Kantara Chapter 1: ಆಸ್ಕರ್ ರೇಸ್‌ಗೆ ಎಂಟ್ರಿ ಕೊಟ್ಟ ‘ಕಾಂತಾರ ಚಾಪ್ಟರ್ 1’; ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ
Rishab: ಕಳೆದ ವರ್ಷ 'ಕಾಂತಾರ-1' ಹಾಗೂ 'ಮಹಾವತಾರ್ ನರಸಿಂಹ' ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಚಿತ್ರಗಳನ್ನು ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್‌ಗೆ ಪ್ರವೇಶಿಸಿದೆ.
ಕಾಂತಾರ ಸಿನಿಮಾ -
ಕಳೆದ ವರ್ಷ 'ಕಾಂತಾರ-1' (kantara chapter 1) ಹಾಗೂ 'ಮಹಾವತಾರ್ ನರಸಿಂಹ' ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಇದೀಗ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ (Oscar Race) ರೇಸ್‌ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ ಎಂದು ವರದಿಯಾಗಿದೆ. ಇದೀಗ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ ಹೊಂಬಾಳೆ.
ಅತ್ಯುತ್ತಮ ಅನಿಮೇಟೆಡ್ ಫೀಚರ್ ಫಿಲ್ಮ್
'ಮಹಾವತಾರ ನರಸಿಂಹ' ಚಿತ್ರವು 'ಅತ್ಯುತ್ತಮ ಚಿತ್ರ' ಮಾತ್ರವಲ್ಲದೆ, 'ಅತ್ಯುತ್ತಮ ಅನಿಮೇಟೆಡ್ ಫೀಚರ್ ಫಿಲ್ಮ್' ವಿಭಾಗದಲ್ಲೂ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದೆ. ಆ ಮೂಲಕ ಈ ವಿಭಾಗದಲ್ಲಿ ಆಯ್ಕೆಯಾದ ಭಾರತದ ಮೊದಲ ಅನಿಮೇಷನ್ ಚಿತ್ರ ಎಂಬ ಇತಿಹಾಸ ಬರೆದಿದೆ.ಈ ವರ್ಷ ಆಸ್ಕರ್‌ನ ಸಾಮಾನ್ಯ ಪಟ್ಟಿಯಲ್ಲಿರುವ ಭಾರತದ ಕೇವಲ ಐದು ಚಿತ್ರಗಳ ಪೈಕಿ ಎರಡು ಚಿತ್ರಗಳು ಹೊಂಬಾಳೆ ಸಂಸ್ಥೆಯದ್ದಾಗಿರುವುದು ಗಮನಾರ್ಹ.
ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಚಾಪ್ಟರ್ 1' ತನ್ನ ಸಾಂಸ್ಕೃತಿಕ ಬೇರುಗಳ ಮೂಲಕ ಜಗತ್ತನ್ನು ಸೆಳೆದಿದ್ದರೆ, ಅಶ್ವಿನ್ ಕುಮಾರ್ ನಿರ್ದೇಶನದ 'ಮಹಾವತಾರ ನರಸಿಂಹ' ತನ್ನ ದೃಶ್ಯ ವೈಭವದ ಮೂಲಕ ಹೊಸ ಸಂಚಲನ ಮೂಡಿಸಿದೆ. ಈ ಎರಡೂ ಚಿತ್ರಗಳು ಈಗ ಆಸ್ಕರ್‌ನ ಪ್ರಮುಖ ವಿಭಾಗಗಳಾದ ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ, ಛಾಯಾಗ್ರಹಣ ಮತ್ತು ಚಿತ್ರಕಥೆ ವಿಭಾಗಗಳಲ್ಲೂ ಸ್ಪರ್ಧೆಗೆ ಇಳಿಯಲಿವೆ.
