Krithi Bangera: ಬದುಕಿಗೆ ವಿದಾಯ ಹೇಳಿದ ಉಡುಪಿಯ ಖ್ಯಾತ ಮಾಡೆಲ್
Krithi Bangera: 27 ವರ್ಷದ ಯುವ ಪ್ರತಿಭೆ ಕೃತಿ ಬಂಗೇರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಕೃತಿ ಬಂಗೇರಾ -
ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವ ಪ್ರತಿಭೆ ಕೃತಿ ಬಂಗೇರಾ ( Krithi Bangera) ಆತ್ಮಹತ್ಯೆ (model dies by suicide) ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಆದರೆ, ಅವರು ಸುಮಾರು ಐದು ತಿಂಗಳಿನಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಮತ್ತು ಮನೆಯಲ್ಲಿಯೇ ಇದ್ದರು ಎಂದು ವರದಿಗಳು ತಿಳಿಸಿವೆ. ಕೃತಿ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯಲ್ಲಿ ವಾಸಿಸುತ್ತಿದ್ದರು. ತನ್ನ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Oh Sukumari: ಒಟಿಟಿಗೆ ಬರಲಿದೆ ರೊಮ್ಯಾಂಟಿಕ್ ಕಾಮಿಡಿ ಮೂವಿ ʻಓ ಸುಕುಮಾರಿʼ!
ದೂರಿನ ಪ್ರಕಾರ, ಆಕೆಯ ತಾಯಿ ರತ್ನಾ ಆಗಸ್ಟ್ 6 ರಂದು ಕೆಲಸದ ನಿಮಿತ್ತ ಮಲ್ಪೆಗೆ ಹೋಗಿದ್ದರು, ಮತ್ತು ಆಕೆಯ ಸಹೋದರಿ ಕೂಡ ಕೆಲಸದ ನಿಮಿತ್ತ ಉಡುಪಿಗೆ ಹೋಗಿದ್ದರು. ಅಮ್ಮ ರತ್ನಾ ಅವರು ಮನೆಗೆ ಹಿಂತಿರುಗಿದಾಗ ವಿಷಯ ಬೆಳಕಿಗೆ ಬಂದಿದೆ. ಮಗಳ ಕೋಣೆಯಿಂದ ಎಷ್ಟು ಹೊತ್ತಾದರೂ ರೆಸ್ಪಾನ್ಸ್ ಬರದಾಗ ಗಾಬರಿಗೊಂಡಿರುವ ರತ್ನಾ ಅವರು, ತಕ್ಷಣವೇ ತಮ್ಮ ಸಹೋದರನಿಗೆ ಕಾಲ್ ಮಾಡಿದ್ದಾರೆ. ಬಳಿಕ ಬಾಗಿಲನ್ನು ಒಡೆದು ಪ್ರವೇಶಿಸುವ ಹೊತ್ತಿನಲ್ಲಿಯೇ ಕೃತಿ ಕೊನೆಯುಸಿರು ಎಳೆದು ಆಗಿತ್ತು.
ಕೃತಿ ಕಳೆದ ಕೆಲವು ದಿನಗಳಿಂದ ಸಾಕಷ್ಟು ಒತ್ತಡದಲ್ಲಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಆಕೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ: Mithun Chakraborty: ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ್ ಚಕ್ರವರ್ತಿ
ಕೃತಿ ಬಂಗೇರಾ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಅವರು ಪರಿಚಿತರಾಗಿದ್ದರು ಎಂದು ತಿಳಿದುಬಂದಿದೆ.