ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ "ನಿಂಗವ್ವ ನಿಂಗವ್ವ" ಹಾಡು ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ - ಅನನ್ಯ ಭಟ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ದುನಿಯಾ ವಿಜಯ್ - ರಚಿತರಾಮ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಸ್ಯಾಂಡಲ್‌ವುಡ್‌ನ ತಾರಾ ದಂಪತಿಗಳಾದ "ನೆನಪಿರಲಿ" ಪ್ರೇಮ್ - ಜ್ಯೋತಿ, ಡಾರ್ಲಿಂಗ್ ಕೃಷ್ಣ - ಮಿಲನಾ ನಾಗರಾಜ್ ಹಾಗೂ ತರುಣ್ ಸುಧೀರ್ - ಸೋನಾಲ್ ಅವರಿಂದ "ನಿಂಗವ್ವ ನಿಂಗವ್ವ" ಹಾಡು ಬಿಡುಗಡೆಯಾಯಿತು. ಹಾಡು ಬಿಡುಗಡೆ ಮಾಡಿ ಮಾತನಾಡಿದ ದಂಪತಿಗಳು ಯೋಗರಾಜ್ ಭಟ್ ಅವರ ಸಾಹಿತ್ಯ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್ ಗಾಯನ ಹಾಗೂ ವಿಶೇಷವಾಗಿ ದುನಿಯಾ ವಿಜಯ್, ರಚಿತರಾಮ್ ಅವರ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸ್ವಾಮಿ ಗೌಡ ಛಾಯಾಗ್ರಹಣ ಪೈಟಿಂಗ್ ಇದ್ದ ಹಾಗೆ ಇದೆ ಎಂದು ಬಣ್ಣಿಸಿದರು. ನಿರ್ದೇಶಕರ ಕಾರ್ಯವೈಖರಿ ಚೆನ್ನಾಗಿದೆ ಎಂದು ತಿಳಿಸಿ, ನಿರ್ಮಾಪಕರಿಗೆ ಶುಭವನ್ನು ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಆನಂತರ ದಂಪತಿಗಳಿಗೆ ದುನಿಯಾ ವಿಜಯ್ ಹಾಗೂ ರಚಿತರಾಮ್ ಬಾಗಿನ ನೀಡಿ ಸನ್ಮಾನಿಸಿದರು.
Landlord: ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ದುನಿಯಾ ವಿಜಯ್ ನಟನೆಯ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಆಡಿಯೋ ರೈಟ್ಸ್
ಯೋಗರಾಜ್ ಭಟ್ ನನಗೆ ಹಿಟ್ ಹಾಡುಗಳನ್ನು ಬರೆದಿದ್ದಾರೆ
ʻಲ್ಯಾಂಡ್‌ಲಾರ್ಡ್ʼ ಸಿನಿಮಾದ ನಟ ವಿಜಯ್ ಕುಮಾರ್, "ಈ ಸಂದರ್ಭದ ಸಂತೋಷವನ್ನು ನೋಡಿ ಮಾತುಗಳೆ ಹೊರಡುತ್ತಿಲ್ಲ. ಮೊದಲಿಗೆ ಹಾಡು ಬಿಡುಗಡೆ ಮಾಡಿ ಕೊಟ್ಟ ದಂಪತಿಗಳಿಗೆ ಧನ್ಯವಾದ. ನನ್ನ ಹಿಟ್ ಸಾಂಗ್ ಗಳ ಲಿಸ್ಟ್ ನಲ್ಲಿ ಅಧಿಕ ಹಾಡುಗಳನ್ನು ಬರೆದಿರುವುದು ಯೋಗರಾಜ್ ಭಟ್ ಅವರು. ಈ ಹಾಡನ್ನು ಅದ್ಭುತವಾಗಿ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಸಾಮಾನ್ಯವಾಗಿ ನಾಯಕಿಯರು ಈ ವಯಸ್ಸಿನ ಪಾತ್ರ ಒಪ್ಪಿಕೊಳ್ಳುವುದು ಕಡಿಮೆ. ರಚಿತಾ ರಾಮ್ ಅವರು ಒಪ್ಪಿಕೊಂಡು ಈ ಪಾತ್ರ ಮಾಡಿದ್ದಾರೆ. ನನಗೂ ಕೂಡ ಈ ಹಾಡು ಬಿಡುಗಡೆ ಆಗುವವರೆಗೂ ನನ್ನ ಪಾತ್ರದ ಬಗ್ಗೆ ಎಲ್ಲರೂ ಏನು ಹೇಳಬಹುದು ಎಂಬ ಕುತೂಹಲವಿತ್ತು. ಈಗ ಎಲ್ಲರೂ ಪ್ರಶಂಸೆ ನೀಡುತ್ತಿದ್ದಾರೆ. ಒಳ್ಳೆಯ ಕಥೆ ಮಾಡಿಕೊಂಡಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಅವರಿಗೆ ಹಾಗೂ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಅಭಿನಂದನೆಗಳು. ಜನವರಿ 23 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ" ಎಂದು ಹೇಳಿದರು.
