Kannada New Movie: ಹೊರಬಂತು ‘ಕಲ್ಯಾಣಿ’ ಚಿತ್ರದ ಹಾಡುಗಳು; ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ ಯಾನ!
Kannada New Movie: ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಹೌದು, ಲೇಖಕ ಬಸವ ರೆಡ್ಡಿ ಅವರ ಕಥೆಗೆ ಬಿ. ಎಂ. ಗಿರಿರಾಜ ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲ ತಿಂಗಳ ಹಿಂದೆಯೇ ಸದ್ದಿಲ್ಲದೆ ಶುರುವಾಗಿದ್ದ ಈ ಚಿತ್ರ, ಸದ್ಯ ತನ್ನ ಸಂಪೂರ್ಣ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ, ತರೆಗೆ ಬರಲು ತಯಾರಾಗಿದೆ.
ಕಲ್ಯಾಣಿ ಸಿನಿಮಾ -
ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಹೌದು, ಲೇಖಕ ಬಸವ ರೆಡ್ಡಿ ಅವರ ಕಥೆಗೆ ಬಿ. ಎಂ. ಗಿರಿರಾಜ ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲ ತಿಂಗಳ ಹಿಂದೆಯೇ ಸದ್ದಿಲ್ಲದೆ ಶುರುವಾಗಿದ್ದ ಈ ಚಿತ್ರ, ಸದ್ಯ ತನ್ನ ಸಂಪೂರ್ಣ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ, ತರೆಗೆ ಬರಲು ತಯಾರಾಗಿದೆ.
ಇದರ ನಡುವೆಯೇ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ಆಡಿಯೋ ಬಿಡುಗಡೆ ಮಾಡಿ, ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿತು.
ಅಂದಹಾಗೆ, ಲೇಖಕ ಬಸವ ರೆಡ್ಡಿ ಕಥೆ ಬರೆದಿರುವ, ಬಿ. ಎಂ. ಗಿರಿರಾಜ ನಿರ್ದೇಶನದ ಹೊಸಚಿತ್ರಕ್ಕೆ ‘ಕಲ್ಯಾಣಿ’ ಎಂದು ಹೆಸರಿಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಸುಮಾರು ಮೂರು ದಶಕಗಳಿಂದ ಕಾರ್ಯಕಾರಿ ನಿರ್ಮಾಪಕರಾಗಿ 45ಕ್ಕೂ ಹೆಚ್ಚು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವವಿರುವ ಕುಮಾರಸ್ವಾಮಿ ಆರ್. ‘ಆರ್. ಕೆ. ಸಿನೆಮಾಸ್’ ಬ್ಯಾನರಿನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ: Bigg Boss Kannada 13: ಬೆನ್ನಹಿಂದೆ ಚಾಕು ಹಾಕಿದ ಯಶಸ್; ಅತ್ತ ಸೌದರ್ಯ ಅಸಲಿ ಬಣ್ಣ ರಿವೀಲ್!
ಉತ್ತರ ಭಾರತದ ನಟಿ
ಈಗಾಗಲೇ ರಂಗಭೂಮಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವ ನಟ ಸಾಮ್ರಾಟ್ ಶೆಟ್ಟಿ ‘ಕಲ್ಯಾಣಿ’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಉತ್ತರ ಭಾರತದ ನಟಿ ಸಿಮ್ರನ್, ರಾಹುಲ್ ಜೇಟ್ಲಿ, ಶಮಂತ್ ರಾವ್, ಪಿ. ಡಿ. ಸತೀಶ್ ಚಂದ್ರ, ಯಮುನಾ ಶ್ರೀನಿಧಿ, ವಿಜಯ್ ಚೆಂಡೂರು, ಶೈಲೇಂದ್ರ, ರಂಗು ಸಮರ್ಪಣ್ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ‘ಕಲ್ಯಾಣಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
‘ಕಲ್ಯಾಣಿ’ ಚಿತ್ರದ ಬಗ್ಗೆ ಮಾತನಾಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ್, ‘ನವಿರಾದ ಒಲವಿನ ಕಥೆ ಮುನ್ನಲೆಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿ ನಂಬಿಕೆ, ಸ್ನೇಹ, ಐಡೆಂಟಿಟಿಯ ವಿಷಯಗಳು ಈ ಸಿನಿಮಾದಲ್ಲಿದೆ. ಬೇರೆ ಬೇರೆ ಸಂಸ್ಕೃತಿಗಳ ಮುಖಾಮುಖಿ ಈ ಸಿನಿಮಾ. ಉತ್ತರ ಭಾರತದಿಂದ ಬರುವ ಹುಡುಗಿ ದಕ್ಷಿಣ ಭಾರತದ ಹುಡುಗನ ಎರಡು ಪಾತ್ರಗಳನ್ನು ಪ್ರಧಾನವಾಗಿ ಇಟ್ಟುಕೊಂಡು ಎರಡು ಸಂಸ್ಕೃತಿಗಳ ಅನಾವರಣವನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇವೆ. ನಾನು ಇಲ್ಲಿಯವರೆಗೆ ಮಾಡಿರುವ ಸಿನಿಮಾಗಳಿಗಿಂತ ಸಂಪೂರ್ಣ ವಿಭಿನ್ನವಾಗಿರುವಂತ ಸಿನಿಮಾ ಇದಾಗಿದೆ’ ಎಂದಿದ್ದಾರೆ.
ಇನ್ನು ಬಿಡುಗಡೆಯಾಗಿರುವ 'ಕಲ್ಯಾಣಿ’ ಚಿತ್ರದ ಮೂರು ಹಾಡುಗಳಿಗೆ ಬಿ. ಜೆ. ಭರತ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಒಂದು ಹಾಡಿನಲ್ಲಿ ವರಕವಿ ದ. ರಾ. ಬೇಂದ್ರೆ, ಮತ್ತೊಂದು ಹಾಡಿನಲ್ಲಿ ವಿಜಯ್ ಈಶ್ವರ್ ಸಾಹಿತ್ಯವಿದೆ.
ಇನ್ನು ಚಿತ್ರದ 'ನಿನ್ನ ಲುಕ್ಕು ಫ್ಯಾಂಟಾಸ್ಟಿಕ್ಕು...' ಎಂಬ ರ್ಯಾಪ್ ಶೈಲಿಯ ಗೀತೆಗೆ ಕನ್ನಡದ ಜನಪ್ರಿಯ ರ್ಯಾಪ್ ಗಾಯಕ ಆಲ್ ಓಕೆ (ಅಲೋಕ್) ಸಾಲು ಬರೆದು, ಧ್ವನಿಯಾಗುವುದರ ಜೊತೆಗೆ ತೆರೆಮೇಲೆ ಹೆಜ್ಜೆ ಹಾಕಿರುವುದು ವಿಶೇಷ. ಹಿರಿಯ ನಿರ್ದೇಶಕ ಶಶಾಂಕ್, 'ಕಲ್ಯಾಣಿ' ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದನ್ನೂ ಓದಿ: Sanjay Gupta: ಬಾತ್ರೂಮ್ನಲ್ಲಿ ಬಿದ್ದು ನಟ, ನಿರ್ದೇಶಕ ಸಂಜಯ್ ಗುಪ್ತಾ ನಿಧನ
'ಕಲ್ಯಾಣಿ' ಚಿತ್ರಕ್ಕೆ ಪ್ರಶಾಂತ ಲಾಗರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಕಾರ್ಯವಿದೆ. ಭಟ್ಕಳ, ಉಡುಪಿ, ಬೆಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಇದೇ ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ‘ಕಲ್ಯಾಣಿ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.