ಕನ್ನಡ ಚಿತ್ರರಂಗದಲ್ಲಿ ಪ್ರಸ್ತುತವಾಗಿ ವಿಭಿನ್ನ ಶೀರ್ಷಿಕೆಯ ಸಿನಿಮಾಗಳು ಸದ್ದು ಮಾಡುತ್ತಿದೆ. ಆ ಸಾಲಿನಲ್ಲಿ 'ಕರಿಕಾಡ' ಎನ್ನುವ ಹೊಸ ಸಿನಿಮಾವು ಒಂದು. ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸುತ್ತಿದೆ. ಈ ಸಿನಿಮಾವು ಇದೀಗ ತೆರೆಮೇಲೆ ಬರಲು ಸಜ್ಜಾಗಿದೆ. ಅದು ಕೂಡ ಐದು ಭಾಷೆಗಳಲ್ಲಿ ರಿಲೀಸ್ ಆಗಲು ನಿರ್ಮಾಪಕರು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ.
ಕಾಡ ನಟರಾಜ್ ನಾಯಕನಾಗಿ ಹಾಗೂ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಸಿನಿಮಾದ ಹಾಡು ಕೇಳಿರುವ ಸಿನಿಪ್ರಿಯರು ಇಬ್ಬರ ಆನ್ ಸ್ಕ್ರೀನ್ ಕೆಮಿಸ್ಟ್ರಿಯನ್ನು ಇಷ್ಟ ಪಟ್ಟಿದ್ದಾರೆ. ಹಾಗಾಗಿ, ಇವರ ನಟನೆಯ ಮೇಲೆಯೂ ನಿರೀಕ್ಷೆಗಳು ಹೆಚ್ಚಿದೆ. ಇನ್ನು ಸಿನಿಮಾಗೆ ಗಿಲ್ಲಿ ವೆಂಕಟೇಶ್ ಅವರು ಆಕ್ಷನ್-ಕಟ್ ಹೇಳಿದ್ದಾರೆ. ರಿದ್ದಿ ಎಂಟರ್‌ಟೇನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ದೀಪ್ತಿ ದಾಮೋದರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಐದು ಭಾಷೆಗಳಲ್ಲಿ ಬರ್ತಿದೆ 'ಕರಿಕಾಡ'
ಸದ್ಯಕ್ಕೆ ಸಿನಿಮಾರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಕ್ರೇಜ್ ಜೋರಾಗಿದೆ. ಇದೀಗ ಈ ಲಿಸ್ಟ್‌ನಲ್ಲಿ ಕರಿಕಾಡವು ಒಂದು. ಕನ್ನಡ ಸೇರಿ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಫೆಬ್ರವರಿ 6ರಂದು ಕರಿಕಾಡ ತೆರೆಕಾಣಲಿದೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನೋಡಿದಾಗ ಇದು ಒಂದು ಅಡ್ವೆಂಚರಸ್ ಜೊತೆಗೆ ಪಕ್ಕ ಹಳ್ಳಿ ಸೊಗಡಿನ ಸಿನಿಮಾ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.
ಒಂದು ಕಾಡಿನಲ್ಲಿ ನಡೆಯುವ ದ್ವೇಷ, ಪ್ರತಿಕಾರ ಮತ್ತು ಪ್ರೀತಿ ಎಲ್ಲ ಭಾವನೆಗಳ ಮಿಶ್ರಣಗಳ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಹಾಗಾಗಿ, ʻಕರಿಕಾಡʼ ಸಿನಿಮಾದ ಮೇಲಿನ ಕುತೂಹಲವನ್ನು ದುಪ್ಪಟ್ಟಾಗುವಂತೆ ಮಾಡಿದೆ ಈ ಟೀಸರ್. ಇನ್ನು, ಕರಿಕಾಡ ಚಿತ್ರಕ್ಕೆ ಅತೀಶಯ್ ಜೈನ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆಯನ್ನು ಮಾಡಿದ್ದು, ಈಗಾಗಲೇ ಬಿಡುಗಡೆಯಾದ 'ರತುನಿ ರತುನಿ' ಮತ್ತು 'ಕಬ್ಬಿನ್ ಜಲ್ಲೆ' ಎಂಬ ಎರಡು ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಸಿನಿಮಾದ ಮೂರನೇ ಹಾಡು 'ನೀ ಯಾರೇ ನನಗೆ' ಜನವರಿ 28ರಂದು ರಿಲೀಸ್ ಆಗಲು ಸಜ್ಜಾಗಿದೆ. ಒಂದು ರೀತಿಯಲ್ಲಿ ಹಲವಾರು ಹೊಸ ಪ್ರತಿಭೆಗಳಿರುವ ಈ ಸಿನಿಮಾವು ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ. ಜೊತೆಗೆ ಸಿನಿಮಾದ ಕಥೆ ಹಾಗೂ ನಟನೆಯ ಬಗ್ಗೆ ಚಿತ್ರೋದ್ಯಮದಲ್ಲಿ ದೊಡ್ಡ ಮಟ್ಟದ ಕುತೂಹಲವಿದೆ.