Gatha Vaibhava Movie: ದುಶ್ಯಂತ್-ಆಶಿಕಾ ರಂಗನಾಥ್ ನಟನೆಯ 'ಗತವೈಭವ' ನವೆಂಬರ್ 14ಕ್ಕೆ ರಿಲೀಸ್
Gatha Vaibhava Movie: ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ 'ಗತವೈಭವ' ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Gatha Vaibhava Movie -

ಬೆಂಗಳೂರು: ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ (Gatha Vaibhava Movie) ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. 'ಗತವೈಭವ' ಟೀಸರ್ ಅನಾವರಣ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 'ಗತವೈಭವ' ಸಿನಿಮಾದ ಸುದ್ದಿಗೋಷ್ಠಿ ಹಮ್ಮಿ ಕೊಳ್ಳಲಾಗಿತ್ತು. ಈ ವೇಳೆ ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ʼʼಗತವೈಭವʼ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡ ಪ್ರಾಜೆಕ್ಟ್. ನನ್ನ ಬ್ಯಾನರ್‌ನಡಿ ಮಾಡಬೇಕು ಎಂದುಕೊಂಡ ಸಿನಿಮಾ ಇದು. ದುಶ್ಯಂತ್ ಈ ಪ್ರಾಜೆಕ್ಟ್ ಮಾಡಬೇಕು ಎಂದು ಬರೆದಿತ್ತು. ಅದಕ್ಕೆ ಇದು ಆಗಿದೆ. ನಾಲ್ಕು ಸಿನಿಮಾ ಮಾಡಿದಷ್ಟು ಈ ಜರ್ನಿ ಆಗಿದೆ. ಅಂದುಕೊಂಡ ರೀತಿ ʼಗತವೈಭವʼ ಮೂಡಿ ಬಂದಿದೆ. ಪ್ರೊಡ್ಯೂಸರ್ ದೀಪಕ್ ಚಿತ್ರಕ್ಕೆ ಎಲ್ಲವನ್ನೂ ಒದಗಿಸಿದ್ದಾರೆ. ದುಶ್ಯಂತ್ ನ್ಯಾಚುರಲ್ ಆರ್ಟಿಸ್ಟ್. ಆಶಿಕಾ ಫ್ಯಾಮಿಲಿ ತರಹ ಆಗಿದ್ದಾರೆ. ಚಿತ್ರದಲ್ಲಿ ಎಂಟರ್‌ಟೈನ್‌ಮೆಂಟ್, ಎಮೋಷನ್ ಎಲ್ಲವೂ ಇದೆ ʼʼಎಂದರು.
ನಟ ದುಶ್ಯಂತ್ ಮಾತನಾಡಿ, ʼʼನೂರು ದಿನಕ್ಕೂ ಹೆಚ್ಚು ಕಾಲ ಶೂಟಿಂಗ್ ಮಾಡಿದ್ದೇವೆ. ವಿದೇಶದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಗ್ರಾಫಿಕ್ ಕಾರಣದಿಂದ ಸಿನಿಮಾ ತಡವಾಯ್ತು. ನಿರೀಕ್ಷೆಗೂ ಮೀರಿದಷ್ಟು ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ನವೆಂಬರ್ 14ಕ್ಕೆ ʼಗತವೈಭವʼ ತೆರೆಗೆ ಬರಲಿದೆ. ಅಕ್ಟೋಬರ್‌ನಲ್ಲಿ ಹಾಡುಗಳನ್ನು ರಿಲೀಸ್ ಮಾಡುವ ಪ್ಲ್ಯಾನ್ ನಡೆದಿದೆ ಎಂದರು.
ಇದನ್ನು ಓದಿ:Premi Movie: ವಿಭಿನ್ನ ಪ್ರೇಮ ಕಥಾಹಂದರವುಳ್ಳ ʼಪ್ರೇಮಿʼ ಚಿತ್ರದ ಶೀರ್ಷಿಕೆ ಅನಾವರಣ
ನಟಿ ಆಶಿಕಾ ರಂಗನಾಥ್ ಮಾತನಾಡಿ, ʼʼಗತವೈಭವʼ ತುಂಬಾ ಸ್ಪೆಷಲ್ ಸಿನಿಮಾ. ತಂಜಾವೂರಿನಲ್ಲಿ ಶೂಟಿಂಗ್ ಸಮಯದಲ್ಲಿ ಕೇಳಿದ ಕಥೆ. ತುಂಬಾ ಎಂಜಾಯ್ ಮಾಡಿಕೊಂಡು ಕಥೆ ಕೇಳಿದೆ. ಪ್ರತಿಯೊಬ್ಬ ಕಲಾವಿದರು ಈ ರೀತಿ ಪಾತ್ರ ಸಿಗಲು ಅದೃಷ್ಟ ಮಾಡಿರಬೇಕು. ನನಗೆ ಚಿತ್ರದಲ್ಲಿ ನಾಲ್ಕು ಲುಕ್ ಇದೆ. ʼಗತವೈಭವʼದಲ್ಲಿ ನಟಿಸಿರುವುದು ಬೇರೆಯದ್ದೇ ಅನುಭವʼʼ ಎಂದು ಹೇಳಿದರು.
ರೊಮ್ಯಾಂಟಿಕ್ ಲವ್ ಸ್ಟೋರಿ ಜತೆಗೆ ಸೈಂಟಿಫಿಕ್ ಥ್ರಿಲ್ಲರ್ ಕಂಟೆಂಟ್ ಬ್ಲೆಂಡ್ ಮಾಡಿ ಸುನಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಕಥೆ-ಚಿತ್ರಕಥೆ ಜೊತೆಗೆ ಸಂಭಾಷಣೆ ಬರೆದಿದ್ದು, ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಿಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ. ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.