ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ekka Kannada Movie: ʼಎಕ್ಕʼ ರಿಲೀಸ್‌ ಡೇಟ್‌ ಫಿಕ್ಸ್‌; ಜು. 18ಕ್ಕೆ ತೆರೆಗೆ ಬರಲಿದೆ ಯುವ ರಾಜ್‌ಕುಮಾರ್‌ ಚಿತ್ರ

Yuva Rajkumar: ಕಳೆದ ವರ್ಷ ತೆರೆಕಂಡ ʼಯುವʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಯುವ ರಾಜ್‌ಕುಮಾರ್‌ ಸದ್ಯ ಎಕ್ಕ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಹಿತ್‌ ಪದಕಿ ನಿರ್ದೇಶನದ ಈ ಚಿತ್ರ ಈಗಾಗಲೇ ಗಮನ ಸೆಳೆದಿದೆ. ಈ ಬಹುನಿರೀಕ್ಷಿತ ಸಿನಿಮಾ ಜು. 18ರಂದು ತೆರೆಗೆ ಬರಲಿದೆ.

ಜು. 18ಕ್ಕೆ ತೆರೆಗೆ ಬರಲಿದೆ ಯುವ ರಾಜ್‌ಕುಮಾರ್‌ ಅಭಿನಯದ ʼಎಕ್ಕʼ

Profile Ramesh B May 29, 2025 2:02 PM

ಬೆಂಗಳೂರು: ʼಯುವʼ (Yuva) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ (Yuva Rajkumar) ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ 'ಎಕ್ಕ' (Ekka Kannada Movie). ಟೀಸರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ಮೂಲಕ ಭಾರಿ ನಿರೀಕ್ಷೆ ಹೆಚ್ಚಿಸಿರುವ, ರೋಹಿತ್ ಪದಕಿ ನಿರ್ದೇಶನದ ಚಿತ್ರವೀಗ ತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಜು. 18ರಂದು ʼಎಕ್ಕʼ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ಚಿತ್ರ ನಿರ್ಮಾಣ ಮಾಡುತ್ತಿರುವ ʼಎಕ್ಕʼ ಸಿನಿಮಾದಲ್ಲಿ ಯುವ ರಾಜ್‌ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿದೆ. 'ರತ್ನನ್ ಪ್ರಪಂಚ' ಬಳಿಕ 'ಉತ್ತರಕಾಂಡ' ಸಿನಿಮಾ ಆರಂಭಿಸಿದ್ದ ರೋಹಿತ್ ಪದಕಿ ಅದನ್ನು ಪಕ್ಕಕ್ಕಿಟ್ಟು 'ಎಕ್ಕ' ಚಿತ್ರ ಕೈಗೆತ್ತಿಕೊಂಡಿದ್ದಾರೆ.

'ಎಕ್ಕʼ ಚಿತ್ರದ ಟೀಸರ್‌ ಇಲ್ಲಿದೆ:



ರೋಹಿತ್ ಪದಕಿ ನಿರ್ದೇಶನದ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ 'ಎಕ್ಕ'. ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ನಟ ಯುವ ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಸಣ್ಣ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಅದಕ್ಕೂ ಮುನ್ನ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿ ಗಮನ ಸೆಳೆದಿತ್ತು.

ʼಎಕ್ಕʼ ಚಿತ್ರದಲ್ಲಿ ಬೆಂಗಳೂರಿನ ಅಂಡರ್‌ವರ್ಲ್ಡ್ ಕಥೆ ಇದೆ ಎಂದು ಹೇಳಲಾಗುತ್ತಿದೆ. ಯುವ ರಾಜ್‌ಕುಮಾರ್ ಸಿಕ್ಕಾಪಟ್ಟೆ ರಡಗ್ ಲುಕ್‌ನಲ್ಲಿ ನಟಿಸಿದ್ದಾರೆ. 'ಜಾಕಿ' ಚಿತ್ರದಲ್ಲಿ 'ಎಕ್ಕ ರಾಜ ರಾಣಿ' ಎಂಬ ಸಾಂಗ್ ಹಿಟ್ ಆಗಿತ್ತು. ಇನ್ನು 'ಜಾಕಿ' ಚಿತ್ರದ ದೃಶ್ಯವೊಂದರಲ್ಲಿ ಅಪ್ಪು ವಿಭಿನ್ನ ಅವತಾರದಲ್ಲಿ ದರ್ಶನ ಕೊಟ್ಟಿದ್ದರು. 'ಎಕ್ಕ' ಟೀಸರ್‌ನಲ್ಲಿ ಯುವ ಕೂಡ ಅಂಥದ್ದೇ ಲುಕ್‌ನಲ್ಲಿ ಯುವ ಕೂಡ ಕಾಣಿಸಿಕೊಂಡಿದ್ದಾರೆ.

ರೋಹಿತ್‍ ಪದಕಿ, ವಿಕ್ರಂ ಹತ್ವಾರ್ ಜತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ‘ಎಕ್ಕ’ ಸಿನಿಮಾಕ್ಕಿದೆ.

ಗಮನ ಸೆಳೆದ ಟೀಸರ್‌

ʼಎಕ್ಕʼ ಚಿತ್ರತಂಡ ರಿಯಲಿಸ್ಟಿಕ್ ಜಾಗದಲ್ಲಿ ತಮ್ಮ ಚಿತ್ರದ ಫಸ್ಟ್ ಲುಕ್​ನ ಶೂಟಿಂಗ್ ‌ಮಾಡಿದ್ದು, ಯುವ ಎಂಟ್ರಿ ಸಖತ್ ಕಿಕ್ ನೀಡಿದೆ. ಟೀಸರ್‌ನಲ್ಲಿ ಮಗು-ಮೃಗ ಎನ್ನುವ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ಆ್ಯಕ್ಟಿಂಗ್‌, ರೋಹಿತ್‌ ಪದಕಿ ಟೇಕಿಂಗ್‌, ಚರಣ್‌ ರಾಜ್‌ ಮ್ಯೂಸಿಕ್‌ ಕಿಕ್‌ ಟೀಸರ್‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ.