ʻಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ (Sudeep Birthday) ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' (Billa Ranga Baasha ) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್‌ಬಸ್ಟರ್ 'ವಿಕ್ರಾಂತ್ ರೋಣ' ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಈ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ.
ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಅತ್ಯಂತ ರೋಮಾಂಚಕವಾಗಿದ್ದು, ಚಿತ್ರವು ವಿಶ್ವದರ್ಜೆಯ ಮೇಕಿಂಗ್ ಒಳಗೊಂಡಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಒದಗಿಸಿದೆ.
ಈ ಚಿತ್ರಕ್ಕಾಗಿ ಬೆಂಗಳೂರಿನಲ್ಲಿ ಬೃಹತ್ ಹಾಗೂ ಅದ್ಧೂರಿ ಸೆಟ್ ನಿರ್ಮಿಸಲಾಗಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಇದನ್ನೂ ಓದಿ: Mysaa Movie: ಪೋಸ್ಟರ್‌ನಲ್ಲಿ ರಶ್ಮಿಕಾ ಮಂದಣ್ಣ ಅಬ್ಬರ; ಮೈಸಾ ರಿಲೀಸ್ ಡೇಟ್ ಅನೌನ್ಸ್!
ಜಂಟಿಯಾಗಿ ನಿರ್ಮಾಣ
ತೆಲುಗಿನ ಪ್ಯಾನ್-ಇಂಡಿಯಾ ಹಿಟ್ ಸಿನಿಮಾ 'ಹನುಮಾನ್' ಖ್ಯಾತಿಯ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಆಗಲಿದ್ದು, 2027ರ ಜುಲೈ-ಸೆಪ್ಟೆಂಬರ್ ನಡುವೆ ಟ್ರೇಲರ್ & ಹಾಡುಗಳು ಅನಾವರಣಗೊಳ್ಳಲಿವೆ. 2027ರ ವರ್ಷಾಂತ್ಯದಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ 'ಬಿಲ್ಲ ರಂಗ ಬಾಷಾ' ತೆರೆಗೆ ಬರಲಿದೆ.
ಪೋಸ್ಟರ್‌ನಲ್ಲಿ ಕಿಚ್ಚ ಸುದೀಪ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಅತ್ಯಂತ ರಗಡ್ ಹಾಗೂ ಫ್ಯೂಚರಿಸ್ಟಿಕ್ ಲುಕ್‌ನಲ್ಲಿ ಮಿಂಚಿದ್ದಾರೆ. ಹಿಮದಿಂದ ಆವೃತವಾದ ಹಿನ್ನೆಲೆಯಲ್ಲಿ ಬೈಕ್ ಚಲಾಯಿಸುತ್ತಾ, ಕಣ್ಣಿಗೆ ಗಾಗಲ್ಸ್ ಮತ್ತು ವಿಶಿಷ್ಟ ಶೈಲಿಯ ಕೋಟ್ ಧರಿಸಿರುವ ಅವರ ಮಾಸ್ ಲುಕ್ ಫ್ಯಾನ್ಸ್‌ಗೆ ಖುಷಿ ನೀಡಿದೆ.
ಇದನ್ನೂ ಓದಿ: Kichcha Sudeep Birthday: ಕಿಚ್ಚ ಸುದೀಪ್ ಜನ್ಮದಿನ; ಇರಲಿದೆ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್!
ಬಿಲ್ಲ ರಂಗ ಭಾಷಾ ಸಿನಿಮಾ ಚಿತ್ರೀಕರಣದ ಜೊತೆಯಲ್ಲಿ ಸುದೀಪ್, ಈ ಬಾರಿಯ ಬಿಗ್‌ಬಾಸ್ ಕನ್ನಡ ಸೀಸನ್ 13 ರಿಯಾಲಿಟಿ ಶೋ ನಿರೂಪಣೆ ಮಾಡಲಿದ್ದಾರೆ. ಇದೇ ಸೆಪ್ಟೆಂಬರ್ 6ರಿಂದ ಬಿಗ್‌ಬಾಸ್ ಶೋ ಆರಂಭಗೊಳ್ಳಲಿದೆ.
ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಮಧ್ಯರಾತ್ರಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಮಹತ್ವದ ಪ್ರಾಜೆಕ್ಟ್‌ನಲ್ಲಿ ಅವರು ಇರುವುದನ್ನು ಅಧಿಕೃತವಾಗಿ ಪ್ರಕಟಿಸಿದೆ.