ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʻಕೆಡಿʼ ಸಿನಿಮಾ ಹಾಡಿನ ವಿವಾದ; ʻಜೋಗಿʼ ಪ್ರೇಮ್​​- ನೋರಾ ಫತೇಹಿಗೆ ನೊಟೀಸ್ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗ

'ಕೆಡಿ' ಚಿತ್ರದ "ಸರ್ಕೆ ಚುನರ್ ತೇರಿ ಸರ್ಕೆ" ಹಿಂದಿ ವರ್ಷನ್‌ ಹಾಡಿನಲ್ಲಿ ಅಶ್ಲೀಲತೆ ಮತ್ತು ಪೋಕ್ಸೋ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬ ದೂರಿನಡಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ನಿರ್ದೇಶಕ ಪ್ರೇಮ್, ನಟಿ ನೋರಾ ಫತೇಹಿ, ಸಂಜಯ್ ದತ್ ಹಾಗೂ ಇನ್ನಿತರರಿಗೆ ಮಾ. 24ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

'ಕೆಡಿ' ಚಿತ್ರತಂಡಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಶಾಕ್; ಪ್ರೇಮ್‌ಗೆ ನೋಟಿಸ್!

-

Avinash GR
Avinash GR Mar 19, 2026 6:27 PM

ʻಕೆಡಿʼ ಚಿತ್ರದ ʻಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆʼ ಹಾಡಿನ ವಿವಾದ ಸದ್ಯಕ್ಕಂತೂ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ʻಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆʼ ಹಾಡಿನ ಎಲ್ಲಾ ವರ್ಷನ್‌ಗಳನ್ನು ಯೂಟ್ಯೂಬ್‌ನಿಂದ ತೆಗೆದು ಹಾಕಲಾಗಿದೆ. ಅದರಲ್ಲೂ ಹಿಂದಿ ವರ್ಷನ್‌ನ ʻಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆʼ ಹಾಡಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಾಡಿನ ವಿವಾದ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಬಗ್ಗೆ ಟ್ವೀಟ್‌ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗವು, "1990ರ ಕಾಯ್ದೆ ಅಡಿಯಲ್ಲಿ ತನಗಿರುವ ಅಧಿಕಾರವನ್ನು ಬಳಸಿ, ರಾಷ್ಟ್ರೀಯ ಮಹಿಳಾ ಆಯೋಗವು "ಸರ್ಕೆ ಚುನರ್ ತೇರಿ ಸರ್ಕೆ" (Sarke Chunar Teri Sarke) ಹಾಡಿನಲ್ಲಿ ಅಶ್ಲೀಲತೆ ಮತ್ತು ಅಸಭ್ಯತೆ ಇದೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಸ್ವಯಂ ಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದೆ"

KD The Devil: ಕೆಡಿ ಸಿನಿಮಾದ 'ಸರ್ಸೆ ನಿನ್ನ ಸೆರಗ ಸರ್ಸೆ' ಸಾಂಗ್‌​​​ ರಿಲೀಸ್! ನೋರಾ ಫತೇಹಿ ಭರ್ಜರಿ​​ ಡ್ಯಾನ್ಸ್

"ಈ ಹಾಡಿನ ವಿಷಯವು ಮೇಲ್ನೋಟಕ್ಕೆ ಲೈಂಗಿಕ ಪ್ರಚೋದಕವಾಗಿ, ಆಕ್ಷೇಪಾರ್ಹವಾಗಿ ಮತ್ತು ಭಾರತೀಯ ನ್ಯಾಯ ಸಂಹಿತೆ, ಐಟಿ ಕಾಯ್ದೆ ಹಾಗೂ ಪೋಕ್ಸೋ (POCSO) ಕಾಯ್ದೆಯ ನಿಬಂಧನೆಗಳ ಉಲ್ಲಂಘನೆಯಂತೆ ಕಂಡುಬಂದ ಹಿನ್ನೆಲೆಯಲ್ಲಿ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ"

ಮಾ.24 ರಂದು ಕಡ್ಡಾಯವಾಗಿ ಹಾಜರಾಗಬೇಕು

"ಈ ಸಂಬಂಧ ನಟಿ ನೋರಾ ಫತೇಹಿ, ರಕೀಬ್ ಆಲಂ, ನಟ ಸಂಜಯ್ ದತ್, ನಿರ್ಮಾಪಕ, ನಿರ್ದೇಶಕರು ಅವರಿಗೆ ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಸಂಬಂಧಿತ ದಾಖಲೆಗಳೊಂದಿಗೆ ಮಾ.24 ರಂದು ಮಧ್ಯಾಹ್ನ 12.30ಕ್ಕೆ ಆಯೋಗದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಹಾಜರಾಗಲು ವಿಫಲರಾದಲ್ಲಿ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ" ಎಂದು ರಾಷ್ಟ್ರೀಯ ಮಹಿಳಾ ಆಯೋಗವು ಟ್ವೀಟ್‌ನಲ್ಲಿ ತಿಳಿಸಿದೆ.

ʻಜೋಗಿʼ ಪ್ರೇಮ್‌ ವಿರುದ್ಧ ತಿರುಗಿಬಿದ್ದ ನೋರಾ ಫತೇಹಿ; ʻನನಗೆ ಹೇಳದೆಯೇ ಇದನ್ನೆಲ್ಲಾ ಮಾಡಿದ್ರುʼ ಎಂದ ಬಾಲಿವುಡ್‌ ನಟಿ

ಕ್ಷಮೆ ಕೇಳಿರುವ ಪ್ರೇಮ್‌

ಇನ್ನು, ಈ ಹಾಡಿನ ವಿವಾದದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಪ್ರೇಮ್‌, "ಹಾಡು ಕೇಳಿದ ಮೇಲೆ ಕೆಲವರಿಗೆ ಹರ್ಟ್ ಆಗಿರಬಹುದು, ಪ್ರೇಮ್ ಹೀಗೆ ಮಾಡಿದ್ದಾರಾ? ಪ್ರೇಮ್ ಈ ಥರಾನ? ಅನಿಸಿರಬಹುದು. ಸಾಹಿತಿ ಆದ ಮೇಲೆ ಎಲ್ಲ ರೀತಿಯಲ್ಲಿಯೂ ಬರೆಯಬೇಕಾಗುತ್ತದೆ. ಆದರೆ ನಾನು ಅಶ್ಲೀಲ ಅರ್ಥದಲ್ಲಿ ಬರೆದಿಲ್ಲ. ನನ್ನಿಂದ ಬೇಸರ ಆಗಿದ್ದರೆ ಕ್ಷಮೆ ಕೇಳುವೆ. ಹಾಡನ್ನು ರೀರೈಟ್ ಮಾಡುವೆ, ಬೇರೆ ರೀತಿ ಬರೆದು ಮತ್ತೆ ಅಪ್​ಲೋಡ್ ಮಾಡುತ್ತೀವಿ, ನಿಮಗೆ ಹರ್ಟ್ ಮಾಡಲು ಇಷ್ಟವಿಲ್ಲ" ಎಂದು ಹೇಳಿದ್ದಾರೆ.