ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

7 ಬೃಹತ್‌ ಸೆಟ್‌ಗಳಲ್ಲಿ ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼಗೆ ಶೂಟಿಂಗ್‌; ಮೇಘನಾ ರಾಜ್‌ - ಕೋಮಲ್‌ ನಟನೆಯ ಈ ಚಿತ್ರಕ್ಕಿದೆ ಮತ್ತೊಂದು ಟೈಟಲ್!‌

Sangeetha Bar and Restaurant: ಕೋಮಲ್‌, ಮೇಘನಾ ರಾಜ್‌ ನಟನೆಯ ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈ ಸಿನಿಮಾಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೋಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡರೆ, ಮೇಘನಾ ರಾಜ್ ಮಹಾರಾಣಿಯ ಪಾತ್ರದಲ್ಲಿ ಮಿಂಚಿದ್ದಾರೆ.

ನಟ ಕೋಮಲ್‌ ಕುಮಾರ್‌, ಮೇಘನಾ ರಾಜ್‌, ʻಬಿಗ್‌ ಬಾಸ್‌ʼ ಅನುಷಾ ರೈ ನಟಿಸಿರುವ ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರಕ್ಕೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಆಕ್ಷನ್‌-ಕಟ್‌ ಹೇಳುತ್ತಿದ್ದು, ವಿಕಾಸ್‌ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ ʻಸಂಗೀತಾ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಶೂಟಿಂಗ್‌ ಮಾಡಲಾಗಿದ್ದು, ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ.

ಏಳು ಬೃಹತ್‌ ಸೆಟ್‌ ನಿರ್ಮಾಣ

ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಸಿನಿಮಾ ಶೂಟಿಂಗ್‌ಗಾಗಿಯೇ ಕುಂದಾಪುರದ ಅಂಪಾರಿನ ವಾಲ್ತೂರು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ವಿಶಾಲವಾದ ಜಾಗದಲ್ಲಿ 7 ವಿಭಿನ್ನ ವಿನ್ಯಾಸದ ಬೃಹತ್‌ ಸೆಟ್‌ಗಳನ್ನು ನಿರ್ಮಿಸಿ, ಅದರಲ್ಲಿಯೇ ಶೇ.90ರಷ್ಟು ಚಿತ್ರೀಕರಣವನ್ನು ನಡೆಸಿರುವುದು ವಿಶೇಷ.

Meghana Raj: ಜೈಲರ್ 2 ಸಿನಿಮಾದಲ್ಲಿ ನಟಿ ಮೇಘನಾ ರಾಜ್‌? ತಮಿಳು ಚಿತ್ರರಂಗಕ್ಕೆ ರೀ ಎಂಟ್ರಿ ಕೊಟ್ಟ ನಟಿ!

ಒಂದೇ ಸಿನಿಮಾಕ್ಕೆ ಎರಡು ಟೈಟಲ್

ಈ ಸಿನಿಮಾಕ್ಕೆ ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಎಂಬ ಟೈಟಲ್‌ ಇದ್ದರೂ, ಇದಕ್ಕೆ ಮತ್ತೊಂದು ಟೈಟಲ್‌ ಕೂಡ ಇದೆಯಂತೆ. "ಈ ಚಿತ್ರದ ಮೊದಲಾರ್ಧ ಬಾರ್‌ನಲ್ಲಿ ಶುರುವಾಗಿ, ಬಾರ್‌ ಸುತ್ತ ಸಾಗಿದರೆ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಹಾಗಾಗಿ ಚಿತ್ರದ ಮೊದಲಾರ್ಧ ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಆಗಿದ್ದರೆ, ದ್ವಿತೀಯಾರ್ಧ ʻದೇವರ ತಾಣʼ ಅಂತಿದೆ. ಈ ಎರಡೂ ಹೆಸರುಗಳು ಕೂಡ ನಮ್ಮ ಸಿನಿಮಾದ ಶೀರ್ಷಿಕೆಗಳೇ. ಆದರೆ ಸೆನ್ಸಾರ್‌ ನಿಯಮದಂತೆ, ಒಂದು ಸಿನಿಮಾಕ್ಕೆ ಒಂದೇ ಹೆಸರು ಇಡಬೇಕಾಗಿರುವುದರಿಂದ, ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಹೆಸರಿನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದೇವೆ" ಎನ್ನುತ್ತಾರೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ.

Meghana Raj: ಗೋವಾದಲ್ಲಿ ಮಗ ರಾಯನ್‌ ಜತೆ ಬರ್ತ್‌ಡೇ ಆಚರಿಸಿದ ಮೇಘನಾ ರಾಜ್‌: ಇಲ್ಲಿವೆ ಫೋಟೊಸ್

"ಒಬ್ಬ ನಿರ್ದೇಶಕನಾಗಿ ಈ ಸಿನಿಮಾ ನನಗೆ ಒಂದು ವಿಭಿನ್ನ ಅನುಭವ ನೀಡಿದೆ. ನಾನು ನಿರ್ದೇಶಕರಾಗಿ ಕಂಡ ಕನಸಿಗೆ ನಿರ್ಮಾಪಕ ವಿಕಾಸ್ ಶೆಟ್ಟಿ ಅವರು ಕೇವಲ ಹಣವಲ್ಲದೆ ತನು-ಮನ ಕೂಡ ನನ್ನ ಜೊತೆಗೆ ಧಾರೆ ಎರೆದಿದ್ದಾರೆ. ಇಲ್ಲಿಯವರೆಗೆ ನಾನು ಮಾಡಿದ ಸಿನಿಮಾಗಳು ಒಂದು ಥರದ ಅನುಭವ ನೀಡಿದರೆ, ಈ ಸಿನಿಮಾ ಅವೆಲ್ಲಕ್ಕಿಂತ ಮಿಗಿಲಾದ ಬೇರೊಂದು ಅನುಭವ ನೀಡಲಿದೆ. ಅದಕ್ಕೆ ಕಾರಣ ಈ ಸಿನಿಮಾದ ಕಥಾಹಂದರ, ಕಲಾವಿದರು ಮತ್ತು ತಂತ್ರಜ್ಞರು" ಎಂದು ಸಂದೇಶ್‌ ಶೆಟ್ಟಿ ಆಜ್ರಿ ಹೇಳಿದ್ದಾರೆ.

ʻಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಸಿನಿಮಾದಲ್ಲಿ ನಟ ಕೋಮಲ್‌ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರಂತೆ. ಒಂದು ಪಾತ್ರದಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ಕೋಮಲ್‌ ನಟಿಸಿದ್ದಾರೆ. ದೇವರ ತಾಣದಲ್ಲಿ ಮೇಘನಾ ರಾಜ್‌ ಅವರು ಮಹಾರಾಣಿಯಾಗಿ ಕಾಣಿಸಿಕೊಂಡರೆ, ಸಂಗೀತ ಬಾರ್‌ನಲ್ಲಿ ನಾಯಕಿಯಾಗಿ ಮಿಂಚಿದ್ದಾರಂತೆ.

ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮ್ಮಿನಾಡ್‌, ವಜ್ರಧೀರ್‌ ಜೈನ್‌, ಉತ್ಸವ್‌, ಕಾರ್ತಿಕ್‌ ರಾವ್‌, ರಾಘು ರಾಮನಕೊಪ್ಪ, ಸಿರಿಜಾ, ವರ್ಧನ್, ಕರಣ್‌ , ರಾಧಿಕಾ ರಾವ್, ದಿವ್ಯಶ್ರೀ, ಅಕ್ಷತಾ, ಅರಸು, ಮಹೇಶ್, ನಾಗರಾಜ್ , ಚಿತ್ರಕಲಾ, ಉಮೇಶ್‌ ಕಿನ್ನಾಳ್‌, ಮನೀಶ್‌ ಶೆಟ್ಟಿ, ರಾಧಾಕೃಷ್ಣ, ಮಹಾಬಲೇಶ್ವರ ಭಟ್ ಮುಂತಾದವರು ನಟಿಸಿದ್ದಾರೆ. ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಕೂಡ ಚಿತ್ರದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.