ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahaan Movie: ʼಮಹಾನ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ʼಬಿಗ್ ಬಾಸ್ʼ ಖ್ಯಾತಿಯ ನಟಿ ನಮ್ರತಾ ಗೌಡ

Mahaan Movie: ಪಿ.ಸಿ. ಶೇಖರ್ ನಿರ್ದೇಶನದ, ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ʼಮಹಾನ್ʼ ಚಿತ್ರದ ಪ್ರಮುಖಪಾತ್ರದಲ್ಲಿ ʼನಾಗಿಣಿʼ ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ ʼಬಿಗ್ ಬಾಸ್ʼ ಖ್ಯಾತಿಯ ನಟಿ ನಮ್ರತಾ ಗೌಡ ಅಭಿನಯಿಸುತ್ತಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ʼಮಹಾನ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ನಮ್ರತಾ ಗೌಡ

-

Profile Siddalinga Swamy Sep 3, 2025 4:14 PM

ಬೆಂಗಳೂರು: ʼನಾಗಿಣಿʼ ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ ʼಬಿಗ್ ಬಾಸ್ʼ ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ. ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ʼಮಹಾನ್ʼ ಚಿತ್ರದ (Mahaan Movie) ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕುರಿತು ನಟ ನಮ್ರತಾ ಗೌಡ ಮಾತನಾಡಿದರು.

ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ನಾನು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ. ಶೇಖರ್ ಅವರು ʼಮಹಾನ್ʼ ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ. ಶೇಖರ್ ನಿರ್ದೇಶಿಸುತ್ತಿದ್ದಾರೆ.

ವಿಜಯ ರಾಘವೇಂದ್ರ, ರಾಧಿಕಾ ಚೇತನ್, ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಟಿ ನಮ್ರತಾ ಗೌಡ.

ಈ ಸುದ್ದಿಯನ್ನೂ ಓದಿ | Fashion News 2025: ಆಜಾದಿ ಮಹೋತ್ಸವ್‌ನಲ್ಲಿ ರ‍್ಯಾಂಪ್‌ ವಾಕ್‌ ಮಾಡಿದ ಮಹಿಳಾಮಣಿಯರು