Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ; ಕೊಡವ ನ್ಯಾಷನಲ್ ಕೌನ್ಸಿಲ್ ಆಗ್ರಹ
ಪವಿತ್ರ ರಂಜಾನ್ ಹಬ್ಬದ ಬಹುಭಾಷಾ ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಮತ್ತು ಕನ್ನಡ ಹೋರಾಟಗಾರ ಟಿಎ ನಾರಾಯಣ ಗೌಡ ಟೀಕಿಸಿದ ಬೆನ್ನಲ್ಲೇ ನಟಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಕೊಡವ ಸಮಾಜ ಆಗ್ರಹಿಸಿದೆ.

ರಶ್ಮಿಕಾ ಮಂದಣ್ಣ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ(Rashmika Mandanna)ನಂಥವರಿಗೆ ಬುದ್ಧಿ ಕಲಿಸಬೇಕು ಎಂದು ಹೇಳಿಕೆ ನೀಡಿದ ಶಾಸಕ ರವಿ ಗಣಿಗ ಆವರ ವಿರುಧ್ಧ ಕೊಡವ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ನಟಿ ರಶ್ಮಿಕಾ ಮಂದಣ್ಣ ಬಗ್ಗೆ ಕಟುಟೀಕೆ ಮಾಡಿದರುವುದನ್ನು ಖಂಡಿಸಿದೆ. ಅಷ್ಟೇ ಅಲ್ಲದೇ ಈ ಘಟನೆ ಕುರಿತು ಪ್ರೆಸ್ ಮೀಟ್ ನೆಡೆಸಿರುವ ಕೊಡವ ಮಂಡಲಿ ರಶ್ಮಿಕಾಗೆ ಸೂಕ್ತ ಭದ್ರತೆ ಕೊಡಿ" ಎಂದು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ, "ವಿನಾಕಾರಣ ಟೀಕೆಗೆ ಗುರಿಯಾಗುತ್ತಿರುವ ಕೊಡಗು ಮೂಲದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸರಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ಮಂದಣ್ಣ ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಅನಾವರಣದ ಮೂಲಕ ಭಾರತೀಯ ಚಲನಚಿತ್ರೋದ್ಯಮದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಇವರ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನು ಅರಿಯದ ಶಾಸಕರು ವಿನಾಕಾರಣ ಟೀಕೆ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿರುವುದು ಘೋರ ಸ್ವರೂಪ ಮತ್ತು ಬೆದರಿಕೆಗೆ ಸಮವಾಗಿದೆ" ಎಂದು ಹೇಳಿದ್ದಾರೆ.
ಘಟನೆಗೆ ಸಂಂಧಿಸಿದಂತೆ ಅಮಿತ್ ಶಾ ಹಾಗೂ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕೊಡುವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ, ರಶ್ಮಿಕಾ ಅವರನ್ನು "ಶಾಸಕರೊಬ್ಬರು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಕೊಡವರು "ಗೂಂಡಾಗಿರಿ" ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.
ಕೊಡವದ ಸ್ಥಳೀಯ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಅಮಿತಾಬ್ ಬಚ್ಚನ್ ಮತ್ತು ಸಲ್ಮಾನ್ ಖಾನ್ ಅವರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ರಶ್ಮಿಕಾ ಅವರು ಸ್ವಂತ ಆಯ್ಕೆ ಮಾಡುವ ಸ್ವಾತಂತ್ರ್ಯ ಹೊಂದಿದ್ದು, ಅದನ್ನು ಗೌರವಿಸಬೇಕು ಎಂದಿದ್ದಾರೆ.
ಇನ್ನು ನನಗೆ ಕನ್ನಡ ಗೊತ್ತಿಲ್ಲ, ನಾನು ಹೈದರಾಬಾದ್‌ನವಳು' ಎಂದು ಹೇಳುವ ಮೂಲಕ ವಿವಾದದ ಕಿಚ್ಚನ್ನು ಹತ್ತಿಸಿದ ನ್ಯಾಷನಲ್ ಕ್ರಶ್ ಇಂದು ನಾನಾ ಟೀಕೆ ಪ್ರಹಾರಗಳಿಗೆ ಕಾರಣ ಆಗಿದ್ದು, ಅದು ರಾಜಕೀಯವಾಗಿಯೂ ತಿರುಗಿಕೊಂಡಿದೆ. ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಮತ್ತೆ ಕೊಡವ ಸಮಾಜ ಮಧ್ಯೆ ಕೊಲ್ಡ್ ವಾರ್ ನಡೆಯುತ್ತಿದೆ.
ಈ ಸುದ್ದಿಯನ್ನು ಓದಿ: Rashmika Mandanna: ವಿವಾದದ ಮಧ್ಯೆ ರಶ್ಮಿಕಾ ಫ್ಯಾನ್ಸ್‌ಗೆ ಗುಡ್‌ನ್ಯೂಸ್; ʼಸಿಕಂದರ್ʼ ಚಿತ್ರದ ಮೊದಲ ಹಾಡಿನ ರಿಲೀಸ್ ಡೇಟ್ ಅನೌನ್ಸ್
ಇನ್ನು ನಟ್ಟು ಬೋಲ್ಟ್ ಟೈಟ್ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದ ರವಿ ಅವರು, ನಟಿ ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿ ಚಿತ್ರದಿಂದ ಬೆಳೆದವರು. ಕಳೆದ ವರ್ಷ ಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ದೆವು. ನಾನು ಹೈದ್ರಾಬಾದ್ನಲ್ಲಿ ಇರೋದು. ನನಗೆ ಟೈಂ ಇಲ್ಲ ಅಂತ ಹೇಳಿದ್ರು. ಕನ್ನಡದಿಂದ ಬೆಳೆದ ಇವರು ಹತ್ತಾರು ಬಾರಿ ಕರೆದರೂ ಇಷ್ಟು ಉದ್ಧಟತನದಿಂದ ಮಾತನಾಡುತ್ತಾರೆ ಅಂದರೆ ಇಂತವರಿಗೆ ನಾವು ಬುದ್ಧಿ ಕಲಿಸಬೇಕಲ್ವಾ ಎಂದು ಖಾರವಾಗಿ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಿನಿಮಾ ನಟ-ನಟಿಯರು ಗೈರಾಗಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ನಟ್ಟು ಬೋಲ್ಟು ಟೈಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.