ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kantara: Chapter 1 trailer : ಕಾಂತಾರ: ಚಾಪ್ಟರ್‌ 1' ಸಿನಿಮಾದ ಟ್ರೈಲರ್ ರಿಲೀಸ್‌ಗೆ ಮೂಹೂರ್ತ ಫಿಕ್ಸ್‌; ಯಾವಾಗ ಗೊತ್ತಾ?

ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಅಕ್ಟೋಬರ್‌ 2 ರಂದು ಬಿಡುಗಡೆಯಾಗಲಿರುವ ಸಿನಿಮಾದ ಟ್ರೈಲರ್ ಇನ್ನೂ ರಿಲೀಸ್‌ ಆಗಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಟ್ರೈಲರ್ ಬಿಡುಗಡೆಯಾಗಲಿದೆ.

ಕಾಂತಾರ: ಚಾಪ್ಟರ್‌ 1' ಸಿನಿಮಾದ ಟ್ರೈಲರ್  ರಿಲೀಸ್‌ಗೆ ಮೂಹೂರ್ತ ಫಿಕ್ಸ್‌

-

Vishakha Bhat Vishakha Bhat Sep 19, 2025 2:03 PM

ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ: ಚಾಪ್ಟರ್ 1 (Kantara: Chapter 1 trailer) ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಅಕ್ಟೋಬರ್‌ 2 ರಂದು ಬಿಡುಗಡೆಯಾಗಲಿರುವ ಸಿನಿಮಾದ ಟ್ರೈಲರ್ ಇನ್ನೂ ರಿಲೀಸ್‌ ಆಗಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಸಿನಿಮಾದ ಬಗ್ಗೆ ಯಾವುದೇ ಸುದ್ದಿಗೋಷ್ಠಿ, ಪ್ರೀ ರಿಲೀಸ್ ಕಾರ್ಯಕ್ರಮದ ಘೋಷಣೆ ಆಗಿಲ್ಲ. ಹಾಡುಗಳು ಬಿಡುಗಡೆ ಆಗಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದವು. ಇದೀಗ ಸಿನಿಪ್ರಿಯರಿಗೆ ಸಿಹಿ ಸುದ್ದಿಯನ್ನು ಕಾಂತಾರ ಟೀಂ ನೀಡಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಪ್ರಕಟಿಸಿದೆ.

ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಇದೇ ತಿಂಗಳು (ಸೆಪ್ಟೆಂಬರ್‌) 22 ನೇ ತಾರೀಖಿನಂದು, ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಹೊಂಬಾಳೆಯ ಅಧಿಕೃತ ಯೂಟ್ಯೂಬ್ ಚಾನೆಲ್​​​ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಟ್ರೈಲರ್ ವೀಕ್ಷಿಸಬಹುದು. ಸಿನಿಮಾ ಕುರಿತು ರಿಷಬ್‌ ಶೆಟ್ಟಿ ಅಥವಾ ಚಿತ್ರ ತಂಡ ಯಾವುದೇ ಮಾಹಿತಿಯನ್ನು ಅಷ್ಟಾಗಿ ಹಂಚಿಕೊಳ್ಳುತ್ತಿಲ್ಲ. ಈ ವರೆಗೆ ಎರಡು ಪೋಸ್ಟರ್ ಹಾಗೂ ಒಂದು ಮೇಕಿಂಗ್ ವಿಡಿಯೋ ಅನ್ನಷ್ಟೆ ರಿಷಬ್ ಶೆಟ್ಟಿ ಬಿಡುಗಡೆ ಮಾಡಿದ್ದರು.



