ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kothalavadi Movie: ಯಶ್ ತಾಯಿ ನಿರ್ಮಾಣದ ಮೊದಲ ಚಿತ್ರ 'ಕೊತ್ತಲವಾಡಿ' ರಿಲೀಸ್ ಡೇಟ್‌ ಅನೌನ್ಸ್‌

ಪೃಥ್ವಿ ಅಂಬಾರ್ ನಾಯಕನಾಗಿ ನಟಿಸುತ್ತಿರುವ, ರಾಕಿಂಗ್‌ ಸ್ಟಾರ್‌ ಯಶ್‌ ಅವರ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ʼಕೊತ್ತಲವಾಡಿʼಯ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಆ. 1ಕ್ಕೆ ʼಕೊತ್ತಲವಾಡಿʼ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ.

'ಕೊತ್ತಲವಾಡಿ' ಚಿತ್ರದ ರಿಲೀಸ್ ಡೇಟ್‌ ಅನೌನ್ಸ್‌

Ramesh B Ramesh B Jun 21, 2025 1:56 PM

ಬೆಂಗಳೂರು: ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ (Yash) ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ ಪ್ರೊಡಕ್ಷನ್ಸ್‌ (PA Productions) ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ʼಕೊತ್ತಲವಾಡಿʼ (Kothalavadi Movie) ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಈ ಕನ್ನಡ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಆ. 1ಕ್ಕೆ ಪುಷ್ಪಾ ನಿರ್ಮಿಸಿರುವ ಚೊಚ್ಚಲ ಚಿತ್ರ ʼಕೊತ್ತಲವಾಡಿʼ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬಾರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ.

ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ʼಕೊತ್ತಲವಾಡಿʼ ಟೀಸರ್‌ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಈ ಸುದ್ದಿಯನ್ನೂ ಓದಿ: Kothalavadi Teaser: ಯಶ್ ತಾಯಿ ನಿರ್ಮಾಣದ 'ಕೊತ್ತಲವಾಡಿ' ಟೀಸರ್ ರಿಲೀಸ್; ಪೃಥ್ವಿ ಅಂಬಾರ್‌ ಚಿತ್ರಕ್ಕೆ ʼಅಧ್ಯಕ್ಷʼ ಶರಣ್‌ ಸಾಥ್‌

ಸಿನಿಮಾದ ಹಾಡುಗಳಿಗೆ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದು, ಈಗಾಗಲೇ ನಿರೀಕ್ಷೆ ಮೂಡಿಸಿ ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ಎನಿಸಿಕೊಂಡಿದ್ದಾರೆ.

ಪೃಥ್ವಿ ಅಂಬಾರ್‌ ಹೇಳಿದ್ದೇನು?

ಟೀಸರ್‌ ಬಿಡುಗಡೆ ವೇಳೆ ನಟ ಪೃಥ್ವಿ ಅಂಬಾರ್‌ ಮಾತನಾಡಿ, ʼʼಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್‌ ಫುಲ್‌ ಸ್ಟ್ರಾಂಗ್‌ ಕ್ಯಾರೆಕ್ಟರ್‌ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ದು ಈಗ ಈಡೇರಿದೆ. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್‌ ಯಾರು ಎಂದು ಗೊತ್ತಿರಲಿಲ್ಲ. ಕೊನೆಗೊಂದು ದಿನ ಪುಷ್ಪಾ ಅವರ ಹಾಸನದ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ಅವರ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಅವರು ಬ್ಯಾಕ್‌ಗ್ರೌಂಡ್‌ ಇಲ್ಲದವರ ಜತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನೋ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಕ್ಕೆ ಕೆಲಸ ಮಾಡಿದ್ದಾರೆʼʼ ಎಂದು ತಿಳಿಸಿದ್ದರು. ಇನ್ಜು ಕಿರುತೆರೆ ನಟಿ ಕಾವ್ಯಾ ಶೈವ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದ್ದು, ವೀಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಮೂಡುದೆ.