ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

2020-2021ನೇ ಸಾಲಿನ ಡಾ. ರಾಜ್‌ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ; ಸಾ.ರಾ. ಗೋವಿಂದು, ಜಯಮಾಲಾಗೆ ಗೌರವ

2020-2021ನೇ ಸಾಲಿನ, ರಾಜ್ಯ ಸರ್ಕಾರದಿಂದ ನೀಡಲಾಗುವ ಪ್ರತಿಷ್ಠಿತ ಡಾ. ರಾಜ್‌ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಘೋಷಿಸಲಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಮಾಲಾ ಅವರಿಗೆ 2020ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿ ದೊರೆತಿದೆ. 2021ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿಯನ್ನು ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು ಅವರಿಗೆ ಘೋಷಣೆಯಾಗಿದೆ.

ಡಾ. ರಾಜ್‌ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಘೋಷಣೆ

ಜಯಮಾಲಾ ಮತ್ತು ಸಾ.ರಾ. ಗೋವಿಂದು (ಸಂಗ್ರಹ ಚಿತ್ರ) -

Ramesh B
Ramesh B Jan 8, 2026 9:47 PM

ಬೆಂಗಳೂರು, ಜ. 8: 2020-2021ನೇ ಸಾಲಿನ, ರಾಜ್ಯ ಸರ್ಕಾರದಿಂದ ನೀಡಲಾಗುವ ಪ್ರತಿಷ್ಠಿತ ಡಾ. ರಾಜ್‌ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಘೋಷಿಸಲಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಮಾಲಾ ಅವರಿಗೆ 2020ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿ ದೊರೆತಿದೆ. 2020ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಭಾಜನರಾಗಿದ್ದಾರೆ. ಜೀವಮಾನ ಸಾಧನೆಗಾಗಿ ಹಿರಿಯ ಸ್ಥಿರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ್​ ನಾರಾಯಣ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟಿಸಲಾಗಿದೆ.

2021ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿಯನ್ನು ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು ಅವರಿಗೆ ಘೋಷಣೆಯಾಗಿದ್ದು, ನಿರ್ದೇಶಕ ಶಿವರುದ್ರಯ್ಯ ಅವರಿಗೆ 2021ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಸಂದಿದೆ. ಇನ್ನು ಹಿರಿಯ ನಟ ಎಂ.ಕೆ. ಸುಂದರ್ ರಾಜ್​ ಅವರಿಗೆ 2021ನೇ ಸಾಲಿನ ಡಾ. ವಿಷ್ಣುವರ್ಧನ್ ಪ್ರಶಸ್ತಿ ಲಭಿಸಿದೆ.

ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಡಾ. ರಾಜ್‌ಕುಮಾರ್‌, ಪುಟ್ಟಣ್ಣ ಕಣಗಾಲ್‌, ಡಾ. ವಿಷ್ಣುವರ್ಧನ್‌ ಪ್ರಶಸ್ತಿಯು ತಲಾ 5 ಲಕ್ಷ ರುಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.

ಉಮಾಶ್ರೀಗೆ ಲಭಿಸಿದ್ದ 2019ನೇ ಸಾಲಿನ ಡಾ. ರಾಜ್‌ಕುಮಾರ್‌ ಪ್ರಶಸ್ತಿ

2019ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿ ಹಿರಿಯ ನಟಿ ಉಮಾಶ್ರೀ ಅವರಿಗೆ ಸಂದಿತ್ತು. ಇನ್ನು ಆ ಸಾಲಿನ ಡಾ. ವಿಷ್ಣುವರ್ಧನ್‌ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಕ್ರಮವಾಗಿ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ, ಹಿರಿಯ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಆಯ್ಕೆಯಾಗಿದ್ದರು.