ಭಾರತೀಯ ಕಥೆಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಗರಿಷ್ಠ ಗುಣಮಟ್ಟದೊಂದಿಗೆ ಕೊಂಡೊಯ್ಯುತ್ತಿರುವ ವಿಜಯ್ ಕಿರಗಂದೂರು ಅವರ ನೇತೃತ್ವದ ಹೊಂಬಾಳೆ ಫಿಲ್ಮ್ಸ್‌ಗೆ ಇದು ಅತ್ಯಂತ ಹೆಮ್ಮೆಯ ಕ್ಷಣವಾಗಿದೆ.
Rooted in our culture, driven by divinity.
— Hombale Films (@hombalefilms) January 9, 2026
Proud and privileged as #KantaraChapter1 enters the Best Picture contending race at the #Oscars Academy Awards 2026.#KantaraForOscars#Kantara @hombalefilms @KantaraFilm @shetty_rishab @VKiragandur @ChaluveG @rukminitweets… pic.twitter.com/xSCsH28Qjr
ಜಾಗತಿಕ ಮಟ್ಟದಲ್ಲಿ ಸದ್ದು
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡಿದೆ. ಹೀಗಿರುವಾಗಲೇ ಸಿನಿಮಾ ಆಸ್ಕರ್ ರೇಸ್ನಲ್ಲಿ ಸ್ಥಾನ ಪಡೆದುಕೊಂಡಿದೆ.
ಭಾರತದ ಕೆಲ ಡಾಕ್ಯುಮೆಂಟರಿ, ಶಾರ್ಟ್ ಫಿಲ್ಮ್‌ಗಳಿಗೆ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಫೀಚರ್ ಸಿನಿಮಾಗಳ ವಿಭಾಗದಲ್ಲಿ ಪ್ರಶಸ್ತಿಗಳನ್ನು ಪಡೆಯಲು ಫಿಲ್ಮ್ ಮೇಕರ್ಸ್ ಪ್ರಯತ್ನಿಸುತ್ತಲೇ ಇದ್ದಾರೆ. ಮುಂದಿನ ದಿನಗಳಲ್ಲಿ ಅದು ಸಾಧ್ಯವಾಗಬಹುದು. ಇತ್ತೀಚೆಗೆ ಭಾರತದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡ್ತಿವೆ.
'ತನ್ವಿ ದಿ ಗ್ರೇಟ್'
ಇನ್ನೊಂದು ಸಿನಿಮಾ 'ತನ್ವಿ ದಿ ಗ್ರೇಟ್' ಕೂಡ ರೇಸ್‌ನಲ್ಲಿದೆ. ನಟ ಅನುಪಮ್ ಖೇರ್ ನಿರ್ದೇಶಿಸಿದ 'ತನ್ವಿ ದಿ ಗ್ರೇಟ್' ನಲ್ಲಿ ಶುಭಾಂಗಿ ತನ್ವಿ ರೈನಾ ಅವರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಆಟಿಸಂ ಮತ್ತು ಭಾರತೀಯ ಸೇನೆಯ ವಿಷಯಗಳನ್ನು ಪರಿಶೋಧಿಸುತ್ತದೆ.
ಇದನ್ನೂ ಓದಿ: 'ಕಾಂತಾರ' ಬಳಿಕ 'ಕೊರಗಜ್ಜ' ಚಿತ್ರದಲ್ಲೂ ಗುಳಿಗ ಆರ್ಭಟ; ಮೊದಲ ಹಾಡು ರಿಲೀಸ್
ಶುಭಾಂಗಿ ತನ್ನ ದಿವಂಗತ ತಂದೆಯ ಸೇನಾ ಸೇವೆಯಿಂದ ಪ್ರೇರಿತಳಾದ ಚಿಕ್ಕ ಹುಡುಗಿಯ ಪಾತ್ರವನ್ನು ನಿರ್ವಹಿಸುತ್ತಾಳೆ.ಈ ಚಿತ್ರದಲ್ಲಿ ಅನುಪಮ್ ಖೇರ್, ಜಾಕಿ ಶ್ರಾಫ್, ಬೋಮನ್ ಇರಾನಿ ಮತ್ತು ಕರಣ್ ಟ್ಯಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.