ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Anchor Anushree: ಅನುಶ್ರೀ ಮದುವೆಗೆ ಬಂದ ಅಭಿಮಾನಿಗಳಿಗೆ ನಿರಾಸೆ; ಒಳಗೆ ಬಿಡ್ತಿಲ್ಲಾ ಎನ್ನುತ್ತಿರುವ ಫ್ಯಾನ್ಸ್‌

ಆ್ಯಂಕರ್ ಅನುಶ್ರೀ ಅವರು ಇಂದು ರೋಷನ್ ಎಂಬುವವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಲಿದ್ದಾರೆ. ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯಲಿದೆ.

ಅನುಶ್ರೀ ಮದುವೆಗೆ ಬಂದ ಅಭಿಮಾನಿಗಳಿಗೆ ನಿರಾಸೆ

Vishakha Bhat Vishakha Bhat Aug 28, 2025 10:51 AM

ಬೆಂಗಳೂರು: ಆ್ಯಂಕರ್ ಅನುಶ್ರೀ (Anchor Anushree) ಅವರು ಇಂದು ರೋಷನ್ ಎಂಬುವವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಲಿದ್ದಾರೆ. ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯಲಿದೆ. ವಿವಾಹ ಕಾರ್ಯಕ್ರಮಕ್ಕೆ ಅತ್ಯಾಪ್ತರನ್ನು ಮಾತ್ರ ಆಹ್ವಾನಿಸಲಾಗಿದೆ. ಕಿರುತೆರೆ ಕಲಾವಿದರು ಮತ್ತು ಚಿತ್ರೋದ್ಯಮದ ಗಣ್ಯರಿಗೆ ಅನುಶ್ರಿ ಆಹ್ವಾನ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಾಗುವ ನಿರೀಕ್ಷೆ ಇದೆ.

ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ವಿವಾಹವಾಗಲಿರುವ ಅನುಶ್ರೀ ಅವರ ಮದುವೆಯ ಆಮಂತ್ರಣ ಸಾಕಷ್ಟು ವೈರಲ್‌ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು ತಮ್ಮ ನೆಚ್ಚಿನ ನಿರೂಪಕಿಯ ಮದುವೆಗೆ ತೆರಳಿದ್ದರು. ಆದರೆ ಅನುಶ್ರೀ ಮದುವೆಗೆ ಬಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮದುವೆಗೆ ಆಹ್ವಾನವಿಲ್ಲದೆ ಯಾರಿಗೂ ಪ್ರವೇಶ ನೀಡುತ್ತಿಲ್ಲ. ಸ್ಟುಡಿಯೋ ಒಳಗೆ ಬಿಟ್ಟಿಲ್ಲ ಎಂದು ಅನುಶ್ರೀ ಫ್ಯಾನ್ಸ್‌ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅನುಶ್ರೀ ಹೆಸರು ಮಾಡೋಕೆ ಫ್ಯಾನ್ಸ್ ಕಾರಣ. ಇವತ್ತು ನಮನ್ನೆ ಮದುವೆ ಮನೆಗೆ ಬಿಟ್ಟಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಈವರೆಗೆ ಅನುಶ್ರೀ ಅವರು ತಮ್ಮ ಮದುವೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅನುಶ್ರೀ ಹಾಗೂ ರೋಷನ್ ಅವರದ್ದು ಲವ್ ಮ್ಯಾರೇಜ್. ಪುನೀತ್‌ ರಾಜ್‌ಕುಮಾರ್‌ ಅವರ ಗಂಧದ ಗುಡಿ ರಿಲೀಸ್‌ ಟೈಂನಲ್ಲಿ ಇವರಿಬ್ಬರು ಭೇಟಿಯಾಗಿದ್ದರು. ನಂತರ ಇವರ ನಡುವೆ ಸ್ನೇಹವಾಗಿತ್ತು. ಅದು ಪ್ರೀತಿಗೆ ತಿರುಗಿ ಇದೀಗ ಇಬ್ಬರೂ ವಿವಾಹವಾಗುತ್ತಿದ್ದಾರೆ. ಆಗಸ್ಟ್ 27ರಂದು ಅನುಶ್ರೀ ಅವರ ಹಳದಿಶಾಸ್ತ್ರ ಕಾರ್ಯಗಳು ನೆರವೇರಿದ್ದವು. ಇಂದು ವಿವಾಹ ನೆರವೇರುತ್ತಿದೆ. ಅನುಶ್ರೀ ಅವರು ಹಲವು ವರ್ಷಗಳ ಗೆಳೆಯ ರೋಷನ್ ಕೈ ಹಿಡಿಯಲು ರೆಡಿ ಆಗಿದ್ದಾರೆ.

ಈ ಸುದ್ದಿಯನ್ನೂ ಓದಿ: Anchor Anushree: ನಿರೂಪಕಿ ಅನುಶ್ರೀ ಮದುವೆ ಕಾರ್ಯಕ್ರಮ ಆರಂಭ: ಇಲ್ಲಿವೆ ಫೋಟೋಗಳು

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕನ್ನಡದ ಬಹುತೇಕ ರಿಯಾಲಿಟಿ ಶೋಗಳಿಗೆ ನಿರೂಪಕಿಯಾಗಿ ಅವರು ಖ್ಯಾತಿ ಗಳಿಸಿದ್ದಾರೆ.