ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Just Married: ಅಜನೀಶ್ ಲೋಕನಾಥ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ "ಜಸ್ಟ್ ಮ್ಯಾರೀಡ್" ರಿಲೀಸ್‌ ಡೇಟ್‌ ಫಿಕ್ಸ್‌

ಬಿಗ್‌ ಬಾಸ್‌ 7 ಸೀಸನ್‌ ವಿನ್ನರ್‌ ಶೈನ್‌ ಶೆಟ್ಟಿ ಹಾಗೂ ನಮ್ಮನೆ ಯುವರಾಣಿ ಮೂಲಕ ಫೇಮಸ್‌ ಆಗಿದ್ದ ಅಂಕಿತಾ ಅಮರ್‌ ಅವರ ಬಹು ನಿರೀಕ್ಷಿತ ಚಿತ್ರ ಜಸ್ಟ್‌ ಮ್ಯಾರೀಡ್‌ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ "ಜಸ್ಟ್ ಮಾರೀಡ್" ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

"ಜಸ್ಟ್ ಮ್ಯಾರೀಡ್" ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್‌

Vishakha Bhat Vishakha Bhat Jul 27, 2025 11:49 AM

ಬೆಂಗಳೂರು: ಬಿಗ್‌ ಬಾಸ್‌ 7 ಸೀಸನ್‌ ವಿನ್ನರ್‌ ಶೈನ್‌ ಶೆಟ್ಟಿ ಹಾಗೂ ನಮ್ಮನೆ ಯುವರಾಣಿ ಮೂಲಕ ಫೇಮಸ್‌ ಆಗಿದ್ದ ಅಂಕಿತಾ ಅಮರ್‌ ಅವರ ಬಹು ನಿರೀಕ್ಷಿತ ಚಿತ್ರ ಜಸ್ಟ್‌ ಮ್ಯಾರೀಡ್‌ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ "ಜಸ್ಟ್ ಮಾರೀಡ್" ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆಗಸ್ಟ್ 22ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಪೋಸ್ಟರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ನಾಯಕನಾಗಿ "ಬಿಗ್ ಬಾಸ್" ಖ್ಯಾತಿಯ ಶೈನ್ ಶೆಟ್ಟಿ ಹಾಗೂ ನಾಯಕಿಯಾಗಿ ಅಂಕಿತ ಅಮರ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಬಹುತಾರಾಗಣವೇ ಇದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದ ಕಲಾವಿದರು ಬದುಕಿದ್ದಾರೆ.

ಆರು ಸುಮಧುರ ಹಾಡುಗಳಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ ಆರ್ ಬಾಬಿ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಅಡಿಷನಲ್ ಸ್ಕ್ರೀನ್ ಪ್ಲೇ ರಂಜನ್ ಅವರದ್ದು. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ: Killer Movie: ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌.ಜೆ.ಸೂರ್ಯ; ಪ್ಯಾನ್‌ ಇಂಡಿಯಾ ಸಿನಿಮಾ ಘೋಷಣೆ

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ‘ಜಸ್ಟ್ ಮ್ಯಾರೀಡ್’ ಚಿತ್ರದ ಹಾಡುಗಳನ್ನು ಕೆ ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.