ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Golden star Ganesh: ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ

Golden star Ganesh: ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ, ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ತೆಲುಗಿನ ʼಹನುಮಾನ್ʼ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರಕ್ಕೆ ಗಣೇಶ್ ಹೀರೋ

Profile Siddalinga Swamy Mar 13, 2025 3:41 PM

ಬೆಂಗಳೂರು: ತಮ್ಮ ಹಾಡುಗಳ ಮೂಲಕ ಜನಪ್ರಿಯರಾಗಿರುವ ಗೀತರಚನೆಕಾರ ಹಾಗೂ ʼಲವ್ ಇನ್ ಮಂಡ್ಯʼ ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ (Kannada New Movie) ನಾಯಕರಾಗಿ, ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Golden star Ganesh) ನಟಿಸುತ್ತಿದ್ದಾರೆ. ತೆಲುಗಿನ ʼಹನುಮಾನ್ʼ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ (Amrutha Iyer) ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್‌ವುಡ್ (Sandalwood) ಪ್ರವೇಶಿಸುತ್ತಿದ್ದಾರೆ. SNT ಎಂಟರ್‌ಪ್ರೈಸಸ್ ಲಾಂಛನದಲ್ಲಿ ರವಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ.

ನಿರ್ದೇಶಕ ಅರಸು ಅಂತಾರೆ ಅವರ ಚಿತ್ರಕಥೆಗೆ ಮಹೇಶ್ ದೇವ್ ಡಿ.ಎನ್. ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ. ರಾವ್ ಸಂಕಲನ, ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ರಮೇಶ್ ಅವರ ನಿರ್ಮಾಣ ನಿರ್ವಹಣೆ ಇದೆ. ಇನ್ನೂ ನಿರ್ದೇಶಕರು ಮೂಲತಃ ಗೀತರಚನೆಕಾರರಾಗುವುದರಿಂದ ಚಿತ್ರದ ಹಾಡುಗಳು ಸಂಗೀತ ಪ್ರಿಯರಿಗೆ ರಸದೌತಣ ನೀಡುವುದಂತು ಖಚಿತ.

ಈ ಸುದ್ದಿಯನ್ನೂ ಓದಿ | Holi Dupatta Fashion 2025: ಹೋಳಿ ಫೆಸ್ಟಿವ್ ಸೀಸನ್‌ನಲ್ಲಿ ಡಿಸೈನರ್‌ವೇರ್ಸ್‌ಗೆ ರಂಗುರಂಗಿನ ದುಪಟ್ಟಾ ಸಾಥ್!

ಏಪ್ರಿಲ್ 6 ರಂದು ನಮ್ಮ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ‌. ಏಪ್ರಿಲ್ 7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿರುವ ನಿರ್ದೇಶಕ ಅರಸು ಅಂತಾರೆ ಅವರು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.