ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gharga Movie: ಮಗನನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ ʻಜೋಗಿʼ ನಿರ್ಮಾಪಕ ʻಅಶ್ವಿನಿʼ ರಾಮ್ ಪ್ರಸಾದ್

Gharga Movie: 'ಜೋಗಿ' ಖ್ಯಾತಿಯ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ತಮ್ಮ ಪುತ್ರ ಅರುಣ್ ಅವರನ್ನು ʻಘಾರ್ಗʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಇದೊಂದು ಅಡ್ವೆಂಚರಸ್ ಡ್ರಾಮಾ ಮತ್ತು ಹಾರರ್-ಕ್ರೈಮ್ ಥ್ರಿಲ್ಲರ್ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಅರುಣ್ ರೈಟರ್ ಮತ್ತು ಅಂಡರ್‌ವರ್ಲ್ಡ್ ಸೇರಿ 3 ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ʻಹ್ಯಾಟ್ರಿಕ್‌ ಹೀರೋʼ ಶಿವರಾಜ್‌ಕುಮಾರ್‌ ನಟನೆಯ ʻಜೋಗಿʼ ಮತ್ತು ಪ್ರೇಮ್ ನಟಿಸಿ, ನಿರ್ದೇಶಿಸಿದ್ದ ʻಪ್ರೀತಿ ಏಕೆ ಭೂಮಿ ಮೇಲಿದೆʼ ಮುಂತಾದ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ನಿರ್ಮಾಪಕ ʻಅಶ್ವಿನಿʼ ರಾಮ್ ಪ್ರಸಾದ್ ಇದೀಗ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಹೌದು, ರಾಮ್‌ ಪ್ರಸಾದ್‌ ಅವರ ಪುತ್ರ ಅರುಣ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಈ ಚಿತ್ರಕ್ಕೆ ʻಘಾರ್ಗʼ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಚಿತ್ರದ 'ನೀನು ನನಗೆ' ಎಂಬ ರೊಮ್ಯಾಂಟಿಕ್ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಇದೊಂದು ಅಡ್ವೆಂಚರಸ್ ಡ್ರಾಮಾ ಕಥಾನಕವಾಗಿದ್ದು, ಚಿತ್ರದಲ್ಲಿ ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರೆಹಾನ ಅಭಿನಯಿಸಿದ್ದಾರೆ. ಎಂ. ಶಶಿಧರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ʻಘಾರ್ಗಾʼ ಎಂಬುದು ಒಂದು ಊರಿನ ಹೆಸರು. "ಕನ್ನಡ ಚಿತ್ರರಂಗದಲ್ಲಿ 40 ವರ್ಷ ಆಡಿಯೋ ಕಂಪನಿ ಮಾಲೀಕ, ನಿರ್ಮಾಪಕನಾಗಿ ಕೆಲಸ ಮಾಡಿದ್ದೇನೆ, ಇದೀಗ ನನ್ನ ಮಗನನ್ನು ಲಾಂಚ್ ಮಾಡುತ್ತಿದ್ದೇನೆ. ಈ ಚಿತ್ರವನ್ನು 4 ವರ್ಷಗಳ ಹಿಂದೆಯೇ ಶುರು ಮಾಡಿದ್ದೆವು, ಹಲವಾರು ಕಾರಣಗಳಿಂದ ತಡವಾಯಿತು. ಇದೊಂದು ವಿಭಿನ್ನ ಜಾನರ್ ಚಿತ್ರ, ನಾಯಕ ಇಲ್ಲಿ 3 ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಾನೆ" ಎನ್ನುತ್ತಾರೆ ನಿರ್ಮಾಪಕ ರಾಮ್‌ಪ್ರಸಾದ್.

Life Today Movie: ಲೈಫ್‌ ಟುಡೇ ಸಿನಿಮಾದ ಹಾಡಿಗೆ ದನಿಯಾದ ಜೋಗಿ ಪ್ರೇಮ್‌- ಭಗ್ನ ಪ್ರೇಮಿಗಳಿಗೆ ಪಕ್ಕಾ ಸೂಟ್‌ ಆಗೋ ಸಾಂಗ್‌ ಇದಂತೆ!

