'ಕಾಂತಾರ: ಚಾಪ್ಟರ್ 1' (Kantara: A Legend Chapter-1) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ನಟ/ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ನವೆಂಬರ್ 19ರಂದು ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಯಾವ ಕಾರಣಕ್ಕಾಗಿ ಈ ಭೇಟಿ ನಡೆದಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಇನ್ನು, ರಿಷ ಶೆಟ್ಟಿ ಅವರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೆಚ್ಚುಗೆ ಸೂಚಿಸಿ, ಟ್ವೀಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಮಾಡಿದ ಟ್ವೀಟ್‌ನಲ್ಲಿ ಏನಿದೆ?
ರಿಷಬ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಬಳಿಕ ಫೋಟೋಗಳನ್ನು ಹಂಚಿಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್, "ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು (ನ.19) ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ 'ಕಾಂತಾರ: ಒಂದು ದಂತಕಥೆ - ಅಧ್ಯಾಯ 1' ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ" ಎಂದು ಹೇಳಿದ್ದಾರೆ.
Kantara Chapter 1: ಕಾಂತಾರ ಚಾಪ್ಟರ್-1 ಸಕ್ಸಸ್ ಪಾರ್ಟಿ; ಅದ್ದೂರಿ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ?
ರಿಷಬ್ ಕಾರ್ಯವೈಖರಿ ಶ್ಲಾಘನೀಯ
"ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಇನ್ನೂ ಎತ್ತರಕ್ಕೆ ಅವರು ಬೆಳೆಯಲಿ ಎಂದು ಶುಭಹಾರೈಸಿದೆ" ಎಂದು ಹೇಳಿದ್ದಾರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್. \
ಕಾಂತಾರ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ರಿಷಬ್
ರಿಷಬ್ ಶೆಟ್ಟಿ ಅವರು ಸದ್ಯ ಕಾಂತಾರ: ಚಾಪ್ಟರ್ 1 ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾವು ಸುಮಾರು 850 ಕೋಟಿ ರೂ. ಗಳಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ. ʻಕೆಜಿಎಫ್ 2ʼ ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಕಾಂತಾರ ಚಾಪ್ಟರ್ 1 ಪಡೆದುಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿಯು ಈ ಚಿತ್ರಕ್ಕೆ ದಕ್ಕಿದೆ.
ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾ ಪೋಸ್ಟ್
ರಿಷಬ್ ಮುಂದಿನ ಸಿನಿಮಾ ಯಾವುದು?
ಸದ್ಯ ಎಲ್ಲರ ಗಮನವು ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾದ ಮೇಲಿದೆ. ತೆಲುಗಿನ ಪ್ರಶಾಂತ್ ವರ್ಮಾ ಅವರ ಜೊತೆಗೆ ರಿಷಬ್ ಶೆಟ್ಟಿ ಕೈಜೋಡಿಸಿದ್ದು, ಜೈ ಹನುಮಾನ್ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಮೈತ್ರಿ ಮೂವೀ ಮೇಕರ್ಸ್ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜನವರಿಯಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಇದರ ಜೊತೆಗೆ ಪರಭಾಷೆಯ ಇನ್ನೊಂದಿಷ್ಟು ನಿರ್ಮಾಣ ಸಂಸ್ಥೆಗಳ ಜೊತೆಗೆ ರಿಷಬ್ ಶೆಟ್ಟಿ ಅವರು ಕೈಜೋಡಿಸಿದ್ದಾರೆ.