ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Firefly Movie: ಶಿವಣ್ಣ ಪುತ್ರಿ ನಿವೇದಿತಾ ನಿರ್ಮಾಣದ ಚೊಚ್ಚಲ ಚಿತ್ರ ರಿಲೀಸ್‌ಗೆ ರೆಡಿ; ಡಾ.ರಾಜ್ ಜನ್ಮೋತ್ಸವಕ್ಕೆ ʼಫೈರ್ ಫ್ಲೈʼ ಬಿಡುಗಡೆ

Niveditha Shivarajkumar: ವರನಟ ಡಾ.ರಾಜ್‌ ಕುಮಾರ್‌ ಅವರ ಕುಟುಂಬದ ಮತ್ತೊಬ್ಬರು ಸ್ಯಾಂಡಲ್‌ವುಡ್‌ ಪ್ರವೇಶಿಸಲು ಸಜ್ಜಾಗಿದ್ದಾರೆ. ಶಿವ ರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಿಸುತ್ತಿರುವ, ವಂಶಿ ನಿರ್ದೇಶನದ ಸ್ಯಾಂಡಲ್‌ವುಡ್‌ ಚಿತ್ರ ʼಫೈರ್ ಫ್ಲೈʼ ಏ. 24ರಂದು ಬಿಡುಗಡೆಯಾಗಲಿದೆ.

ಡಾ.ರಾಜ್ ಜನ್ಮೋತ್ಸವಕ್ಕೆ ʼಫೈರ್ ಫ್ಲೈʼ ಚಿತ್ರ  ರಿಲೀಸ್‌

ʼಫೈರ್ ಫ್ಲೈʼ ಚಿತ್ರದ ಪೋಸ್ಟರ್‌.

Profile Ramesh B Mar 18, 2025 2:00 PM

ಬೆಂಗಳೂರು: ಸೆಂಚುರಿ ಸ್ಟಾರ್ ಶಿವ ರಾಜ್‌ಕುಮಾರ್ (Shiva Rajkumar) ಅವರ ಪುತ್ರಿ ನಿವೇದಿತಾ ಶಿವ ರಾಜ್‌ಕುಮಾರ್‌ (Niveditha Shivarajkumar) ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್ ಆ್ಯಂಡ್ ಪ್ರೊಡಕ್ಷನ್ಸ್’ ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ʼಫೈರ್ ಫ್ಲೈʼ (Firefly Movie). ಈಗಾಗಲೇ ಟೀಸರ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ಗೆದ್ದಿರುವ ಈ ಚಿತ್ರ ವರನಟ ಡಾ. ರಾಜಕುಮಾರ್ ಅವರ ಜನ್ಮದಿನ ಅಂದರೆ ಏ. 24ರಂದು ತೆರೆ ಮೇಲೆ ಬರಲಿದೆ. ʼಫೈರ್ ಫ್ಲೈ’ ಚಿತ್ರದಲ್ಲಿ ವಂಶಿ (Vamshi) ನಾಯಕನಾಗಿ ನಟಿಸಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಆಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಬಗ್ಗೆ ಡಾ. ಶಿವ ರಾಜ್‌ಕುಮಾರ್‌ ಮಾತನಾಡಿ, ʼʼಅಪ್ಪಾಜಿಯವರ ಹುಟ್ಟುಹಬ್ಬದಂದು ನನ್ನ ಮಗಳ ಮೊದಲ ಚಿತ್ರ ಬಿಡುಗಡೆಯಾಗುತ್ತಿರುವುದು ನನಗೆ ತುಂಬಾ ವಿಶೇಷವಾದ ಕ್ಷಣ. ನಮ್ಮ ಕುಟುಂಬದ ಮೇಲೆ ಜನರು ತೋರಿಸಿರುವ ಎಲ್ಲ ಪ್ರೀತಿ ಅಪ್ಪಾಜಿಯವರಿಂದ ಬಂದಿದೆ ಮತ್ತು ಮುಂದಿನ ಪೀಳಿಗೆಯ ಮೇಲೆ ಎಲ್ಲರೂ ಅದೇ ಪ್ರೀತಿಯನ್ನು ಮುಂದುವರಿಸುತ್ತಿರುವುದನ್ನು ನೋಡುವುದು ತುಂಬಾ ಖುಷಿ ಕೊಡುತ್ತಿದೆ. ಎಲ್ಲ ಅಭಿಮಾನಿಗಳು ಮತ್ತು ಕನ್ನಡ ಸಿನಿಮಾ ಪ್ರೇಮಿಗಳ ನಿರಂತರ ಬೆಂಬಲಕ್ಕೆ ಧನ್ಯವಾದ. ʼಫೈರ್ ಫ್ಲೈʼ ಸಾವು, ನೋವು ಮತ್ತು ಜೀವನ ಸ್ಫೂರ್ತಿಯ ಮರು ಚಿಗುರುವಿಕೆಯ ಬಗ್ಗೆ ಮಾತನಾಡುವ ಚಿತ್ರ. ಈ ರೀತಿ ಗಾಢವಾದ ವಿಷಯವನ್ನು ಸರಳವಾಗಿ, ಹಾಸ್ಯದ ಮೂಲಕ ಹೇಳುವುದು ನನಗೆ ತುಂಬಾ ಹತ್ತಿರವಾಯ್ತು. ಎಲ್ಲರೂ ಅದನ್ನು ಮೆಚ್ಚುತ್ತಾರೆ ಎಂದು ನನಗೆ ನಂಬಿಕೆ ಇದೆʼʼ ಎಂದು ಹೇಳಿದರು.

ʼಫೈರ್ ಫ್ಲೈʼ ಚಿತ್ರದ ಟೀಸರ್‌ ನೋಡಿ:



ಸ್ಯಾಂಡಲ್‌ವುಡ್‌ನ ಭರವಸೆಯ ಸಂಗೀತ ನಿರ್ದೇಶಕ ಚರಣ್ ರಾಜ್ ‘ಫೈರ್ ಫ್ಲೈ’ ಚಿತ್ರಕ್ಕೆ ಮ್ಯೂಸಿಕ್‌ ನೀಡಿದ್ದಾರೆ. ಚಿತ್ರತಂಡವು ಇದೇ ಯುಗಾದಿಗೆ ಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ.

ಈ ಸುದ್ದಿಯನ್ನೂ ಓದಿ: Ekka Movie: ಅಪ್ಪು ಹುಟ್ಟುಹಬ್ಬಕ್ಕೆ ಹೊರಬಂತು ʼಎಕ್ಕʼ ಚಿತ್ರದ ಟೈಟಲ್‌ ಟ್ರ್ಯಾಕ್‌; ಭರ್ಜರಿಯಾಗಿ ಹೆಜ್ಜೆ ಹಾಕಿದ ಯುವ ರಾಜ್‌ಕುಮಾರ್‌

ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ-ನಿರ್ದೇಶನ ಈ ಸಿನಿಮಾಕ್ಕಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಮ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲೆ, ಅರ್ಜುನ್ ರಾಜ್ ಅವರ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ. ಇದೊಂದು ಕೌಟುಂಬಿಕ ಚಿತ್ರವಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರ ಮನಸ್ಸು ಗೆಲ್ಲಲಿದೆ ಎಂದು ಸಿನಿಮಾತಂಡ ವಿಶ್ವಾಸ ವ್ಯಕ್ತಪಡಿಸಿದೆ.