ಸಿನಿಮಾದ ಮೇಕಿಂಗ್ ವಿಡಿಯೋ ಒಂದನ್ನು ಕೆಲ ವಾರಗಳ ಹಿಂದಷ್ಟೆ ಚಿತ್ರತಂಡ ಬಿಡುಗಡೆ ಮಾಡಿತ್ತು. ಸಿನಿಮಾದ ಸೆಟ್, ಮೇಕಿಂಗ್, ಕಲಾವಿದರು, ತಂತ್ರಜ್ಞರ ಶ್ರಮ ಹಾಗೂ ಸಂಪೂರ್ಣ ಸೆಟ್‌ ವಿಡಿಯೋವನ್ನು ತೋರಿಸಲಾಗಿತ್ತು. ಇದೀಗ ಟ್ರೈಲರ್‌ ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆಯನ್ನು ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರವನ್ನು ಭಾರತ ಮತ್ತು ವಿದೇಶಗಳಲ್ಲಿ ಬಹು ಭಾಷೆಗಳಲ್ಲಿ 2,500ಕ್ಕೂ ಹೆಚ್ಚು ಪರದೆಗಳಲ್ಲಿ ಪೇಯ್ಡ್ ಪ್ರೀಮಿಯರ್ ಮಾಡಲು ಯೋಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Kantara: Chapter 1: 'ಕಾಂತಾರ: ಚಾಪ್ಟರ್‌ 1' ಹೊಸ ಪೋಸ್ಟರ್‌ ಔಟ್‌; ಐಮ್ಯಾಕ್ಸ್‌ನಲ್ಲಿ ರಿಲೀಸ್‌ ಆಗಲಿದೆ ರಿಷಬ್‌ ಶೆಟ್ಟಿ ಚಿತ್ರ

ಇದು ಕನ್ನಡ ಚಿತ್ರವೊಂದಕ್ಕೆ ಇದುವರೆಗಿನ ಅತಿದೊಡ್ಡ ಪ್ರೀಮಿಯರ್‌ಗಳಲ್ಲಿ ಒಂದಾಗಿದ್ದು, ಕನ್ನಡ, ಮಲಯಾಳಂ, ತಮಿಳು, ತೆಲುಗು, ಹಿಂದಿ, ಬಂಗಾಳಿ ಮತ್ತು ಇಂಗ್ಲಿಷ್ ಸೇರಿದಂತೆ 7ಕ್ಕೂ ಹೆಚ್ಚು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ. ಈ ಕ್ರಮವು ಆರಂಭಿಕ ಸಂಚಲನವನ್ನು ಸೃಷ್ಟಿಸುವ ನಿರೀಕ್ಷೆಯಿದೆ.

ರಿಷಬ್ ಶೆಟ್ಟಿ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವು, ಜಾಗತಿಕ ಮಟ್ಟದಲ್ಲಿ ಯಶಸ್ಸು ಕಂಡ 'ಕಾಂತಾರ' ಚಿತ್ರದ ಪ್ರೀಕ್ವೆಲ್ ಆಗಿದೆ.ಕರಾವಳಿ ಕರ್ನಾಟಕದ ಅತೀಂದ್ರಿಯ ಲೋಕವನ್ನು ಅನಾವರಣಗೊಳಿಸುವ ಈ ಚಿತ್ರವು, ಪುರಾಣ, ಭಕ್ತಿ ಮತ್ತು ಅದೃಷ್ಟದ ನಡುವಿನ ಪೌರಾಣಿಕ ಕಥೆಯನ್ನು ಹೇಳುತ್ತದೆ.

ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಅದ್ಭುತ ಸಂಗೀತ, ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರ ದೃಶ್ಯ ವೈಭವ ಮತ್ತು ವಸ್ತ್ರ ವಿನ್ಯಾಸಕಿ ಪ್ರಗತಿ ಶೆಟ್ಟಿ ಅವರ ವಿಶಿಷ್ಟ ಕಲಾಕೃತಿಗಳು ಚಿತ್ರಕ್ಕೆ ಮೆರುಗು ನೀಡಲಿವೆ.

ರಿಷಬ್ ಶೆಟ್ಟಿ, ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 'ಕಾಂತಾರ ಅಧ್ಯಾಯ 1' ಚಿತ್ರವು ಕಲೆ, ಭಕ್ತಿ ಮತ್ತು ಶಕ್ತಿಯನ್ನು ಒಳಗೊಂಡಿದ್ದು, ಮತ್ತೊಮ್ಮೆ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ.