ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಹೃದಯಾಘಾತವಾಗಿದ್ದು ನಿಜವೇ? ಕುಟುಂಬದವರು ಹೇಳಿದ ಸತ್ಯವೇನು?

ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಸಾಕಷ್ಟು ವೈರಲ್‌ ಆಗಿದೆ. ಫೆಬ್ರವರಿ 24ರಂದು ತಮ್ಮ 63ನೇ ಜನ್ಮದಿನ ಆಚರಿಸಿಕೊಂಡ ಬನ್ಸಾಲಿ, ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಕುರಿತು ಅವರ ತಂಡ ಮತ್ತು ಕುಟುಂಬದವರು ಅಧಿಕೃತ ಸ್ಪಷ್ಟನೆ ನೀಡಿದೆ.

ಸಂಜಯ್ ಲೀಲಾ ಬನ್ಸಾಲಿಗೆ ಹೃದಯಾಘಾತ ಆಯ್ತಾ? ವೈರಲ್ ಸುದ್ದಿಯ ಅಸಲಿಯತ್ತೇನು?

-

Avinash GR
Avinash GR Feb 25, 2026 5:25 PM

ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ಫೆಬ್ರವರಿ 24 ರಂದು ತಮ್ಮ 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದರೆ, ಈ ಸಂಭ್ರಮದ ಕ್ಷಣದಲ್ಲೇ ಅವರ ಆರೋಗ್ಯದ ಬಗ್ಗೆ ಹಬ್ಬಿದ ಗಾಳಿ ಸುದ್ದಿಯು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತು. ಬನ್ಸಾಲಿಗೆ ಜನ್ಮದಿನದಂದೇ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದು ನಿಜವೇ? ಮುಂದೆ ಓದಿ.

ಹುಟ್ಟುಹಬ್ಬದ ದಿನವೇ ಸಂಜಯ್‌ ಲೀಲಾ ಬನ್ಸಾಲಿ ಅವರ ಆರೋಗ್ಯ ಗಂಭೀರವಾಗಿದೆ, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದಾರೆ ಎಂಬ ವರದಿಗಳು ವೈರಲ್‌ ಆದವು. ಇದು ಚಿತ್ರರಂಗದ ಅವರ ಸ್ನೇಹಿತರು, ಗಣ್ಯರು ಹಾಗೂ ಅಭಿಮಾನಿಗಳಲ್ಲಿ ಭಾರಿ ಆತಂಕವನ್ನು ಸೃಷ್ಟಿಸಿತು. ಆದರೆ ಇದೆಲ್ಲವೂ ಸುಳ್ಳು. ಸಂಜಯ್‌ ಲೀಲಾ ಬನ್ಸಾಲಿಗೆ ಏನೂ ಆಗಿಲ್ಲ ಎಂಬ ಮಾಹಿತಿಯನ್ನು ಅವರ ತಂಡವೇ ಹಂಚಿಕೊಂಡಿದೆ.

Actor Allu Arjun: ಮತ್ತೊಮ್ಮೆ ಬಾಕ್ಸ್‌ ಆಫೀಸ್‌ ಶೇಕ್‌ ಮಾಡಲು ಅಲ್ಲು ಅರ್ಜುನ್‌ ಸಜ್ಜು; ಸಂಜಯ್‌ ಲೀಲಾ ಬನ್ಸಾಲಿ ಚಿತ್ರಕ್ಕೆ ಆಯ್ಕೆ ?

ಸಂಜಯ್‌ ಲೀಲಾ ಬನ್ಸಾಲಿ ಟೀಮ್‌ ಹೇಳಿದ್ದೇನು?

ಸಂಜಯ್ ಲೀಲಾ ಬನ್ಸಾಲಿ ಅವರ ತಂಡವೇ ಸ್ಪಷ್ಟನೆ ನೀಡಿದ್ದು. ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. "ಸಂಜಯ್ ಲೀಲಾ ಬನ್ಸಾಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು, ಆಧಾರರಹಿತವಾಗಿದೆ. ಈ ಸುದ್ದಿಯಲ್ಲಿ ಯಾವುದೇ ನಿಜಾಂಶವಿಲ್ಲ. ದಯವಿಟ್ಟು ಇಂತಹ ವದಂತಿಗಳನ್ನು ಹರಡಬೇಡಿ" ಎಂದು ಮನವಿ ಮಾಡಿಕೊಂಡಿದೆ.

ಇದರ ಜೊತೆಗೆ ಬನ್ಸಾಲಿ ಕುಟುಂಬದಿಂದಲೂ ಹೇಳಿಕೆ ಹೊರಬಿದ್ದಿದ್ದು, "ಸಂಜಯ್ ಲೀಲಾ ಬನ್ಸಾಲಿ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಅವರು ರೆಗ್ಯುಲರ್ ವೈದ್ಯಕೀಯ ತಪಾಸಣೆಗೆ ಹೋಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ. ಎಲ್ಲರೂ ತೋರಿಸಿದ ಪ್ರೀತಿ ಮತ್ತು ಕಾಳಜಿಯನ್ನು ನಾವು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇವೆ. ನಿಮ್ಮ ನಿರಂತರ ಬೆಂಬಲ ಮತ್ತು ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು" ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯ ಬನ್ಸಾಲಿ ಅವರು ತಮ್ಮ ಮುಂದಿನ 'ಲವ್ ಅಂಡ್ ವಾರ್' ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ. ಇದೊಂದು ಬಿಗ್ ಬಜೆಟ್ ಸಿನಿಮಾವಾಗಿದ್ದು, ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಟ್‌ನಲ್ಲಿ ಬನ್ಸಾಲಿ ಅವರು ಹುಟ್ಟುಹಬ್ಬದ ಹಿಂದಿನ ದಿನ ರಾತ್ರಿವರೆಗೂ ಕೆಲಸ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.