ಜನವರಿಯಲ್ಲಿ ರಿಲೀಸ್

"ಚಿಕ್ಕಮಗಳೂರಿನಲ್ಲಿ ಸೆಟ್ ಹಾಕಿ ಶೂಟಿಂಗ್ ಮಾಡುವಾಗ ಸೆಟ್ ಸುಟ್ಟು ಸ್ವಲ್ಪ ತೊಂದರೆಯಾಯಿತು, ನಿರ್ದೇಶಕ ಶಶಿಧರ್ ತುಂಬಾ ಚೆನ್ನಾಗಿ ಕಥೆ, ಚಿತ್ರಕಥೆ ಮಾಡಿದ್ದಾರೆ, ಚಿತ್ರವೀಗ ಬಿಡುಗಡೆಗೆ ಸಿದ್ದವಿದ್ದು, ಸೆನ್ಸಾರ್‌ಗೆ ಹೋಗಲು ಅಣಿಯಾಗಿದೆ, ಜನವರಿಯಲ್ಲಿ ರಿಲೀಸ್ ಮಾಡುವ ಯೋಜನೆಯಿದೆ, ನಮ್ಮ ಚಿತ್ರವನ್ನು ಎನ್. ಕುಮಾರ್ ಅವರು ರಿಲೀಸ್ ಮಾಡುತ್ತಿದ್ದಾರೆ" ಎಂದು ನಿರ್ಮಾಪಕ ರಾಮ್‌ಪ್ರಸಾದ್ ಹೇಳಿದ್ದಾರೆ.

"ಈ ಚಿತ್ರವನ್ನು 5 ವರ್ಷಗಳ ಹಿಂದೆ ಪ್ರಾರಂಭಿಸಿದ್ದೆವು. ಕೋವಿಡ್ ಸೇರಿ ಹಲವಾರು ಕಾರಣಗಳಿಂದ ಮುಂದೆ ಹೋಗಬೇಕಾಯ್ತು, ಅಡ್ವೆಂಚರಸ್ ಡ್ರಾಮಾದಲ್ಲಿ ಫಿಕ್ಷನಲ್ ಕಥೆಯಿದೆ, ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್ ಹೀಗೆ ಎಲ್ಲ ರೀತಿಯ ಮನರಂಜನಾತ್ಮಕ ಅಂಶಗಳೂ ಚಿತ್ರದಲ್ಲಿವೆ. ಮಂಗಳೂರು, ಚಿಕ್ಕಮಗಳೂರು, ದಾಂಡೇಲಿ, ಆಗುಂಬೆ ಹಾಗೂ ಬೆಂಗಳೂರಲ್ಲಿ ಚಿತ್ರೀಕರಿಸಿದ್ದೇವೆ, ಚಿತ್ರದ ಟ್ರೈಲರ್ ನೋಡಿ ಜೀ ತಂಡದವರು ಉತ್ತಮ ಮೊತ್ತ ಕೊಟ್ಟು ರೈಟ್ಸ್ ಖರೀದಿಸಿದ್ದಾರೆ" ಎನ್ನುತ್ತಾರೆ ನಿರ್ದೇಶಕ ಶಶಿಧರ್.

ನಿರ್ದೇಶಕರು ಹೇಳಿದ್ದೇನು?

"ನಟನೆಗೆ ಬೇಕಾದ ಎಲ್ಲ ತಯಾರಿಯನ್ನು ಮಾಡಿಕೊಂಡೇ ನಾನು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇನೆ. ನನಗೆ ಇಡೀ ಸಿನಿಮಾ ಒಂದು ರೀತಿ ಚಾಲೆಂಜಿಂಗ್ ಆಗಿತ್ತು, ಆಗಾಗ ನನ್ನ ತೂಕವನ್ನು ಕಡಿಮೆ, ಹೆಚ್ಚು ಮಾಡಿಕೊಳ್ಳಬೇಕಿತ್ತು. ನನ್ನ ಪಾತ್ರಕ್ಕೆ ರೈಟರ್, ಅಂಡರ್‌ವರ್ಲ್ಡ್‌ ಹೀಗೆ ಹಲವಾರು ಶೇಡ್ಸ್ ಇದೆ, ಇದೊಂದು ಹಾರರ್, ಕ್ರೈಮ್ ಥ್ರಿಲ್ಲರ್ ಸಬ್ಜೆಕ್ಟ್ ಆಗಿದ್ದು, ಚಿತ್ರದ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದೆ" ಎನ್ನುತ್ತಾರೆ ಶಶಿಧರ್.