ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kichcha Sudeep Birthday: ಕಿಚ್ಚ ಸುದೀಪ್‌ ಜನ್ಮದಿನ; ಇರಲಿದೆ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್!

Kichcha Sudeep Birthday:ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep Birthday) ಇಂದು ತಮ್ಮ 53ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪ್ರಪಂಚಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ. 4 ಹೊಸ ಸಿನಿಮಾಗಳ ಭರ್ಜರಿ ಅನೌನ್ಸ್‌ಮೆಂಟ್ ನೀಡಿ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ (Surprise) ನೀಡಲಿದ್ದಾರೆ ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್‌

ಸುದೀಪ್ ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿಯೆಂದು ಖ್ಯಾತರಾಗಿರುವ ಇವರು ತಮ್ಮ ಅಮೋಘ ಅಭಿನಯದಿಂದ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರಿನ ಜೊತೆಗೆ ಅಭಿಮಾನಿ ಬಳಗವನ್ನೂ ಸಂಪಾದಿಸಿದ್ದಾರೆ. ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಸಕ್ಸಸ್ ಕಂಡಿರುವ ಸ್ಯಾಂಡಲ್​ವುಡ್​ ಸೂಪರ್​​ ಸ್ಟಾರ್​. ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep Birthday) ಇಂದು ತಮ್ಮ 53ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪ್ರಪಂಚಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ. 4 ಹೊಸ ಸಿನಿಮಾಗಳ ಭರ್ಜರಿ ಅನೌನ್ಸ್‌ಮೆಂಟ್ ನೀಡಿ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ (Surprise) ನೀಡಲಿದ್ದಾರೆ ಎನ್ನಲಾಗುತ್ತಿದೆ.

ಅಭಿಮಾನಿಗಳಲ್ಲಿ ಮನವಿ

ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದರು. . ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಸೋಷಿಯಲ್​ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದರು. . 2ನೇ ಸೆಪ್ಟೆಂಬರ್ ಎಂಬುದು ಒಂದು ದಿನಾಂಕ ಅಷ್ಟೇ. ಅದನ್ನು ಸಂಭ್ರಮವನ್ನಾಗಿ 30 ವರ್ಷಗಳಿಂದ ಪರಿವರ್ತಿಸಿದ ಅಪಾರ ಪ್ರೀತಿ ನಿಮ್ಮದು.

ಇದನ್ನೂ ಓದಿ: Mysaa Movie: ಪೋಸ್ಟರ್‌ನಲ್ಲಿ ರಶ್ಮಿಕಾ ಮಂದಣ್ಣ ಅಬ್ಬರ; ಮೈಸಾ ರಿಲೀಸ್‌ ಡೇಟ್‌ ಅನೌನ್ಸ್‌!

ನಿಮ್ಮ ಅಭಿಮಾನ, ಹುಚ್ಚು ಪ್ರೀತಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ಕಳೆದ 30 ವರ್ಷಗಳಲ್ಲಿ ನಿಮ್ಮ ಚಪ್ಪಾಳೆ, ಶಿಳ್ಳೆಗಳಲ್ಲಿ ಇನ್ನು ಹೆಚ್ಚು ಹೆಚ್ಚು ಪ್ರೋತ್ಸಾಹ ಪ್ರೀತಿ ಕಂಡುಕೊಂಡಿದ್ದೇನೆ. ಪ್ರತೀ ಸಿನಿಮಾ ಇರಲಿ, ಬಿಗ್ ಬಾಸ್​ ಇರಲಿ ಜೊತೆಗೆ ಯಾವುದೇ ಕಾರ್ಯಕ್ರಮಕ್ಕೆ ಮುಂದಾದಾಗ ನೀವು ತೋರಿಸಿದ ಪ್ರೀತಿ ಅಪರಿಮಿತ. ಅದೇ ನನಗೆ ಶ್ರೀರಕ್ಷೆ ಅಂದು ಮನೆಯ ಬಳಿಯೂ ಯಾರಿಗೂ ಲಭ್ಯವಾಗುತ್ತಿಲ್ಲ.

