ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Vishal: ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್; ಅಭಿಮಾನಿಗಳಲ್ಲಿ ಆತಂಕ

Actor Vishal: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ತಮಿಳುನಾಡಿನ ವಿಲ್ಲುಪುರಂನಲ್ಲಿ ಭಾನುವಾರ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಇಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಲಾಗಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದರು.

ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದ ನಟ ವಿಶಾಲ್

ನಟ ವಿಶಾಲ್

Profile Sushmitha Jain May 12, 2025 12:09 PM

ವಿಲ್ಲುಪುರಂ: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ತಮಿಳುನಾಡಿನ ವಿಲ್ಲುಪುರಂನಲ್ಲಿ ಭಾನುವಾರ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಲಾಗಿದೆ. ತಮಿಳುವಿಲ್ಲುಪುರಂ: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಅವರು ತಮಿಳುನಾಡಿನ (Tamil Nadu) ವಿಲ್ಲುಪುರಂನಲ್ಲಿ (Villupuram) ಭಾನುವಾರ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕುಸಿದು ಬಿದ್ದ (Collapsed On Stage) ಘಟನೆ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಲಾಗಿದೆ.

ಮಾಜಿ ಸಚಿವ ಕೆ.ಪೊನ್ಮುಡಿ ಹಾಗೂ ಕಾರ್ಯಕ್ರಮದ ಆಯೋಜಕರು ತಕ್ಷಣವೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ವಿಶಾಲ್ ತೀವ್ರ ಜ್ವರ ಮತ್ತು ಆಯಾಸದಿಂದ ಬಳಲುತ್ತಿದ್ದರು. ಊಟವನ್ನು ಬಿಟ್ಟಿದ್ದರು ಮತ್ತು ಬಿಡುವಿಲ್ಲದ ಕಾರ್ಯಕ್ರಮದ ಒತ್ತಡದಿಂದ ಹೀಗಾಗಿದೆ ಎಂದು ನಟ ವಿಶಾಲ್‌ ಅವರ ಮ್ಯಾನೇಜರ್ ಹರಿ ಕೃಷ್ಣನ್ ಮಾಹಿತಿ ನೀಡಿದ್ದಾರೆ. ಈಗ ವಿಶಾಲ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅವರ ತಂಡ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ವೈರಲಾಗುತ್ತಿರುವ ವಿಡಿಯೊ ಇಲ್ಲಿದೆ



ಇದಕ್ಕೂ ಮುನ್ನ 2025ರ ಜನವರಿಯಲ್ಲಿ ವಿಶಾಲ್ ಡೆಂಗ್ಯೂ ಜ್ವರದಿಂದ ಚೇತರಿಸಿಕೊಂಡಿದ್ದರು. ಅವರ ಬಹುನೀರಿಕ್ಷಿತ ಚಿತ್ರ ‘ಮದ ಗಜ ರಾಜ’ ಪ್ರಿ-ರಿಲೀಸ್ ಕಾರ್ಯಕ್ರಮದ ವೇಳೆ ವೈರಲ್ ಜ್ವರದಿಂದ ಬಳಲುತ್ತಿದ್ದರೂ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗ ವಿಶಾಲ್ ದುರ್ಬಲರಾಗಿ ಕಾಣಿಸಿದ್ದು, ನಿಂತುಕೊಳ್ಳಲು ಸಹಾಯ ಬೇಕಾಗಿತ್ತು. ಮೈಕ್ ಹಿಡಿದು ನಡುಗುತ್ತಿರುವ ವಿಡಿಯೋ ವೈರಲ್ ಆಗಿ, ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.

ಈ ಸುದ್ದಿಯನ್ನು ಓದಿ: Actor Vishal: ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

ಗಾಳಿಯ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದ ವಿಶಾಲ್, "ನನಗೆ ಇತ್ತೀಚೆಗೆ ಜ್ವರವಿತ್ತು, ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಮೂರು ಅಥವಾ ಆರು ತಿಂಗಳವರೆಗೆ ಕೆಲಸ ಮಾಡಲು ಆಗಲ್ಲ ಎಂಬ ಸುಳ್ಳು ಮಾಹಿತಿ ಹರಡಿದ್ದವು, ಆದರೆ ಅವು ಸತ್ಯವಲ್ಲ" ಎಂದು ತಿಳಿಸಿದ್ದರು.

‘ಮದ ಗಜ ರಾಜ’ ಚಿತ್ರವನ್ನು ಸುಂದರ್ ಸಿ. ನಿರ್ದೇಶಿಸಿದ್ದು, ವಿಶಾಲ್ ಜೊತೆಗೆ ಅಂಜಲಿ ಮತ್ತು ವರಲಕ್ಷ್ಮೀ ಶರತ್‌ಕುಮಾರ್ ನಟಿಸಿದ್ದಾರೆ. 2013ರಲ್ಲಿ ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಆರ್ಥಿಕ ಮತ್ತು ಕಾನೂನು ಸಮಸ್ಯೆಗಳಿಂದಾಗಿ ವಿಳಂಬವಾಗಿ, ಅಂತಿಮವಾಗಿ ಜನವರಿ 12, 2025ರಂದು ತೆರೆಕಂಡಿತ್ತು.ನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದರು.