ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

GST Movie: ಮಜಾ ಟಾಕೀಸ್ ಮುಗಿದ ಬೆನ್ನಲ್ಲೇ ಗುಡ್‌ನ್ಯೂಸ್‌; ಸೃಜನ್ ಲೋಕೇಶ್ ನಟನೆಯ ʼGSTʼ ಚಿತ್ರ ಸದ್ಯದಲ್ಲೇ ತೆರೆಗೆ

Srujan Lokesh: ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನ ಮಾಡಿರುವ ʼGSTʼ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಮನೋರಂಜನೆಯೇ ಪ್ರಧಾನವಾಗಿರುವ ʼGSTʼ ಚಿತ್ರಕ್ಕೆ ʼಘೋಸ್ಟ್ ಇನ್ ಟ್ರಬಲ್ʼ ಎಂಬ ಅಡಿಬರಹವಿದೆ. ಈ ಕುರಿತ ವಿವರ ಇಲ್ಲಿದೆ.

ಸೃಜನ್ ಲೋಕೇಶ್ ನಟನೆ, ನಿರ್ದೇಶನದ ʼGSTʼ ಚಿತ್ರ ಸದ್ಯದಲ್ಲೇ ತೆರೆಗೆ

Profile Siddalinga Swamy Jun 6, 2025 9:03 PM

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್. ನಿರ್ಮಾಣದ ಹಾಗೂ ಸೃಜನ್ ಲೋಕೇಶ್ (Srujan Lokesh) ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ ʼGSTʼ ಚಿತ್ರವನ್ನು (GST Movie)‌ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ʼGSTʼ ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.

ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ ʼGSTʼ ಚಿತ್ರಕ್ಕೆ ʼಘೋಸ್ಟ್ ಇನ್ ಟ್ರಬಲ್ʼ ಎಂಬ ಅಡಿಬರಹವಿದೆ.

ಈ ಸುದ್ದಿಯನ್ನೂ ಓದಿ | Eco Friendly Fashion 2025: ಗ್ಲಾಮರಸ್ ವಿನ್ಯಾಸದಲ್ಲಿ ಕಾಲಿಟ್ಟ ಪರಿಸರ ಸ್ನೇಹಿ ಉಡುಪುಗಳು

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ.ನಾಗ್ ಈ ಚಿತ್ರದ ಸಹ ನಿರ್ದೇಶಕರು.