ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hari Hara Veera Mallu Movie: ಪವನ್‌ ಕಲ್ಯಾಣ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ʼಹರಿ ಹರ ವೀರ ಮಲ್ಲುʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Pawan Kalyan: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ತೆಲುಗು ಚಿತ್ರರಂಗದ ಪವರ್‌ ಸ್ಟಾರ್ ಪವನ್ ಕಲ್ಯಾಣ್ ಇದೀಗ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಹೌದು, ಪವನ್‌ ಕಲ್ಯಾಣ್‌ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ʼಹರಿ ಹರ ವೀರ ಮಲ್ಲುʼ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್‌ ಡೇಟ್‌ ಘೋಷಣೆಯಾಗಿದೆ.

ಹೈದರಾಬಾದ್‌: ತೆಲುಗು ಚಿತ್ರರಂಗದ ಪವರ್‌ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಗದ್ದುಗೇರಿದ ಮೇಲೆ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಬಹಳ ದಿನಗಳಿಂದ ಬಳಿಕ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಹೌದು, ಪವನ್‌ ಕಲ್ಯಾಣ್‌ ತಮ್ಮ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ ʼಹರಿ ಹರ ವೀರ ಮಲ್ಲುʼ (Hari Hara Veera Mallu Movie) ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್‌ ಡೇಟ್‌ ಘೋಷಣೆಯಾಗಿದೆ.

ʼಹರಿ ಹರ ವೀರ ಮಲ್ಲುʼ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸಿನಿಪ್ರಿಯರ ಗಮನ ಸೆಳೆದಿದೆ. ಬಿಗ್ ಬಜೆಟ್‌ನಲ್ಲಿ ತಯಾರಾಗಿರುವ ʼಹರಿ ಹರ ವೀರ ಮಲ್ಲುʼ ಸಿನಿಮಾ ಜು. 24ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.



ಈ ಸುದ್ದಿಯನ್ನೂ ಓದಿ: Drishyam 3: ಕಾಯುವಿಕೆಗೆ ಕೊನೆಗೂ ತೆರೆ ಬೀಳುವ ಸಮಯ; ಕ್ರೈಂ ಥ್ರಿಲ್ಲರ್‌ ಚಿತ್ರ ʼದೃಶ್ಯಂ 3ʼ ಆರಂಭಕ್ಕೆ ಮುಹೂರ್ತ ಫಿಕ್ಸ್‌

ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ ಈ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಅವರಿಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು 300 ವರ್ಷಗಳ ಹಿಂದೆ ನಡೆದ ಕಥೆಯನ್ನು ಚಿತ್ರತಂಡ ಕಟ್ಟಿಕೊಡ್ಡಿದ್ದು, ಇದಕ್ಕಾಗಿ ಬಹಳಷ್ಟು ಶ್ರಮಪಡಲಾಗಿದೆ. ವೀರಮಲ್ಲು ಆಗಿ ಪವನ್ ಕಲ್ಯಾಣ್ ಲುಕ್, ಗೆಟಪ್ ಭರವಸೆ ಮೂಡಿಸಿದೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ.

ಚಿತ್ರದಲ್ಲಿ ನಿಧಿ ಅಗರ್‌ವಾಲ್ ನಾಯಕಿಯಾಗಿ ಮಿಂಚಿದ್ದಾರೆ. ಇನ್ನುಳಿದಂತೆ ಬಾಬಿ ಡಿಯೋಲ್, ನರ್ಗೀಸ್ ಫಕ್ರಿ, ಆದಿತ್ಯ ಮೆನನ್, ಶುಭಲೇಖ ಸುಧಾಕರ್ ತಾರಾಗಣದಲ್ಲಿದ್ದಾರೆ. ರೋಚಕ ಯುದ್ಧದ ಸನ್ನಿವೇಶಗಳು ಚಿತ್ರದಲ್ಲಿದೆ. ಮೆಗಾ ಸೂರ್ಯ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಎ. ದಯಾಕರ್ ರಾವ್ ಈ ಚಿತ್ರವನ್ನು ನಿರ್ಮಿಸಿದ್ದು, ಎ.ಎಂ. ರತ್ನಂ ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಮನೋಜ್ ಪರಮಹಂಸ ಛಾಯಾಗ್ರಹಣ ಚಿತ್ರಕ್ಕಿದೆ.

Ramesh Ballamoole

View all posts by this author