Malayalam filmmaker: ಅಶ್ಲೀಲ ಮೆಸೇಜ್ - ಮಲಯಾಳಂ ನಿರ್ದೇಶಕನ ವಿರುದ್ಧ ಖ್ಯಾತ ನಟಿ ದೂರು
ನಿರ್ದೇಶನ ಮೂಲಕ ಖ್ಯಾತರಾಗಿದ್ದ ಸನಲ್ ಕುಮಾರ್ ಅವರು ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಚಾಟ್ ಮಾಡುವ ಜೊತೆಗೆ ಕಿರುಕುಳ ನೀಡಿದ್ದ ಆರೋಪದಲ್ಲಿ ಕೇಸ್ ದಾಖಲಿಸಲಾಗಿದೆ. ನಿರ್ದೇಶಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಮತ್ತು ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

Sanal Kumar

ಕೊಚ್ಚಿ: ಖ್ಯಾತ ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದ ಅಡಿ ಮಲಯಾಳಂ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ (Sanal Kumar Sasidharan) ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ದೇಶನ ಮೂಲಕ ಖ್ಯಾತರಾಗಿದ್ದ ಸನಲ್ ಕುಮಾರ್ ಅವರು ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲಿಲವಾಗಿ ಚಾಟ್ ಮಾಡುವ ಜೊತೆಗೆ ಕಿರುಕುಳ ನೀಡಿದ್ದ ಆರೋಪದಲ್ಲಿ ಕೇಸ್ ದಾಖಲಿ ಸಿಲಾಗಿದೆ.
ನಿರ್ದೇಶಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಮತ್ತು ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟಿಯ ಹೆಸರಲ್ಲಿ ಆಕೆಯ ಸಂಬಂಧಿಕರು ದೂರನ್ನು ನೀಡಿದ್ದು ಆ ದೂರಿನ ಮೇಲೆ ಕ್ರಿಮಿನಲ್ ಪ್ರಕರಣ ಹಾಗೂ ವಿವಿಧ ಸೆಕ್ಷನ್ ಅಡಿಯಲ್ಲಿ ಕೊಚ್ಚಿಯ ಎಳಮಕ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದಾಖಲಾದ ಬಳಿಕ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸನಲ್ ಶಶಿಧರನ್ ಎಫ್‌ಐಆರ್ ಪ್ರತಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Hubli News: ಪತ್ನಿ ಕಿರುಕುಳ; ಡಿವೋರ್ಸ್ ಅರ್ಜಿ ವಿಚಾರಣೆ ದಿನವೇ ಪತಿ ಆತ್ಮಹತ್ಯೆ!
ಈ ಹಿಂದೆ ಸನಲ್ ಕುಮಾರ್ ಶಶಿಧರನ್ ಅವರು 2022ರಲ್ಲಿ ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಅವರಿಗೆ ಬೆದರಿಕೆ ಹಾಕಿದ್ದ ಕಾರಣಕ್ಕೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಆನ್ಲೈನ್‌ನಲ್ಲಿ ನಟಿಯೊಬ್ಬರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಸನಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಲಯಾಳಂನಲ್ಲಿ ಅನೇಕ ಹಿಟ್ ಸಿನೆಮಾ ನೀಡುವ ಜೊತೆಗೆ ಅನೇಕ ಪ್ರಶಸ್ತಿಯನ್ನು ಇವರು ಪಡೆದುಕೊಂಡಿದ್ದಾರೆ. ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್‌ನಲ್ಲೂ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿರುವ ಇವರು ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇದ್ದಾರೆ.