ಸತ್ಕಾರಗಳು ಗದ್ದಲವಾಗಬಾರದು ಎಂಬುದನ್ನು ನಿಮ್ಮಲ್ಲಿ ಪದೇ ಪದೇ ಅರಿಕೆ ಮಾಡಿಕೊಂಡಿದ್ದೇನೆ. ನಿಮ್ಮ ಉಡುಗೊರೆಗಳು ಸಮಾಜಕ್ಕೆ ಸದ್ವಿನಿಯೋಗವಾಗಲಿ. ನಿಮ್ಮ ಪ್ರೀತಿ, ಹಾರೈಕೆಗಳಿಗಿಂತ ಮತ್ತೊಂದು ಶ್ರೀರಕ್ಷೆ ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ. ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ. ನೋಡಿ, ನನ್ನದೇ ಸಿನಿಮಾ ಸಂಭಾಷಣೆ ಹೀಗೆ ಈ ಪತ್ರದಲ್ಲಿ ನನ್ನ ಬಳಕೆಗೆ ಬರುತ್ತದೆ ಎಂದು ನಾನೂ ಅಂದುಕೊಂಡಿರಲಿಲ್ಲ. ಯಾವುದೇ ವೇದಿಕೆ, ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಕನ್ನಡಿಗರನ್ನು ರಂಜಿಸಲು, ಕನ್ನಡವನ್ನು ಕುಣಿಸಲು... ಕನ್ನಡ ನನ್ನ ಸತ್ಯ. ಕನ್ನಡದಿಂದ ನಾನು ನಿತ್ಯ''. ಎಂದಿದ್ದರು.

ಸಿನಿಮಾ ಅಪ್‌ಡೇಟ್‌

ಸುದೀಪ್​​ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ 'ಬಿಲ್ಲ ರಂಗ ಬಾಷಾ'. ಅನೂಪ್​ ಭಂಡಾರಿ ನಿರ್ದೇಶನದ ಸಿನಿಮಾ ಶೂಟಿಂಗ್​ ಸಾಗಿದೆ. ಬಿಆರ್​ಬಿ ಕಥೆ 2209 AD ಜಗತ್ತಿನಲ್ಲಿ ನಡೆಯುತ್ತದೆ. ಬಿಗ್ ಬಜೆಟ್​ ಪ್ರಾಜೆಕ್ಟ್​ಗೆ ಕೆ.ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಬಂಡವಾಳ ಹೂಡಿದ್ದಾರೆ. ಶೀಘ್ರದಲ್ಲೇ ಬಿಗ್ ಬಾಸ್​ ನಿರೂಪಕನಾಗಿಯೂ ಮರಳಲಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Mahesh Babu: ‘ಟಾಕ್ಸಿಕ್’ ಸಿನಿಮಾಗೆ 0.5 ರೇಟಿಂಗ್ ನೀಡಿದ ಮಹೇಶ್ ಬಾಬು ಪುತ್ರ!

ಜೊತೆಗೆ ‘ಸ್ಕೂಲ್ ಬಸ್’ ಚಿತ್ರತಂಡದಿಂದ ಕಿಚ್ಚ ಸುದೀಪ್‌ಗೆ ಗೌರವ ಸಲ್ಲಿಸಲು ಸ್ಪೆಷಲ್ ವಿಡಿಯೋ ಒಂದನ್ನು ರಿಲೀಸ್ ಮಾಡಲಾಗುತ್ತಿದೆ. ಇದರ ಜೊತೆಗೆ ಲೆನಿನ್ ಕ್ರಿಯೇಷನ್ಸ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಬಗ್ಗೆಯೂ ಮಾಹಿತಿ ಹೊರಬರಲಿದೆ.

Yashaswi Devadiga

View all posts by this author