ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gilli Nata Movie: ಗಿಲ್ಲಿ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್‌; ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ನಟ

Gilli: ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆದ ಅವರಿಗೆ ಸಾಲು ಸಾಲು ಸಿನಿಮಾ ಆಫರ್​ಗಳು ಬರುತ್ತಿವೆ ಈಗ ಆ ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಗೊತ್ತಾಗಿದೆ. ಈಗ ಅವರು ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ‘ಪಳಾರ್’ ಎಂದೇ ಶೀರ್ಷಿಕೆ ಇಡಲಾಗಿದೆ.ಕೆವಿಎನ್ ಪ್ರೊಡಕ್ಷನ್ಸ್’ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಮತ್ತು ಹರೀಶ್ ಅವರು ಚೊಚ್ಚಲ ಬಾರಿಗೆ ‘ಪಳಾರ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಗಿಲ್ಲಿ ನಟ

ಬಿಗ್ ಬಾಸ್ ಸೀಸನ್ 12ರ (Bigg Boss Kannada 12) ವಿಜೇತ ಗಿಲ್ಲಿ ನಟ (Gilli Nata) ಅವರಿಗೆ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಅವಕಾಶ ಸಿಕ್ಕಿದೆ. ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರ ಸಿನಿಮಾಗೆ ‘ಪಳಾರ್’ (Palaar Gilli) ಎಂದು ಶೀರ್ಷಿಕೆ ಇಡಲಾಗಿದೆ. ನವೀನ್ ಮತ್ತು ಹರೀಶ್ ನಿರ್ಮಾಣದ ಈ ಚಿತ್ರಕ್ಕೆ ಚಂದ್ರಮೋಹನ್ ನಿರ್ದೇಶನ (Chandra Mohan Dirfection) ಮಾಡುತ್ತಿದ್ದಾರೆ.

ವಿನ್ನರ್ ಆದ ಅವರಿಗೆ ಸಾಲು ಸಾಲು ಸಿನಿಮಾ ಆಫರ್​

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆದ ಅವರಿಗೆ ಸಾಲು ಸಾಲು ಸಿನಿಮಾ ಆಫರ್​ಗಳು ಬರುತ್ತಿವೆ ಈಗ ಆ ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಗೊತ್ತಾಗಿದೆ. ಈಗ ಅವರು ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ‘ಪಳಾರ್’ ಎಂದೇ ಶೀರ್ಷಿಕೆ ಇಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್’ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಮತ್ತು ಹರೀಶ್ ಅವರು ಚೊಚ್ಚಲ ಬಾರಿಗೆ ‘ಪಳಾರ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Sachin Tendulkar : ‘ಲಗಾನ್’ ಸಿನಿಮಾಗೆ 25 ವರ್ಷ: ಸಚಿನ್ ತೆಂಡುಲ್ಕರ್ ಹೇಳಿದ್ದೇನು?

ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಅರ್ಪಿಸುತ್ತಿದೆ. ಇಂದು (ಜೂನ್ 21) ಗಿಲ್ಲಿ ನಟ ಅವರಿಗೆ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿದೆ.

ನವೀನ್ ಮತ್ತು ಹರೀಶ್ ಅವರು ‘ರಾಶಿ ಫಿಲ್ಮ್ಸ್ ಮೂಲಕ ‘ಪಳಾರ್’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಚಂದ್ರಮೋಹನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇಲ್ಲಿಯವರೆಗೂ ಅಸಿಸ್ಟೆಂಟ್ ಡೈರೆಕ್ಟರ್ ಆಗಿ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ, ಹಾಸ್ಯ ನಟನಾಗಿ ಗಿಲ್ಲಿ ನಟ ಅಭಿನಯಿಸಿದ್ದಾರೆ. ಆದ್ರೀಗ, ಗಿಲ್ಲಿ ನಟ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ ಲಾಂಚ್ ಆಗುತ್ತಿದ್ದಾರೆ. 'ಕೆಡಿ: ದಿ ಡೆವಿಲ್' ಮುಂತಾದ ಬಿಗ್ ಬಜೆಟ್‌ ಚಿತ್ರಗಳನ್ನ ನಿರ್ಮಿಸಿರುವ ಕೆವಿಎನ್‌ ಪ್ರೊಡಕ್ಷನ್ಸ್ ಸಂಸ್ಥೆಯ ಅಡಿಯಲ್ಲಿ ಮೂಡಿಬರಲಿರುವ ಚಿತ್ರದ ಮೂಲಕ ಹೀರೋ ಆಗಿ ಗಿಲ್ಲಿ ನಟ ಮಿಂಚಲಿದ್ದಾರೆ. ಅಲ್ಲಿಗೆ, ಗಿಲ್ಲಿ ಹೀರೋ ಆಗಿ ಲಾಂಚ್ ಆಗುವುದಕ್ಕೆ ದೊಡ್ಡ ಪ್ರೊಡಕ್ಷನ್ ಸಂಸ್ಥೆಯೇ ಸಾಥ್ ನೀಡುತ್ತಿದೆ.



ಗಿಲ್ಲಿ ನಟ ಬಿಗ್ ಬಾಸ್‌ಗೂ ಮುನ್ನ ಹಲವು ಕಾಮಿಡಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರು. ಆದರೆ, ಬಿಗ್ ಬಾಸ್ ಅವರಿಗೆ ವೃತ್ತಿ ಬದುಕಿಗೆ ಬೇರೆಯದ್ದೇ ಇಮೇಜ್ ಕೊಟ್ಟಿದೆ. ಅವರ ಅಭಿಮಾನಿಗಳು ಗಿಲ್ಲಿಯನ್ನು ಹೀರೋ ಆಗಿ ಸಿಲ್ವರ್ ಸ್ಕ್ರೀನ್‌ನಲ್ಲಿ ನೋಡಬೇಕು ಅಂತ ಬಯಸಿದ್ದಾರೆ.

ಇದನ್ನೂ ಓದಿ: Aamir Khan: ಆಮೀರ್​ ಖಾನ್​ 3ನೇ ಮದುವೆ ಹೇಗೆ ನೆರವೇರಲಿದೆ? ಶಾಕ್‌ ಕೊಟ್ಟ ನಟ

ಬಿಗ್ ಬಾಸ್ ಫೇಮ್ ಅನ್ನು ಸಿನಿಮಾದವರೆಗೂ ಹಾಗೇ ಉಳಿಸಿಕೊಂಡು ಬರುವುದಕ್ಕೆ ಗಿಲ್ಲಿ ನಟ ಇಷ್ಟು ಸಮಯ ತೆಗೆದುಕೊಂಡಿದ್ದಾರೆ.

Yashaswi Devadiga

View all posts by this author