾಗುತ್ತಿದೆ ಎಂದು ಪವಿತ್ರಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.