ನಿಮ್ಮ ಮೆಚ್ಚುಗೆಗೆ ಮನ ತುಂಬಿ ಬಂದಿದೆ
"ಈ ಹಾಡು ಉತ್ತಮವಾಗಿ ಮೂಡಿಬಂದಿದೆ. ಈ ಹಾಡಿನ ಚಿತ್ರೀಕರಣ ಸಮಯದಿಂದಲೂ ಯಾವಾಗ ಬಿಡುಗಡೆಯಾಗಬಹುದೆಂದು ಕಾಯುತ್ತಿದ್ದೆ. ಈ ಹಾಡಿನಲ್ಲಿ ಎಲ್ಲವೂ ಚೆನ್ನಾಗಿದೆ. ಇನ್ನೂ, ದುನಿಯಾ ವಿಜಯ್ ಸರ್ ರಾಚಯ್ಯ ಪಾತ್ರದಲ್ಲಿ, ನಾನು ನಿಂಗವ್ವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇವೆ. ಈ ಹಾಡಲ್ಲಿ ನಮ್ಮಿಬ್ಬರ ಅಭಿನಯಕ್ಕೆ ಎಲ್ಲರೂ ನೀಡುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ" ಎಂದು ರಚಿತಾ ರಾಮ್ ತಿಳಿಸಿದರು.
ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ದುನಿಯಾ ವಿಜಯ್ ಮಾತು
"ನಾನು ಚಿತ್ರರಂಗಕ್ಕೆ ಪ್ರವೇಶ ಮಾಡಲು ಕಾರಣರಾದ ಗುರು ದೇಶಪಾಂಡೆ ಹಾಗೂ ತರುಣ್ ಸುಧೀರ್ ಇಲ್ಲಿರುವುದು ಖುಷಿಯಾಗಿದೆ. ಇನ್ನೂ, ಈ "ನಿಂಗವ್ವ" ಎಂಬ ಅದ್ಭುತ ಹಾಡನ್ನು ಯೋಗರಾಜ್ ಭಟ್ ಅವರು ಬರೆದುಕೊಟ್ಟಿದ್ದಾರೆ. ವಿಜಿ ಸರ್ ಹಾಗು ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿದೆ. ಈಗ ಆ ಸಾಲಿಗೆ "ನಿಂಗವ್ವ" ಕೂಡ ಸೇರಲಿದೆ. ನನ್ನ ಹಿಂದಿನ ಎರಡು ಚಿತ್ರಗಳಿಗೂ ಸಂಗೀತ ಸಂಯೋಜಿಸಿದ್ದ ಅಜನೀಶ್ ಅವರೆ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ" ಎಂದು ನಿರ್ದೇಶಕ ಜಡೇಶ್ ಕೆ ಹಂಪಿ ಹೇಳಿದರು. ಕೆ ವಿ ಸತ್ಯ ಪ್ರಕಾಶ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬಂದಿದೆ.