Peddi Movie: ರಾಮ್ ಚರಣ್ 'ಪೆದ್ದಿ'ಯಲ್ಲಿ ಅಚ್ಚಿಯಮ್ಮನಾಗಿ ಕಾಣಿಸಿಕೊಂಡ ಜಾನ್ವಿ ಕಪೂರ್
First look of Janhvi Kapoor in Peddi Movie: ಅಚ್ಚಿಯಮ್ಮ ಪಾತ್ರದಲ್ಲಿ ಜಾನ್ವಿ ಅಭಿನಯಿಸುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಜಾನ್ವಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೀಪಿನ ಮೇಲೆ ನಿಂತು ತಲೆಯ ಮೇಲೆ ಕೈಗಳನ್ನು ಎತ್ತಿಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
-
ಹೈದರಾಬಾದ್, ನ.2: 'ಗ್ಲೋಬಲ್ ಸ್ಟಾರ್' ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ 'ಪೆದ್ದಿ' (Peddi Movie) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. 'ಉಪ್ಪೆನ' ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಚಿತ್ರತಂಡ ಜಾನ್ವಿ ಕಪೂರ್ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಅಚ್ಚಿಯಮ್ಮ ಪಾತ್ರದಲ್ಲಿ ಜಾನ್ವಿ ಅಭಿನಯಿಸುತ್ತಿದ್ದಾರೆ.
ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಜಾನ್ವಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೀಪಿನ ಮೇಲೆ ನಿಂತು ತಲೆಯ ಮೇಲೆ ಕೈಗಳನ್ನು ಎತ್ತಿಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ರಾಮ್ ಚರಣ್ ನಟನೆಯ 'ಪೆದ್ದಿ' ಸಿನಿಮಾಕ್ಕೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಒಂದು ಖಡಕ್ ರೋಲ್ ಮಾಡುತ್ತಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪೆದ್ದಿ ಸ್ಪೋರ್ಟ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು, 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ನ. 8ಕ್ಕೆ ಮೊದಲ ಸಾಂಗ್ ರಿಲೀಸ್
ʼಉಪ್ಪೆನʼ ಬಳಿಕ ಬುಚ್ಚಿಬಾಬು ನಿರ್ದೇಶನ ಮಾಡುತ್ತಿರುವ ಸಿನಿಮಾ ಪೆದ್ದಿ ಆಗಿದೆ. ಎ.ಆರ್. ರೆಹಮಾನ್ ಸಂಗೀತ ನಿರ್ದೇಶಕರಾಗಿರುವುದರಿಂದ ಈ ಚಿತ್ರಕ್ಕೆ ನಿರೀಕ್ಷೆ ಹೆಚ್ಚಾಗಿದೆ. ನವೆಂಬರ್ 8ರಂದು ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುವ ಎ.ಆರ್. ರೆಹಮಾನ್ ಲೈವ್ ಸಂಗೀತ ಕಾರ್ಯಕ್ರಮದಲ್ಲಿ ಪೆದ್ದಿ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | Peddi Movie: 40 ವರ್ಷದ ರಾಮ್ ಚರಣ್ ತಾಯಿ ಪಾತ್ರಕ್ಕೆ 33 ವರ್ಷದ ಸ್ವಾಸಿಕಾಗೆ ಆಫರ್; ʼಪೆದ್ದಿʼ ಚಿತ್ರದ ಬಗ್ಗೆ ನಟಿ ಹೇಳಿದ್ದೇನು?
ರಾಮ್ ಚರಣ್ ಅವರ ಈ ಹಿಂದಿನ ಎರಡು ಸಿನಿಮಾಗಳಾದ ಆಚಾರ್ಯ, ಗೇಮ್ ಚೇಂಜರ್ ದೊಡ್ಡಮಟ್ಟದ ಯಶಸ್ಸು ಗಳಿಸಿರಲಿಲ್ಲ. ಹೀಗಾಗಿ ಈ ಚಿತ್ರದ ಮೇಲೆ ಅವರ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದೇ ರೀತಿ ರಾಮ್ ಚರಣ್ ಕೂಡ ಒಳ್ಳೆಯ ಹಿಟ್ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಭಾರಿ ಬಜೆಟ್‌ನೊಂದಿಗೆ ಪೆದ್ದಿ ಚಿತ್ರ ನಿರ್ಮಾಣವಾಗುತ್ತಿದ್ದು, ಇದರ ಫಸ್ಟ್ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ. ಈ ಹಾಡಿನ ಮೂಲಕ ದೊಡ್ಡ ಮಟ್ಟದಲ್ಲಿ ಪ್ರಮೋಷನ್ ಶುರು ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.